Showing 20 of 2247 posts • Page 112 of 113
ನಗರದ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ಸ್ನೇಹ ಬಳಗದ ವತಿಯಿಂದ ಜೂ 4ರಂದು ಮಂಗಳವಾರ ಇಡೀ ದೇಶವೇ ಕಾಯುತ್ತಿರುವ ಲೋಕಸಭಾ ಫಲಿತಾಂಶದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿ
ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಯತೀಂದ್ರ ಅವರು ಟಿ ನರಸೀಪುರಕ್ಕೆ ಆಗಮಿಸಿದ್ದ ವೇಳೆ ಈ ವಿಚಾರವನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ.
ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ಕೊಂಗಹಳ್ಳಿ ಗ್ರಾಮದ ಬಳಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸ್ಕಾಲರ್ಸ್ ಅಕಾಡೆಮಿ ಎಂಬ ನೂತನ ಶಾಲೆಯನ್ನು ಸಂಸದ ಪ್ರತಾಪ್ ಸಿಂಹ ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು.
ರಾಂಪುರ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಾಲಾಕಿ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ನಂಜನಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಚಾಮಲಾಪುರ ಸರ್ವೆ ನಂ. 203, 204, 205, ಜಮೀನಿಗೆ ಸಂಬಂಧಿಸಿದ ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡವರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಬಿಸಿ ಮುಟ್ಟಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 ಮತ್ತು 25 ನೇ ಸಾಲಿನ ಮಕ್ಕಳ ಶಾಲಾ ದಾಖಲಾತಿ ಆಂದೋಲನಕ್ಕೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪಾರ್ವತಿ ಚಾಲನೆ ನೀಡಿದರು.
ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಜಲಜೀವನ್ ಮಿಷನ್ ಯೋಜನೆಯ ಪೈಪುಗಳು ಧಗ ಧಗನೇ ಹೊತ್ತಿ ಉರಿದ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟ ಘಟನೆ ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ನಡೆದಿದೆ. ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ.
ಬೇಕರಿಯೊಂದರ ಪೀಠೋಪಕರಣಗಳನ್ನು ಮೂವರು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುರಾ ಗ್ರಾಮದಲ್ಲಿ ನಡೆದಿದೆ.
ಮಳೆಯಿಂದ ರೈತರಿಗೆ ಉಂಟಾಗಿರುವ ಬೆಳೆ ನಾಶದ ಪರಿಹಾರ ಒದಗಿಸಿ ಕೊಡುವ ಸಂಬಂಧ ಪಿರಿಯಾಪಟ್ಟಣ ತಾಲೂಕಿನ ವಿವಿಧ ಸ್ಥಳಗಳಿಗೆ ತಹಶೀಲ್ದಾರ್ ಸುರೇಂದ್ರ ಮೂರ್ತಿ ಭೇಟಿ ನೀಡಿದರು.
ಸಮಾಜ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯವಾಗಿದ್ದು, ಆರ್ಥಿಕವಾಗಿ ದುರ್ಬಲರಾದ ಬಡವರು ಹಾಗೂ ಸಮಾಜದ ಏಳ್ಗೆಗೆ ಅದ್ಯತೆ ಇರಲಿ.
ಗ್ಲೂಕೋ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ರಾಸಾಯನಿಕ ಯುಕ್ತ ನೀರನ್ನು ರೈತರ ಜಮೀನು ಮತ್ತು ಕಾಲುವೆಗೆ ಹರಿಸುತ್ತಿರುವ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಯಿಗಳ ದಾಳಿಗೆ ಎರಡು ಜಿಂಕೆಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ನಡೆದಿದೆ. ಬೀದಿನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾಗಿತ್ತು
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಸುಮಾರು ಹತ್ತಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣದಲ್ಲಿನ ಗಂಭೀರ ಆರೋಪಗಳನ್ನು ಡೈವರ್ಟ್ ಮಾಡುವ ಸಲುವಾಗಿ ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರಗೂರು ತಾಲೂಕಿನ ಮಳೆ ಹಾನಿ ಸಂಭವಿಸಿದ ಪ್ರದೇಶಗಳಿಗೆ ರೈತ ಕಲ್ಯಾಣ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದರಲ್ಲದೆ, ಎನ್ ಡಿ ಆರ್ ಎಫ್ ಮಾರ್ಗಸೂಚಿಯ ನೀತಿ ನಿಯಮದಂತೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಟೈಯರ್ ಸಿಡಿದು ಸಂಪೂರ್ಣವಾಗಿ ಲಾರಿ ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ.
ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಎರಡು ವಾರಗಳಿಂದ ಪೂರ್ವ ಮುಂಗಾರು ಆಶಾದಾಯಕವಾಗಿರುವ ಹಿನ್ನಲೆಯಲ್ಲಿ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಎರಡು ದಿನಗಳಲ್ಲಿ 2 ಅಡಿ ನೀರು ಹೆಚ್ಚಳವಾಗಿದೆ.
ಅಧ್ಯಾಪಕರು ಎಂದರೆ ಶಿಸ್ತು, ಸಂಯಮ, ಕಲಿಸುವ ಗುರುಗಳು, ಆದರೆ ಗುರುಗಳೇ ದಾರಿ ತಪ್ಪಿದರೆ ವಿದ್ಯಾರ್ಥಿ ಸಮೂಹ ಏನಾಗಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ದಾಖಲಾತಿ ಮಾಡಿಸಲು ಬಂದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.