ನಂಜನಗೂಡು: ವಿದ್ಯುತ್ ಸ್ಪರ್ಶಿಸಿ ಯುವಕ ಸಾವನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗೌತಮ್ 27 ಮೃತ ದುರ್ದೈವಿ. ಕಾಂಗ್ರೆಸ್ ಪಕ್ಷದಲ್ಲಿ ಯೂತ್ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದ ಗೌತಮ್.

ಬಿಳಿಗಲಿ ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ದೇವಾಲಯದ ಮುಂಭಾಗದಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿತ್ತು. ವಿದ್ಯುತ್ ದೀಪಾಲಂಕಾರ ಅಳವಡಿಸುವ ವೇಳೆ ಎತ್ತರವಾಗಿರುವ ಕಬ್ಬಿಣದ ಪೈಪ್ ಅನ್ನು ನೀಡಲಾಗುತ್ತಿತ್ತು.

ಕಬ್ಬಿಣದ ಪೈಪ್ ಮೇಲೆ ಹಾದುಹೋಗಿರುವ ವಿದ್ಯುತ್ ತಂತಿಗೆ ತಗುಲಿದೆ. ಕಬ್ಬಿಣದ ಪೈಪ್ ಹಿಡಿದು ನಿಂತಿದ್ದ ಗೌತಮ್ ಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ವಿಷಯ ತಿಳಿದ ಸ್ಥಳಕ್ಕೆ ಬಿಳಿಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.