Showing 20 of 2247 posts • Page 15 of 113
ಜೂ.27 ರಂದು ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಜಯಂತಿ ಹಾಗೂ ಜು.2 ರಂದು ನಡೆಯಲಿರುವ ಡಾ.ಫ.ಗು ಹಳೆಕಟ್ಟೆ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ನಂಜನಗೂಡು ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.
ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವವು ಜೂ.23-2026 ರಿಂದ ಜೂ.30-2026 ರವರೆಗೆ ನಡೆಯಲಿದೆ.
ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕೆ.ಕೌಶಿಕ್ ನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ.
ದ್ವಿತೀಯ ಪಿಯು ವಿಧ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆದಿದೆ.
ಜಯದೇವ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂದೇ ದಿನದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಟ್ಟಗಳ್ಳಿ ಸಮೀಪದ ‘ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ.
ಮೂರು ದಶಕಗಳ ಕಾಲ ಖಾಕಿ ತೊಟ್ಟು ಜನಸೇವೆ ಮಾಡಿದ್ದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೆ.ಗೋಪಾಲಕೃಷ್ಣ ಅವರು ಇತ್ತೀಚೆಗೆ ನಿವೃತ್ತರಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ‘ಕೈ’ ಹಿಡಿದಿದ್ದಾರೆ.
ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಅಂಗಡಿ ನಿರ್ಮಾಣ ಮಾಡುತ್ತಿರುವುದಕ್ಕೆ ಮಾಜಿ ಶಾಸಕ ಬಿ. ಹರ್ಷವರ್ಧನ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಗಟ್ಟವಾಡಿಪುರ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ.
ನೆಸ್ಲೆ ಕಂಪನಿ ಕಾರ್ಮಿಕ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಕಾರ್ಖಾನೆ ಗುತ್ತಿಗೆದಾರ ಮೃತನ ಕುಟುಂಬಕ್ಕೆ 35 ಲಕ್ಷ ಪರಿಹಾರದ ಚೆಕ್ ನೀಡಿದ್ದಾನೆ.
ರೆಸಾರ್ಟ್ ಗೆ ನುಗ್ಗಿ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿ ಬೈಕ್ ಕಿತ್ತುಕೊಂಡು ಪರಾರಿ ಆಗಿದ್ದ ನಾಲ್ವರನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದ ಕಾರ್ಮಿಕನಿಗೆ ನ್ಯಾಯ ಕೋರಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಮಿಕ ಪ್ರಸಾದ್ ಮೇಲೆ ಆಡಳಿತ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಡೆತ್ ನೋಟ್ ಬರೆದಿಟ್ಟು ಕಾರ್ಮಿಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ನಡೆದಿದೆ.
ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ ಪ್ರಭಾರ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್.ರಕ್ಷಿತ್ ರನ್ನ ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಮಾಜಿ ಸಿಎಂ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.
ತಾಲ್ಲೂಕು ಆಡಳಿತ ನಿಷ್ಕ್ರಿಯ ಮತ್ತು ಕಪಿಲಾ ನದಿ ನೀರು ಹರಿಯುತ್ತಿದ್ದರೂ, ನೀರಾವರಿ ಯೋಜನೆಯನ್ನು ರೂಪಿಸಿಲ್ಲ. ನಂಜನಗೂಡು ತಾಲ್ಲೂಕಿನ ಎಲ್ಲಾ ಹೋಬಳಿಗಳಿಗೂ ಸಮಗ್ರ ನೀರಾವರಿ ಯೋಜನೆಯನ್ನು ಜಾರಿಗೆ ತರುವಂತೆ ಆಗ್ರಹಿಸಿ ರೈತರು ಬೃಹತ್ ಬಾರುಕೋಲು ಚಳುವಳಿಯನ್ನು ನಡೆಸುತ್ತಿದ್ದಾರೆ. ಇಂದು ಎರಡನೇ ದಿನಕ್ಕೆ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪೊರಕೆ ಹಿಡಿದು ನಾರಿಯರು ಪ್ರತಿಭಟನೆಗೆ ಧುಮುಕಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಇತ್ತೀಚೆಗೆ ಮೂವರು ವ್ಯಕ್ತಿಗಳು ಮದ್ಯ ಸೇವನೆ ಮಾಡಿದ್ದ ಕೇಸ್ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಮದ್ದೂರು ವಲಯ ಅರಣ್ಯಾಧಿಕಾರಿ ಡಿ. ಪುನೀತ್ ಅವರನ್ನು ಅಮಾನತುಗೊಳಿಸಲಾಗಿದೆ.