Showing 20 of 2247 posts • Page 10 of 113
ಮತದಾನ ಕೇವಲ 18 ವರ್ಷ ತುಂಬಿದ ಮೇಲೆ ಅಲ್ಲ, ಶಾಲೆಯಿಂದಲೇ ಶುರು ಮಾಡಬೇಕು ಎಂಬ ಸಂದೇಶವನ್ನು ತಿ.ನರಸೀಪುರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೀಡಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಾಯೋಗಿಕವಾಗಿ ಕಲಿಸಲು ‘ಶಾಲಾ ಸಂಸತ್ತು’ ಎಂಬ ವಿನೂತನ ಕಾರ್ಯಕ್ರಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು.
ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ, ಅಂದು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ.
ವಿಕಸಿತ ಭಾರತ ಗ್ಯಾರೆಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯಡಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗಾವಕಾಶ ಕಲ್ಪಿಸಿದ್ದು, ಗ್ರಾಮೀಣ ಭಾಗದ ಪ್ರತಿಯೊಬ್ಬ ಕೂಲಿ ಕಾರ್ಮಿಕರು ಇದರ ಸೌಲಭ್ಯ ಪಡೆದುಕೊಳ್ಳುವಂತೆ ನಂಜನಗೂಡು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಅಭಾವವಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಸೋಮವಾರ ನಂಜನಗೂಡು ನಗರದಲ್ಲಿ ಹೆದ್ದಾರಿ ತಡೆದು ಸಾಂಕೇತಿಕ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026-2027ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶನಿವಾರ ನಡೆಯಿತು.
ಮದ್ಯಪಾನ ಮಾಡಿ ರಸ್ತೆಯಲ್ಲಿ ಪುಂಡರ ಹುಚ್ಚಾಟ ಮೆರೆದಿದ್ದು, ಬಾರ್ ಮುಂಭಾಗದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಣಸೂರಿನ ಬಜಾರ್ ರಸ್ತೆಯ ಅಲಂಕಾರ್ ಬಾರ್ ಎದುರು ನಡೆದಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಬಲಪ್ರಯೋಗವನ್ನು ಖಂಡಿಸಿ ನಂಜನಗೂಡು ತಾಲ್ಲೂಕು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಭಾನುವಾರ ನಂಜನಗೂಡಿನಲ್ಲಿ ಕಪ್ಪು ಪಟ್ಟಿ ಧರಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಆರ್ಬಿಸಿ ಇವೆಂಟ್ ವತಿಯಿಂದ ಆಯೋಜಿಸಲಾದ ಕಿಡ್ಸ್ ಫ್ಯಾಷನ್ ಶೋ ರಾಜ್ಯಮಟ್ಟದ ಸ್ಪರ್ಧೆಯ ಆಡಿಷನ್ ಕಾರ್ಯಕ್ರಮವು ನಂಜನಗೂಡು ನಗರದಲ್ಲಿ ಅದ್ಧೂರಿಯಾಗಿ ನೆರವೇರಿತು.
ಪೆಟ್ರೋಲ್ ಸುರಿದುಕೊಂಡು ಯುವ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ದುರ್ಬಲ ಮಳೆಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಯಾವುದೇ ಭಾಗವು ಕುಡಿಯುವ ನೀರಿನ ಸಮಸ್ಯೆ ಎದುರಿಸದಂತೆ ಎಲ್ಲಾ ಸಂಭಾವ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೃಷ್ಣ ರಾಜ ಸಾಗರ (ಕೆಆರ್ಎಸ್) ಜಲಾಶಯಕ್ಕೆ ಮುಂಗಾರು ನೀರಿನ ಒಳಹರಿವು ಸಾಮಾನ್ಯಕ್ಕಿಂತ ತೀರಾ ಕಡಿಮೆ ಇರುವುದರಿಂದ, ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಗಳಿಗಾಗಿ ಮಾತ್ರ ಕಾಯ್ದಿರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಮತ್ತು ಈ ಋತುವಿನಲ್ಲಿ ಜಲಾಶಯ ನೀರಾವರಿಯನ್ನು ಅವಲಂಬಿಸಿ ಬೆಳೆಗಳನ್ನು ಬೆಳೆಯದಂತೆ ಕೆಆರ್ಎಸ್ ಅಣೆಕಟ್ಟು ಪ್ರದೇಶದ ರೈತರನ್ನು ಒತ್ತಾಯಿಸಿದೆ.
ಬೈಕ್ ಒಂದಕ್ಕೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು -ಹುಲ್ಲಹಳ್ಳಿ ರಸ್ತೆಯ ಕೊಂಗಳ್ಳಿ ಗೇಟ್ ಬಳಿ ನಡೆದಿದೆ.
ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೈಸೂರಿನ ಉನ್ನತ ಪೊಲೀಸ್ ಅಧಿಕಾರಿಗಳು ಇಂದು ಬೆಳಿಗ್ಗೆ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಹೊಸದಾಗಿ ನಿರ್ಮಿಸಲಾದ ವಿವೇಕ ಸ್ಮಾರಕ – ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ (ವಿವೇಕ ಸ್ಮಾರಕ) ವನ್ನು ಪರಿಶೀಲಿಸಿದರು.
ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿರುವ ‘ಬೆಂಗಳೂರಿನಾಚೆಗೆ’ ಎಂಬ ಶೀರ್ಷಿಕೆಯ ಮೈಸೂರು ಬಿಗ್ ಟೆಕ್ ಶೋ-2026 ಅನ್ನು ಇಂದು ಬೆಳಿಗ್ಗೆ ಹೂಟಗಳ್ಳಿಯಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಉದ್ಘಾಟಿಸಲಾಯಿತು.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ ಈ ಬಾರಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.
ಬ್ಯಾಂಗಲ್ ಸ್ಟೋರ್ ನಲ್ಲಿ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಂಜನಗೂಡಿನ ಆರ್. ಪಿ ರೋಡ್ ನಲ್ಲಿ ನಡೆದಿದೆ.
ಚಾಕು ಹಿಡಿದ ಯುವಕನೊಬ್ಬ ರಸ್ತೆಯಲ್ಲಿ ಓಡಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಕೋಟೆಹುಂಡಿಯಲ್ಲಿ ಹಿರಿಯರಿಗೆ ಪ್ರೀತಿಯ ಆಶ್ರಯ ತಾಣವೊಂದು ಕಾರ್ಯನಿರ್ವಹಿಸುತ್ತಿದೆ.
ಜಿಲ್ಲೆಯ ಸರಗೂರು ತಾಲ್ಲೂಕಿನ ದಡದಹಳ್ಳಿ ಗ್ರಾಮದ ರೈತ ಮಹಿಳೆಯೊಬ್ಬರ ಜಮೀನಿನಲ್ಲಿ ಕಳೆದ 4 ದಿನಗಳಿಂದ ತಂಗಿದ್ದ ಆನೆ ಮರಿಯೊಂದು ಬೆಳೆಯನ್ನು ತಿಂದು ತುಳಿದು ಸುಮಾರು 3 ಲಕ್ಷ ರೂ. ನಷ್ಟ ಉಂಟು ಮಾಡಿದೆ.
ನಗರ ಮತ್ತು ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು.