Showing 20 of 2245 posts • Page 21 of 113
SSLCಯಲ್ಲಿ ನಿರೀಕ್ಷೆಯಂತೆ ಅಂಕ ಬರದ ಹಿನ್ನೆಲೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದರೂ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾರೆ. ನಂಜನಗೂಡಿನ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಬಾಲಕಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿಗೆ ಶೇ.93.96 ರಂದು ಫಲಿತಾಂಶ ಬಂದಿದ್ದು, ಆದರ್ಶ ವಿದ್ಯಾಲಯದ ಡಿ.ಎಂ ಚೈತ್ರ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬೇಸಿಗೆಯ ಬಿರು ಬಿಸಿಲಿಗೆ ಕಪಿಲೆಯ ಒಡಲು ಬರಿದಾಗಿ ನೀರಿನ ಪ್ರಮಾಣ ಕುಸಿದ ಹಿನ್ನಲೆ ಭೋರ್ಗರೆದು ಹರಿಯುತ್ತಿದ್ದ ಕಪಿಲೆ ಈಗ ತಣ್ಣಗಾಗಿದ್ದಾಳೆ.ಈ ಮಧ್ಯೆ ನಂಜನಗೂಡಿನ ಸುತ್ತಮುತ್ತಲ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ತ್ಯಾಜ್ಯ ಹಾಗೂ ಕೊಳಚೆ ನೀರು ಕಪಿಲೆಯ ಒಡಲು ಸೇರುತ್ತಿದೆ.
ಕಾಡಾನೆಗಳ ಹಿಂಡಿನಿಂದ ತಪ್ಪಿಸಿಕೊಳ್ಳಲು ಹೋದ ಕರ್ತವ್ಯ ನಿರತ ಅರಣ್ಯ ರಕ್ಷಕ ಕಬಿನಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾಚರಣೆ ನಡೆಯುತ್ತಿದ್ದು, ದೇವನೂರು ಗ್ರಾಮದಲ್ಲಿ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆದಿದೆ.
ತಾಲೂಕಿನ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಹಾಡಹಗಲೇ ಕಳ್ಳರು ಕೈಚಳಕ ತೋರಿಸಿದ್ದು ಮನೆಯ ಬೀಗ ಒಡೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ (Gold) ಹಾಗೂ ನಗದು ದೋಚಿರುವ ಘಟನೆ ವರದಿಯಾಗಿದೆ.
ನಗರದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಶ್ರೀ ಪರಶುರಾಮ ಕ್ಷೇತ್ರದ ಸುತ್ತ ಅಶುಚಿತ್ವ ತಾಂಡವವಾಡುತ್ತಿದ್ದು ಸ್ವಚ್ಛಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಡಾ. ಬಿ.ಆರ್ ಅಂಬೇಡ್ಕರ್ ರವರ ಕನಸುಗಳನ್ನು ನನಸು ಮಾಡಲು ಯುವ ಸಮೂಹ ಮುಂದಾಗಬೇಕು. ಅಂಬೇಡ್ಕರ್ ರವರ ಜಯಂತಿಗಳನ್ನು ಆಚರಣೆ ಮಾಡುವುದಲ್ಲ ಅವರನ್ನು ಅನುಸರಿಸುವುದು ಮುಖ್ಯ ಎಂದು ಪತ್ರಕರ್ತರಾದ ಸಿ.ಎಂ ಸುಗಂಧರಾಜು ಕರೆ ನೀಡಿದರು.
ನಂಜನಗೂಡು: ಪ್ರಸ್ತುತ ದಿನಗಳಲ್ಲಿ ಬಸವಣ್ಣರವರ ವಿಚಾರಧಾರೆಗಳು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. ನಂಜನಗೂಡು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಬಸವಣ್ಣನವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಯಾರು ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡವರಿದ್ದಾರೆ ಅವರಿಗೆ ಸಹಾಯ ಮಾಡಬೇಕು. ಸಮಾಜದಲ್ಲಿ ಯಾವುದೇ ಅಪೇಕ್ಷೆ ಇಲ್ಲದೆ ತಮ್ಮ ಕೆಲಸ ಕಾರ್ಯಗಳನ್ನು ಕರ್ತವ್ಯಗಳನ್ನು ಮಾಡಬೇಕು. ಬಸವಣ್ಣನವರ ತತ್ವಗಳಾದ ಕಾಯಕವೇ ಕೈಲಾಸ ಮತ್ತು […]
ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ.
ಕಾವೇರಿ ನದಿಯಲ್ಲಿ ಈಜಲು ಹೋಗಿ ಆರು ಜನ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರ ವಾಗಿರುವ ಘಟನೆ ಕೆ ಆರ್ ನಗರ ಪಟ್ಟಣದ ಸಮೀಪದ ಹಳೆ ಎಡತೊರೆ ಅರ್ಕೇಶ್ವರ ಸ್ವಾಮಿ ಸಮೀಪದ ಕಾವೇರಿ ನದಿಯಲ್ಲಿ ನಡೆದಿದೆ.
ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ವ್ಯಾಘ್ರನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸೆರೆ ಹಿಡಿಡಿದ್ದಾರೆ.
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಲೆ ಮಾಡಿದ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.
ಮೈಸೂರಿನ ಬೋಗಾದಿಯ ಧ್ಯಾನ ಸಾಧನದಲ್ಲಿ ಶುಕ್ರವಾರ, ಎಪ್ರಿಲ್ 17, 2026 ರಂದು ನಡೆದ 16ನೇ ಪ್ರೊವಿನ್ಶಿಯಲ್ ಚಾಪ್ಟರ್ (ಮಹಾಧಿವೇಶನ) ನಲ್ಲಿ ಡಿಸ್ಕಾಲ್ಸ್ಡ್ ಕಾರ್ಮೆಲೈಟ್ಸ್ ಸಭೆಯ ಕರ್ನಾಟಕ-ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಸುಪೀರಿಯರ್ ಆಗಿ ವಂದನೀಯ ರೆ| ಡಾ. ಜಾನ್ ಫ್ರಾನ್ಸಿಸ್ ಸಿಕ್ವೇರಾ, ಒಸಿಡಿ, ಆಯ್ಕೆಯಾಗಿದ್ದಾರೆ.
ಮನೆಯ ಕೊಠಡಿಯಲ್ಲಿ ಚಿರತೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.
ಹೆಡಿಯಾಲ ಅರಣ್ಯ ಪ್ರದೇಶದ ಹಾದನೂರು ಗ್ರಾಮದ ಹೊರವಲಯದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದೆ. ಕಾಡಿನಿಂದ ನಾಡಿನತ್ತ ಧಾವಿಸಿ ಗ್ರಾಮಸ್ಥರ ನಿದ್ದೆ ಕೆಡಿಸಿದೆ. ಬೆಳ್ಳಂ ಬೆಳಗ್ಗೆ ಜಮೀನು ಮಧ್ಯ ಕಾಣಿಸಿಕೊಂಡ ಹುಲಿ ಗ್ರಾಮಸ್ಥರನ್ನ ಕಂಗಾಲು ಮಾಡಿದೆ.
ಡೀಲಿಮಿಟೇಷನ್ ಮಾಡುವ ಮೂಲಕ ದಕ್ಷಿಣ ಭಾರತಕ್ಕೆ ಮೋಸ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರವಾಗಿ ಆರೋಪಿಸಿದ್ದಾರೆ. ಡಿಲಿಮಿಟೇಷನ್ ನಿಂದ ಭಾರತ 100 ವರ್ಷ ಹಿಂದಕ್ಕೆ ಹೋಗುತ್ತ ಎಂದು ಪ್ರಶ್ನಿಸಿದರು. ಶೇ 50 ರಷ್ಟು ಜಾಸ್ತಿ ಮಾಡುತ್ತೇವೆ ಎಂದಿದ್ದಾರೆ.
ದ್ವಿತೀಯ ಪಿಯುಸಿ ಮರು ಪರೀಕ್ಷೆ ಕಟ್ಟಲು ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದು, ಮೂರು ದಿನಗಳಿಂದ ಸರ್ವರ್ ಡೌನ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆತಂಕ ಸೃಷ್ಟಿಯಾಗಿದೆ.
ಇರಾನ್ ಮತ್ತು ಇಸ್ರೇಲ್ ಯುದ್ಧದಿಂದ ಸಿಲಿಂಡರ್ ಗ್ಯಾಸ್ ಗಾಗಿ ಸಾರ್ವಜನಿಕರು ಪರದಾಡುತ್ತಿರುವುದು ಒಂದೆಡೆಯಾದರೆ, ನಂಜನಗೂಡಿನಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡು ಗ್ರಾಹಕರಿಗೆ ಬರುವ ಸಿಲಿಂಡರ್ ಗ್ಯಾಸ್ ಗಳನ್ನು ಬ್ಲಾಕ್ ನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಹಕರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸುತ್ತಾರೆ.