Showing 20 of 2247 posts • Page 16 of 113
ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ರೂಪಿಸಬೇಕು. ಹಳಿ ತಪ್ಪಿದ ತಾಲ್ಲೂಕು ಆಡಳಿತದ ವಿರುದ್ಧ ರೈತರು ಸಿಡಿದೆದ್ದು, ಬೃಹತ್ ಬಾರುಕೋಲು ಚಳುವಳಿಯನ್ನು ನಡೆಸಿದರು.
ಎಚ್ ಸಿ ಮಹದೇವಪ್ಪ ರವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಘಟನೆಗಳು ಮತ್ತು ವರುಣ ಕ್ಷೇತ್ರದ ದಲಿತ ಸಮುದಾಯದ ಮುಖಂಡರ ವತಿಯಿಂದ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿದರು.
ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.
ದೇವಿರಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಎರಡು ಅರಳಿ ಮರಗಳ ರಂಬೆ ಕೊಂಬೆಗಳು ಮಕ್ಕಳ ಮೇಲೆ ಯಾವಾಗ ಬೇಕಾದರೂ ಬೀಳುವ ಪರಿಸ್ಥಿತಿ ನಿರ್ಮಾಣವಾಗಿತ್ತು
ದಕ್ಷಿಣ ಕಾಶಿ ನಂಜನಗೂಡು ಪಟ್ಟಣದಲ್ಲಿ ವಿಜೃಂಭಣೆಯಿಂದ ಹನುಮ ಜಯಂತಿಯನ್ನು ಆಚರಣೆ ಮಾಡಲಾಯಿತು.
ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ನಂಜನಗೂಡು ಇವರು ಅಭಿವೃದ್ಧಿಪಡಿಸಲಾದ ದೇವಿರಮ್ಮನಹಳ್ಳಿ ಕೆರೆಯಿಂದ ಅಂತರ್ಜಲ ಮಟ್ಟ ಗಣನೀಯ ಏರಿಕೆಯಾಗುವ ಸಾಧ್ಯತೆ ಇದೆ.
ತಾಲ್ಲೂಕಿನ ಹುಸ್ಕೂರು ಗ್ರಾಮದ 21 ವರ್ಷದ ಹೆಚ್.ಎಂ. ಸೃಜನ್ ಭಾರತೀಯ ಸಶಸ್ತ್ರ ಪಡೆಗಳ ಅಗ್ನಿಪಥ್ ಯೋಜನೆ ಅಡಿ ಅಗ್ನಿವೀರ್ ಆಗಿ ಆಯ್ಕೆಯಾಗಿದ್ದಾರೆ.
ಹನುಮ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ನಂಜನಗೂಡು ನಗರದಾದ್ಯಂತ ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನ ನಡೆಸಿದ್ದಾರೆ.
ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲಾ ವಿಭಾಗ ಸಾಲು ಮರದ ತಿಮ್ಮಕ್ಕ ಇಕೋ ಕ್ಲಬ್ ಮತ್ತು ದಕ್ಷಿಣ ಕಾಶಿ ಚಾರಿಟೇಬಲ್ ಟ್ರಸ್ಟ್ ನಂಜನಗೂಡು ಇವರ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಮತ್ತು ಜಾಗೃತಿ ಜಾಥಾ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತು ಪಡಿಸಲಾಗಿದೆ.
ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಕಾಲವಿದು. ಇದಕ್ಕೆ ಸ್ಪಷ್ಟ ಉದಾಹರಣೆಯಂತೆ ನಂಜನಗೂಡಿನ ದೇವಿರಮ್ಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಹೊರತಾಗಿಲ್ಲ.
ತಾಲ್ಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯವಾಗಿದ್ದು, ರೈತರನ್ನು ಕಛೇರಿಯಿಂದ ಕಛೇರಿಗೆ ಅಲೆದಾಡಿಸುತ್ತಿದ್ದಾರೆ.
ನಂಜನಗೂಡಿನಲ್ಲಿ ಕಾಡುಪ್ರಾಣಿಗಳ ಉಪಟಳ ನಿಯಂತ್ರಣಕ್ಕೆ ಬಂದಿಲ್ಲ. ಗ್ರಾಮಸ್ಥರ ನಿದ್ರೆಗೆಡಿಸುತ್ತಿರುವ ಚಿರತೆ ಸೆರೆಗೆ ಆಗ್ರಹಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಡಿಸಿಎಂ ಸ್ಥಾನಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಯತೀಂದ್ರ ಸಿದ್ದರಾಮಯ್ಯ ಅವರನ್ನು ಡಿಸಿಎಂ ಮಾಡುವಂತೆ ಹೋರಾಟ ನಡೆಯುತ್ತಿದೆ.
ಶಾಸಕ ಅನಿಲ್ ಚಿಕ್ಕಮಾಧುಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ, ಅನಿಲ್ ಚಿಕ್ಕಮಾಧು ಅಭಿಮಾನಿಗಳಿಂದ ಮೈಸೂರಿನ ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಲಾಯಿತು.
ಹಣದ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.
ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಮಗ್ರ ನೀರಾವರಿಗಾಗಿ ಹಾಗೂ ತಾಲ್ಲೂಕು ಆಡಳಿತದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ, ಜೂ.8 ರಂದು ನಂಜನಗೂಡಿನಲ್ಲಿ ಬೃಹತ್ ಬಾರುಕೋಲು ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಹೇಳಿದರು.
ನಂಜನಗೂಡು: ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಡಾ.ಹೆಚ್.ಸಿ ಮಹದೇವಪ್ಪ ರವರ ಅಭಿಮಾನಿಗಳ ಬಳಗ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆದರು ದಲಿತರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತಿಲ್ಲ. […]
ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿಯಲ್ಲಿ ವಾಮಾಚಾರ ನಡೆದಿದ್ದು, ಬೆಳ್ಳಂಬೆಳಿಗ್ಗೆ ತರಗನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.