ಮೈಸೂರು: ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಹಬಾಜ (26) ಕೊಲೆಯಾದ ಯುವಕ. ಉದಯಗಿರಿ ಬೀಡಿ ಕಾಲೋನಿ ಬಳಿ ಘಟನೆ ನಡೆದಿದೆ.
ಶಹಬಾಜ್ ಗೌಸಿಯಾ ನಗರದ ನಿವಾಸಿ ಜುಬೇರ್ ಎಂಬಾತನಿಂದ ಕೃತ್ಯ ನಡೆದಿದೆ. ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಸಣ್ಣ ಪುಟ್ಟ ವಿಚಾರಕ್ಕೆ ಗಲಾಟೆ ಆಗಿ ಕೊಲೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಉದುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

