Showing 20 of 2255 posts • Page 104 of 113
ಬೇರೆ ಅಂಗಾಂಗಗಳ ಆರೋಗ್ಯಕ್ಕೆ ನೀಡುವಷ್ಟು ಪ್ರಾಮುಖ್ಯತೆಯನ್ನು ಬಾಯಿಯ ಆರೋಗ್ಯಕ್ಕೂ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕಿ ಡಾ.ಬಿ.ಮಲ್ಲಿಕಾ ಸಲಹೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರ ವಾಸಿನಿ ಆವರಣದಲ್ಲಿ ನವೆಂಬರ್ 24ರಂದು ರಾಮಾನುಜ ವಿಶ್ವವಿದ್ಯೋತ್ಸವ ನಮ್ಮ ನಡೆ ರಾಮಾನುಜರ ಕಡೆಗೆ ಎಂಬ 108 ಶಂಖನಾದ ಮೊಳಗಿಸುವ ಮೂಲಕ ಧಾರ್ಮಿಕ ವೇದಘೋಷ ನಡೆಯಲಿದೆ ಎಂದು ಸಮಿತಿಯ ಸಂಚಾಲಕರಾದ ಯೋಗನರಸಿಂಹ (ಮುರುಳಿ) ತಿಳಿಸಿದರು.
ಮೈಸೂರು ಮತ್ತು ಹಂಪಿಯಂತಹ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರತ್ಯೇಕ ಪ್ರವಾಸಿ ಸ್ನೇಹಿ ಪೊಲೀಸ್ ಘಟಕವನ್ನು ಸ್ಥಾಪಿಸುವ ಯೋಜನೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಕಟಿಸಿದರು.
ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.
ಒಂದೆಡೆ ಹೊಟ್ಟೆಗೆ ಅನ್ನವಿಲ್ಲದೆ ತುತ್ತು ಕೂಳಿಗೂ ಪರದಾಡುವ ಜನರ ನಡುವೆ ಆಹಾರವನ್ನು ತೊಟ್ಟಿಗೆ ಎಸೆಯುವವರೂ ಇದ್ದಾರೆ.
ರೈತ ವಿರೋಧಿ ನೀತಿಗಳನ್ನು ವಾಪಸ್ಸು ಪಡೆಯುತ್ತೇನೆ ಎಂದು ಹೇಳಿ ಇನ್ನೂ ವಾಪಸ್ಸು ಪಡೆಯದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರಾಜ್ಯದ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ರಾಲಿಯನ್ನು ನ.26 ಮೈಸೂರಿನಲ್ಲಿ ಟೌನ್ ಹಾಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಪಿ.ಐ ಎಂ ಎಲ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಡಳ್ಳಿ ಜವರಯ್ಯ ತಿಳಿಸಿದರು.
ಕೃಷಿಗಾಗಿ ಸಾಲ ಮಾಡಿ ನಷ್ಟ ಹೊಂದಿದ್ದ ರೈತರು ಸಾಲ ಮರುಪಾವತಿ ಮಾಡುವಂತೆ ಬಂದಿದ್ದ ನೋಟೀಸ್ ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕು ಕಸಬಾ ಹೋಬಳಿ ಕನುಗನಹಳ್ಳಿಯಲ್ಲಿ ನಡೆದಿದೆ.
ಚಾಮುಂಡಿ ಬೆಟ್ಟದಲ್ಲಿರುವ ನಂದಿ ವಿಗ್ರಹಕ್ಕೆ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ನಗರದ ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಹಾಭಿಷೇಕವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ 100 ಲಿವರ್ ಕಸಿಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಎನ್.ಜಿ.ಭರತೀಶ ರೆಡ್ಡಿ ತಿಳಿಸಿದರು.
ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ತಮ್ಮ ಸ್ವಂತ ಕಾಲಿನಲ್ಲಿ ನಿಲ್ಲಬೇಕು ಎಂದು ಜೆ ಎಸ್ ಎಸ್ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ. ಬಿ.ವಿ.ಶಾಂಭ ಶಿವಯ್ಯ ಕಿವಿಮಾತು ಹೇಳಿದರು.
ಮೈಸೂರು ತಹಶೀಲ್ದಾರ್ ಎಂ.ಮಹೇಶ್ ಕುಮಾರ್ ಅವರು ಶುಕ್ರವಾರ ಜೈಪುರದ ಮಧೂರು ಪ್ರದೇಶಕ್ಕೆ ಭೇಟಿ ನೀಡಿ ಬಗರ್ ಹುಕುಂ ಯೋಜನೆಯಡಿ ರೈತರಿಗಾಗಿ ನಡೆಯುತ್ತಿರುವ ಭೂ ವಿವಾದ ಪರಿಹಾರ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ರಾಜ್ಯದಾದ್ಯಂತ ಮದ್ಯ ಮಾರಾಟವನ್ನು ಇದೇ ತಿಂಗಳ 20ರಂದು ಬಂದ್ ಗೊಳಿಸಿ ಪ್ರತಿಭಟಿಸುವ ಕರೆ ನೀಡಿದ ಬೆನ್ನಲ್ಲೇ ಮೈಸೂರಿನಲ್ಲಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ ಅಸೋಸಿಯೇಷನ್ ಕರೆ ನೀಡಿರುವ ಮದ್ಯದಂಗಡಿ ಬಂದ್ಗೆ ನಮ್ಮ ಬೆಂಬಲವಿಲ್ಲ ಎಂದು ರಾಜ್ಯ ಲಿಕ್ಕರ್ ಮರ್ಚೆಂಟ್ ಡೆವಲಪ್ಮೆಂಟ್ ಕೋ-ಅಪರೇಟಿವ್ ಸೊಸೈಟಿ ಹೇಳಿದೆ.
ಸುರಕ್ಷಿತ ಮತ್ತು ಆರೋಗ್ಯಕರ ಬಾಲ್ಯವನ್ನು ಉತ್ತೇಜಿಸುವುದು, ಮಕ್ಕಳ ಹಕ್ಕುಗಳನ್ನು ಗುರುತಿಸಿ ಅದನ್ನು ಎತ್ತಿಹಿಡಿಯುವ ಜವಾಬ್ದಾರಿ ನಮ್ಮದಾಗಿದೆ ಎಂದು ಸಮರ್ಥನಂ ಸಂಸ್ಥೆಯ ಹಿತೈಷಿ ಡಾ.ಕೆ.ರಂಗರಾಜು (ಮುರಳಿ) ತಿಳಿಸಿದರು.
ಮುಂಬರುವ ಉಪಚುನಾವಣೆಯ ನಂತರ ಬಿಜೆಪಿ ಶಾಸಕ ಬಿ.ನಾಗೇಂದ್ರ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಗಲ್ಲಿಗಳಲ್ಲಿ ಗಾಂಜಾ ಸರಬರಾಜಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದ ಬೆನ್ನಲ್ಲೇ ನಗರದ ಉದಯಗಿರಿ ಠಾಣೆ ಪೊಲೀಸರು ಭರ್ಜರಿ ಬೇಟೆಯಾಡಿದ್ದು ಸುಮಾರು 38.60 ಲಕ್ಷ ಮೌಲ್ಯದ 154 ಕೆಜಿ 450 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಬಾರಿ ಮುಂಗಾರು ಮತ್ತು ಹಿಂಗಾರು ಮಳೆ ಆಶಾದಾಯಕವಾಗಿ ಸುರಿದ ಪರಿಣಾಮ ಅರಣ್ಯ ಪ್ರದೇಶಗಳು ಹಸಿರಿನಿಂದ ಕಂಗೊಳಿಸುತ್ತಿದ್ದು ಆ ಸುಂದರ ದೃಶ್ಯಗಳನ್ನು ನೋಡುವುದೇ ಮನಕ್ಕೊಂದು ಉಲ್ಲಾಸ.
ಸಿದ್ಧರಾಮಯ್ಯ ವ್ಯಕ್ತಿ ಅಲ್ಲ, ಶಕ್ತಿ ಎಂದು ಗುರುತಿಸಲು ಕಾರಣ ಎಚ್.ಡಿ.ದೇವೇಗೌಡರು. ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ನೀವಲ್ಲ, ನಾಡಿನ ಜನರು ಎನ್ನುವುದನ್ನು ಅರಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.
ಕೊಟ್ಟಿಗೆಯಲ್ಲಿ ಹಸುವನ್ನು ಕಟ್ಟಿಹಾಕಿ ಅಲ್ಲಿಯೇ ರೈತ ಮಲಗಿದ್ದ ವೇಳೆ ದಾಳಿ ನಡೆಸಿದ ಹುಲಿ ಹಸುವನ್ನು ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.