Showing 20 of 2245 posts • Page 18 of 113
ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ.
ನನ್ನ ತೆರಿಗೆ ಹಣಕ್ಕೆ ಲೆಕ್ಕ ಕೇಳುವ ಅಭಿಯಾನಕ್ಕೆ ನಂಜನಗೂಡಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಕರೆ ನೀಡಿದ್ದಾರೆ.
ಇತಿಹಾಸ ಪ್ರಸಿದ್ಧ ಶ್ರೀ ಅಂಕನಾಥೇಶ್ವರ ದೇವಾಲಯದ ಹುಂಡಿ ಮೂಲೆ ಸೇರಿದ್ದು, ದೇವಾಲಯದ ಹುಂಡಿಗೆ ಹೋಗಬೇಕಿದ್ದ ಕಾಣಿಕೆ ಪೂಜಾರಿಗಳ ತಟ್ಟೆಗೆ ಸೇರುತ್ತಿದ್ದು, ಸರ್ಕಾರಕ್ಕೆ ಪಂಗನಾಮ ಹಾಕಿ ಸ್ವಾಹಾ ಮಾಡಲಾಗಿದೆ.
ಸ್ವಿಫ್ಟ್ ಡಿಸೈರ್ ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಲಕಾಡು ಮುಖ್ಯರಸ್ತೆಯ ಚೌಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸುತ್ತೇವೆ.
ಆನ್ಲೈನ್ ನಲ್ಲಿ ಔಷಧಿಗಳನ್ನು ಮಾರಾಟ ಮಾಡುವುದನ್ನು ವಿರೋಧಿಸಿ ನಂಜನಗೂಡಿನಲ್ಲಿ ಔಷಧಾಲಯ ವರ್ತಕರ ಸಂಘದಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಬಡವರ ಪರ ಕಾಳಜಿ ವಹಿಸಿ ಪಶು ಇಲಾಖೆಯಿಂದ ಬರುವ ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸಿ ಅವರನ್ನು ಬಡತನದ ರೇಖೆಯಿಂದ ಮೇಲೆತ್ತಬೇಕು ಎಂದು ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ.ನಾಗರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ತನ್ನ ಕೊನೆ ಉಸಿರನ್ನ ಎಳೆಯಲು ತಾನು ಹುಟ್ಟಿ ಬೆಳೆದ ಮನೆಗೆ ಬಂದ ವೃದ್ದೆಯೊಬ್ಬರು ಬಾಗಿಲ ಬಳಿ ಆಶ್ರಯ ಪಡೆದು ಕೊನೆಗೆ ಕೊನೆಯುಸಿರೆಳೆದ ಮನಕಲಕುವ ಘಟನೆಯೊಂದು ನಂಜನಗೂಡು ತಾಲ್ಲೂಕು ರಾಂಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಇಟ್ಟಿಗೆ ಕಾರ್ಖಾನೆಯ ಮೇಲ್ಚಾವಣಿ ಧರೆಗುರುಳಿದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯರ ಸಮಸ್ಯೆ ಬಗ್ಗೆ ಸ್ಪಂದಿಸುವ ವೇಳೆ ಗೈರಾದ ಪಿಡಿಒಗೆ ಸಂಸದ ಸುನೀಲ್ ಬೋಸ್ ಮೊಬೈಲ್ ನಲ್ಲೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನ ಬಂಧಿಸಲಾಗಿದ್ದು 10 ಕೆಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಳ್ಳಲಾಗಿದೆ.
ಅಧಿಕಾರಿಗಳಿಗೆ ವರ್ಗಾವಣೆ ಒಂದು ಪ್ಯಾಕೇಜ್ ಆಗಿದೆ. ಯಾರು ಬರ್ತಾರೆ, ಯಾರು ಹೋಗ್ತಾರೆ ಯಾವುದು ಗೊತ್ತಾಗ್ತಾ ಇಲ್ಲ. ಅಧಿಕಾರಿಗಳು ಬಂದ ಮೇಲಷ್ಟೇ ನಮಗೆ ತಿಳಿಯುತ್ತಿದೆ ಎಂದು ಸಂಸದ ಸುನೀಲ್ ಬೋಸ್ ಕಿಡಿಕಾರಿದರು.
ಕೆಡಿಪಿ ಸಭೆಯಲ್ಲಿ ಮೊಬೈಲ್ನಲ್ಲೇ ಮುಳುಗಿದ ಅಧಿಕಾರಿಗಳು..!
ಸಿಡಿಲಿಗೆ ಮಹಿಳೆ ಬಲಿ, ಎರಡು ಹಸುಗಳು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಸ್ವಚ್ಛತಾ ಆಂದೋಲನಕ್ಕೆ ಮ್ಯಾರಥಾನ್ ಮೂಲಕ ಜಾಗೃತಿ ಮೂಡಿಸಲಾಯಿತು.
ನಂಜನಗೂಡಿನಲ್ಲಿ ತೋಟಗಾರಿಕೆ ಇಲಾಖೆಯ ನೂತನ ಹಿರಿಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚನಹಳ್ಳಿ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
ಡಿಸೇಲ್, ಪೆಟ್ರೋಲ್ ಉಳಿತಾಯದ ಬಗ್ಗೆ ಪ್ರಧಾನಿ ಮಾತಿಗೆ ಸಿಎಂ ತಕರಾರು ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕಿರುಗುಂದ ಗ್ರಾಮದಲ್ಲಿ ಶ್ರೀ ಬಿಳಿಗಿರಿ ರಂಗನಾಥಸ್ವಾಮಿಯ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಇಂಪು ಇಂಚರ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ವತಿಯಿಂದ ಏರ್ಪಡಿಸಲಾಗಿದ್ದ ಬಿಳಿಗಿರಿ ರಂಗಯ್ಯನ ನೋಡೋಣ ಬನ್ನಿ ಜನಪದ ಕಲಾಪ್ರದರ್ಶನ, ಜಾನಪದ ಕಥೆ, ಗಾಯನ, ಸುಗಮಸಂಗೀತ, ಕಾರ್ಯಕ್ರಮವನ್ನು ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ಕೆ.ರಂಗಸ್ವಾಮಿ ಉದ್ಘಾಟಿಸಿದರು.