Showing 20 of 2247 posts • Page 111 of 113
ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟನೆ ಮಾಡಿದರು.
ಮಾಸ್ತಿ ಕನ್ನಡ ಸಾಹಿತ್ಯ ಸಂಸ್ಕೃತಿಯ ಪ್ರವರ್ಧಮಾನಕ್ಕೆ ತಮ್ಮ ಬದುಕನ್ನ ಸಮರ್ಪಿಸಿಕೊಂಡವರು. ಕಥೆ ಕಾದಂಬರಿ ಕವಿತೆ ನಾಟಕ ವಿಮರ್ಶೆ ಅನುವಾದ ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ 123 ಕ್ಕೂ ಹೆಚ್ಚು ಕೃತಿ
ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೇಸ್ನ ಆಯನೂರು ಮಂಜುನಾಥ್ , ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಕಣದಲ್ಲಿ ಇದ್ದರು.
ಲೋಕಸಭಾ ಚುನಾವಣೆ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.
ಕಳೆದ ಒಂದು ವಾರದಿಂದ ಪ್ರತಿ ದಿನ ಮಳೆಯಾಗುತ್ತಿದ್ದು ಪೂರ್ವ ಮುಂಗಾರು ನಿರೀಕ್ಷೆಯಂತೆ ಅಬ್ಬರಿಸದ ಕಾರಣ ಕಂಗಲಾಗಿದ್ದ ತಾಲೂಕಿನ ರೈತರಲ್ಲಿ ಹರ್ಷ ತಂದಿದೆ.
ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಭರ್ಜರಿ ಗೆಲವು ಸಾಧಿಸಿದರೆ.
ಮನೆಯಲ್ಲಿ ಕಡು ಬಡತನ ಅಡೆದ ತಂದೆ ತಾಯಿ ಮತ್ತು ಪತ್ನಿ ಮಕ್ಕಳನ್ನು ಸಾಕಿ ಸಲುಗುವ ಸಲುವಾಗಿ ನಂಜನಗೂಡು ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದಕ್ಕೆ ಕೆಲಸಕ್ಕೆಂದು ತೆರಳಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರು ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.
ರಾಜ್ಯ ಸರ್ಕಾರದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಸರ್ಕಾರಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷೆ ಲತಾ ಮುದ್ದುಮೋಹನ್ ಒತ್ತಾಯಿಸಿದ್ದಾರೆ.
ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವ ಮೂಲಕ ಆಚರಣೆ ಮಾಡಲಾಯಿತು.
ಮೈಸೂರು ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದ ಯದುವೀರ್ ಅವರು 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯ ಸಾಧಿಸಿದ್ದಾರೆ. ಸಿ ಎಂ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ನಾಯಕನ ಆಡಳಿತ ನಡೆಯಲಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ಗೆ 1,64,337 ಮತಗಳನ್ನು ಪಡೆದಿದ್ದು ಮುನ್ನಡೆ ಸಾಧಿಸಿದ್ದಾರೆ.
ಮಾಡದ ತಪ್ಪಿಗೆ ನನ್ನನ್ನ ಹೊಣೆ ಮಾಡಿದ್ದಾರೆಂದು ಆರೋಪಿಸಿ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಖ್ಯಾತ ಕಾನೂನು ತಜ್ಞ ಪ್ರೊ. ಅಜ್ಜಪ್ಪ (95) ಅವರು ವಯೋಸಹಜವಾಗಿ ಇಂದು ವಿಧಿವಶರಾಗಿದ್ದಾರೆ .ಇಂದು ಅವರ ಮೈಸೂರಿನ ಕುವೆಂಪು ನಗರದ ಅನಿಕೇತನ ರಸ್ತೆಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಗೃಹಪ್ರವೇಶ ಸಮಾರಂಭದಲ್ಲಿ ಊಟ ಸೇವಿಸಿದ್ದ ಗ್ರಾಮದ ಜನ ಅಸ್ವಸ್ಥರಾಗಿರುವ ಘಟನೆ ಮೈಸೂರು ತಾಲೂಕು ಮಾರ್ಬಳ್ಳಿಯಲ್ಲಿ ನಡೆದಿದೆ.
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಂಜನಗೂಡು ನಗರದ ಪರಶುರಾಮ ದೇವಾಲಯದ ಬಳಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಇಂದು ಮತದಾನ ನಡೆಸಲಾಗುತ್ತಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಎಂಎಲ್ಸಿ ಟಿಕೆಟ್ ನೀಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫಲಿತಾಂಶ ಅಷ್ಟೇ ನಮ್ಮ ನಿರೀಕ್ಷೆ. ಸಚಿವ ಸ್ಥಾನದ ಬಗ್ಗೆ ಮುಂದೆ ನೋಡೋಣ ಎಂದು ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.