Showing 20 of 2247 posts • Page 2 of 113
ಹುಲಿಗಳ ನಡುವಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂರು ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದ ಕೆರೆ ಬಯಲಿನಲ್ಲಿ ನಡೆದಿದೆ.
ನಗರದ ಅಂಗಡಿ ಬೀದಿಯಲ್ಲಿರುವ ಪಾತ್ರೆ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ನಂಜನಗೂಡಿನ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಬೃಹತ್ ರಂಗೋಲಿ ಬಿಡಿಸುವ ಮೂಲಕ ಹಾಗೂ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಎರಡು ವರ್ಷದ ಹೆಣ್ಣು ಚಿರತೆಯೊಂದು ಸೆರೆಯಾಗಿದೆ.
ಟಿ. ನರಸೀಪುರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಲಿ ಶಾಲು ಹಾಗೂ ಡಿಎಸ್ಎಸ್ ಸಂಘಟನೆ ಕುರಿತು ನೀಡಿರುವ ಹೇಳಿಕೆಗೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬರಪೀಡಿತ ಪ್ರದೇಶದ ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿಯ ದರ್ಶನವಾಗಿದ್ದು, ಪ್ರವಾಸಿಗರು ಸಂತಸಗೊಂಡಿದ್ದಾರೆ.
ಕಾಲೇಜಿಗೆ ಪ್ರವೇಶಿಸಲು ರಸ್ತೆ ಬದಿಯಲ್ಲಿ ನಿಂತಿದ್ದ ಪಾಲಿಟೆಕ್ನಿಕ್ ವಿದ್ಯಾರ್ಥಿಯೊಬ್ಬನ ಮೇಲೆ ವೇಗವಾಗಿ ಬಂದ ಕಾರು ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಉರ್ದು ಭಾಷೆಗೆ ಅಧಿಕೃತ ಭಾಷೆಯ ಮಾನ್ಯತೆ ನೀಡುವಂತೆ ಸಿಎಂ ಡಿಕೆಶಿಗೆ SDPI ಪತ್ರ ಬರೆದಿದ್ದಾರೆ.
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್ ಹಾಗೂ ವಿವಿಧ ಕಾರ್ಯಕ್ರಮಗಳ ಟಿಕೆಟ್ಸ್ ಮಾರಾಟ ಮಾಡಲಾಗುತ್ತದೆ. ಆನ್ ಲೈನ್ ಮೂಲಕ ದಸರಾ ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ಸ್ ಬುಕ್ಕಿಂಗ್ ಗೆ ಅವಕಾಶ ಇದೆ.
ಬಿಜೆಪಿಯವರು ರಣಹದ್ದುಗಳಂತೆ. ಎಲ್ಲಿ ಕೋಮು ಗಲಭೆ ನಡೆಯುತ್ತದೆಯೋ ಅಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಕುಡಿಯುವ ನೀರಿಲ್ಲ, ಶೌಚಾಲಯಗಳು ದುಸ್ಥಿತಿ, ಪ್ರಯೋಗಾಲಯಗಳಲ್ಲಿ ಸಲಕರಣೆಗಳಿಲ್ಲ, ಗ್ರಂಥಾಲಯವೂ ಇಲ್ಲ. ಹೀಗೆ ಸಾಲು ಸಾಲು ಸಮಸ್ಯೆಗಳ ನಡುವೆ ನಂಜನಗೂಡಿನ ದೇಬೂರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನ 178ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಅಂಗವಾಗಿ ನಂಜನಗೂಡು ತಾಲ್ಲೂಕು ಸ್ವೀಪ್ ಚಟುವಟಿಕೆಗೆ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಅವರು ಚಾಲನೆ ನೀಡಿದರು.
ಟಿ ನರಸೀಪುರ ಇನ್ಸ್ಪೆಕ್ಟರ್ ಧನಂಜಯ ಹೇಳಿಕೆಯನ್ನು ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ.
ನಗರದ ದೇಬೂರು ಸರ್ಕಾರಿ ಆದರ್ಶ ಪದವಿಪೂರ್ವ ಕಾಲೇಜಿನ ಮುಂಭಾಗದಲ್ಲಿ ಸಾರಿಗೆ ಬಸ್ಗಳು ನಿಲುಗಡೆ ಮಾಡದಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ತಾಲ್ಲೂಕಿನ ಹೆಗ್ಗಡಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಹೆಚ್.ಬಿ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಅಜ್ಜಿ ಮನೆಗೆ ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕರೆ ನೀಡಿದ್ದ ‘ನಿರುದ್ಯೋಗ ದಿನ’ ಆಚರಣೆಯ ಅಂಗವಾಗಿ ಮೈಸೂರು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇನ್ಸ್ಪೆಕ್ಟರ್ ಧನಂಜಯ ಧಮ್ಕಿಗೆ ಸವಾಲ್ ಹಾಕಿದ್ದು, ಇಂದು ಟಿ. ನರಸೀಪುರದಲ್ಲಿ ಗಣಪತಿ ಶೋಭಾಯಾತ್ರೆ ನಡೆಯಲಿದೆ.
MDCC ಬ್ಯಾಂಕ್ ಮುಂದೆ ಹುಣಸೂರು ರೈತರು ಪ್ರತಿಭಟನೆ ನಡೆಸಿದರು. ಸಾಲ ನೀಡದ MDCC ಬ್ಯಾಂಕ್ ಕಾರ್ಯವೈಖರಿಗೆ ಬೇಸತ್ತು ವಿಷ ಕುಡಿಯಲು ರೈತರು ಮುಂದಾದರು.