Showing 20 of 2245 posts • Page 20 of 113
ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಪತಿ ಗಾಯಗೊಂಡ ಘಟನೆ ನಂಜನಗೂಡಿನ ಫ್ಲೈ ಓವರ್ ಬಳಿ ನಡೆದಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಾಳಿ ಕುಡಿದರೆ ಜೀವಕ್ಕೆ ಗ್ಯಾರಂಟಿ ಇಲ್ಲ. ರಿಪೋರ್ಟ್ ನೋಡಿ ಮೈಸೂರಿಗರು ಭಯಭೀತರಾಗಿದ್ದಾರೆ. ಕಲುಷಿತ ಗಾಳಿಯಲ್ಲಿ ಬೆಂಗಳೂರನ್ನೂ ಮೈಸೂರು ಮೀರಿಸುತ್ತಿದೆ. ಮೈಸೂರು ನಿವೃತ್ತರ ಸ್ವರ್ಗವಲ್ಲ, ಇದೀಗ ರೋಗಗಳ ತಾಣವಾಗಿದೆ.
ಮೈಸೂರಿನ ವಿನಾಯಕನಗರ ಮಾತೃಮಂಡಳಿ ವೃತ್ತದ ಸಬ್ ವೇ ನಲ್ಲಿ ಅನಾಥ ಶವ ಪತ್ತೆಯಾಗಿದೆ.ಅತಿಯಾದ ಮಧ್ಯಪಾನ ಸೇವಿಸಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಭಾರತ ದೇಶವನ್ನು ಕಟ್ಟಲು ಯುವಕರು ಮುಂದಾಗಬೇಕು. ಯಾವುದೇ ಜಾತಿ ಮತ್ತು ಧರ್ಮಕ್ಕೆ ಅಂಟಿಕೊಳ್ಳದೆ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವಕರು ಪಣತೊಡಬೇಕು ಎಂದು ಬೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಡಾ.ರಮೇಶ್ ಬಾಬು ವಿ.ಆರ್ ಕರೆ ನೀಡಿದರು.
ಮೇ.1 ರಂದು ಶುಕ್ರವಾರ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ವಿಶ್ವಕ್ಕೆ ಶಾಂತಿ ಸಾರಿದ ಭಗವಾನ್ ಗೌತಮ ಬುದ್ಧರ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದು ಧಮ್ಮ ಧ್ವನಿ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಆರ್ ಮಹದೇವ್ ಹೇಳಿದರು.
ಭಾರತೀಯ ಜನತಾ ಪಾರ್ಟಿ ಮೈಸೂರು ನಗರ ಕೃಷ್ಣರಾಜ ಕ್ಷೇತ್ರದ ಮಹಿಳಾ ಮೋರ್ಚಾದ ವತಿಯಿಂದ ಇಂದು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಬೇಕಿದ್ದ “ನಾರಿ ಶಕ್ತಿ ವಂದನ್ ಅಧಿನಿಯಮ “ಎಂಬ ಮಹಿಳಾ ಮೀಸಲಾತಿ ಕಾಯಿದೆಗೆ ವಿರೋಧ ವ್ಯಕ್ತ ಪಡಿಸಿದ ಕಾಂಗ್ರೆಸ್ ಹಾಗೂ ಮೈತ್ರಿ ಕೂಟದ ವಿರುದ್ಧ ಕುವೆಂಪು ನಗರದ ಅಂಬೇಡ್ಕರ್ ವೃತ್ತದಿಂದ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಕಛೇರಿಯ ವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಇರಾನ್ ಇಸ್ರೇಲ್ ನಡುವಿನ ಯುದ್ಧದ ಭೀಕರತೆ ಗ್ಯಾಸ್ ಸರಬರಾಜಿಗೆ ಸಾಕಷ್ಟು ಎಡವಟ್ಟು ಮಾಡಿದೆ. ಮೈಸೂರು ಜಿಲ್ಲೆಯಲ್ಲಂತೂ ಗ್ಯಾಸ್ ಅಭಾವ ನಾಗರೀಕರ ನಿದ್ದೆ ಕೆಡಿಸಿದೆ. ಗ್ಯಾಸ್ ಸಪ್ಲೈ ಇಲ್ಲದೆ ಜನ ಪರದಾಡುವಂತಾಗಿದೆ.
ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ 15 ತಿಂಗಳಲ್ಲಿ 421 ಶಿಶು ಮರಣ ಹೊಂದಿದೆ. ಮಾಜಿ ಶಾಸಕ ಎಲ್.ನಾಗೇಂದ್ರ ದಾಖಲೆ ಬಿಡುಗಡೆ ಮಾಡಿದ್ದಾರೆ. ಎಸ್ಎನ್ಸಿಯುಗೆ 3,486 ನವಜಾತಶಿಶುಗಳು ದಾಖಲಾಗಿದೆ.
ತಿ. ನರಸೀಪುರ ತಾಲ್ಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ ಬಿ. ಆರ್.ಅಂಬೇಡ್ಕರ್ ರವರ 135ನೇ ಜನ್ಮದಿನಾಚರಣೆ ಅಂಗವಾಗಿ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಭೀಮೋತ್ಸವನ್ನು ಆಚರಿಸಲಾಯಿತು.
ಬಾಬಾ ಸಾಹೇಬ್ ಡಾ.ಬಿಆರ್ ಅಂಬೇಡ್ಕರ್ ರವರ ಕನಸಿನ ಸಮ ಸಮಾಜ ನಿರ್ಮಾಣವಾಗಲಿ, ದೇಶದಲ್ಲಿ ಜಾಗೃತ ಸಮಾಜ ನಿರ್ಮಾಣವಾಗಬೇಕು ಎಂದು ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಿ.ಬಸವರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
: ವಿವಿಧ ಬೇಡಿಕೆಗೆ ಆಗ್ರಹಿಸಿ ತಾಲೂಕು ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯೋ ವಿಚಾರದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಹಾವು ಕಡಿದು ಬಾಲಕ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲ್ಲೂಕು ಕಂಪಲಾಪುರದಲ್ಲಿ ನಡೆದಿದೆ.
ಸಾರ್ವಜನಿಕರ ಕುಂದುಕೊರತೆಗಳನ್ನು ಅಧಿಕಾರಿಗಳು ಆಲಿಸಿ, ಆದಷ್ಟು ಬೇಗ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡಿ, ವರುಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನು ಅಭಿವೃದ್ಧಿ ಪಡಿಸುವುದು ನನ್ನ ಗುರಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವಕೀಲರ ಸಂಘದಿಂದ ನ್ಯಾಯಾಲಯದ ಆವರಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಕಮಲಾಕ್ಷ ಡಿ ರವರು ಉದ್ಘಾಟಿಸಿದರು.
ಸ್ಯಾಂಟ್ರೋ ಕಾರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಏ.14 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತೋತ್ಸವ ದಿನವೇ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ಖಂಡನೀಯ. ಕೂಡಲೇ ಕಿಡಿಗೇಡಿಯನ್ನು ಬಂಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ನಗರದ ನಂಜನಗೂಡು ಮತ್ತು ಊಟಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಕಣ್ಮುಚ್ಚಿ ಕುಳಿತಿರುವ ನಂಜನಗೂಡು ನಗರಸಭಾ ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಟಾಪರ್ ಆಗಿದ್ದಾರೆ. ಸರ್ಕಾರಿ ಶಾಲೆಯ ಕೀರ್ತಿಯನ್ನು ಮಾಧುರಿ ಆರ್ ಹೆಚ್ಚಿಸಿದ್ದಾರೆ.