Showing 20 of 2247 posts • Page 22 of 113
ದ್ವಿತೀಯ ಪಿಯುಸಿ ಮರು ಪರೀಕ್ಷೆ ಕಟ್ಟಲು ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದು, ಮೂರು ದಿನಗಳಿಂದ ಸರ್ವರ್ ಡೌನ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆತಂಕ ಸೃಷ್ಟಿಯಾಗಿದೆ.
ಇರಾನ್ ಮತ್ತು ಇಸ್ರೇಲ್ ಯುದ್ಧದಿಂದ ಸಿಲಿಂಡರ್ ಗ್ಯಾಸ್ ಗಾಗಿ ಸಾರ್ವಜನಿಕರು ಪರದಾಡುತ್ತಿರುವುದು ಒಂದೆಡೆಯಾದರೆ, ನಂಜನಗೂಡಿನಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡು ಗ್ರಾಹಕರಿಗೆ ಬರುವ ಸಿಲಿಂಡರ್ ಗ್ಯಾಸ್ ಗಳನ್ನು ಬ್ಲಾಕ್ ನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಹಕರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸುತ್ತಾರೆ.
ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.
ಒಂದೇ ತಿಂಗಳಿನಲ್ಲಿ ನಂಜನಗೂಡಿನ ನಂಜುಂಡೇಶ್ವರ 2 ಕೋಟಿ ರೂ. ಒಡೆಯನಾಗಿದ್ದಾನೆ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಇದ್ದ ಎಲ್ಲ ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ಚಿನ್ನಾಭರಣವನ್ನು ದೇವಸ್ಥಾನದ ದಾಸೋಹ ಭವನದಲ್ಲಿ ದೇವಸ್ಥಾನದ ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿಗಳು ಎಣಿಕೆ ಮಾಡಿದರು.
ಎರಡು ಉಪ ಚುನಾವಣೆ ನಾವು ಗೆಲ್ಲುತ್ತೇವೆ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದರು.
ಯತೀಂದ್ರ ವಸೂಲಿ ಮಾಡ್ತಿದ್ದಾರೆ ಎಂಬ ಹೆಚ್ ಡಿಕೆ ಆರೋಪ ವಿಚಾರವಾಗಿ ಹೆಚ್ ಡಿಕೆ ಹೇಳಿಕೆಗೆ ಮೈಸೂರಿನಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಇಡಿ ಅವರಿಗೆ ಅರ್ಜಿ ಹಾಕಲು ಲೋಕಲ್ ಸ್ಟ್ಯಾಂಡ್ ಇಲ್ಲ.
ಅಂಬೇಡ್ಕರ್ ಅಥವಾ ಕುವೆಂಪುರವರ ಪ್ರತಿಮೆ ಸ್ಥಾಪನೆ ಆಗಬೇಕಿದ್ದ ವಿವಾದಿತ ಜಾಗದಲ್ಲಿ ಪೊಲೀಸರ ಕಾರು ಪಾರ್ಕಿಂಗ್ ಆಗಿದೆ. ಮೈಸೂರಿನ ಪ್ರತಿಷ್ಠಿತ ಸರ್ಕಲ್ ಮಾತೃಮಂಡಳಿ ವೃತ್ತದಲ್ಲಿ ಕಂಡು ಬಂದ ದೃಶ್ಯ ಇದು. ವೃತ್ತದ ಮಧ್ಯಭಾಗದಲ್ಲಿ ಕಾರ್ ನಿಂತಿದೆ.
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮದಿನ ಆಚರಣೆ
ಇಸ್ರೇಲ್ ಇರಾನ್ ಹಾಗೂ ಅಮೆರಿಕ ಯುದ್ಧದ ಪರಿಣಾಮ ನಂಜನಗೂಡಿನಲ್ಲಿ ಸಿಲಿಂಡರ್ ಗಾಗಿ ಗ್ರಾಹಕರು ದಿನನಿತ್ಯ ಪರದಾಡುತ್ತಿದ್ದಾರೆ. ನಗರದ ಶ್ರೀ ನಂಜುಂಡೇಶ್ವರ ಇಂಡಿಯನ್ ಗ್ಯಾಸ್ ಏಜೆನ್ಸಿ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್ ವರ್ಕ್, ರೀಲ್ಸ್ ಗಳಲ್ಲಿ ಬಳಸಿ, ಲಕ್ಷಾಂತರ ಹಣ ಗಳಿಸಿ ಬಲವಂತವಾಗಿ ಲಿಂಗ ಬದಲಾವಣೆಗೆ ನಡೆಸಿದ ಹುನ್ನಾರಕ್ಕೆ ಬೇಸತ್ತು ಖದೀಮರ ಕಪಿಮುಷ್ಠಿಯಿಂದ ಹೊರಬಂದ ಯುವಕನಿಗೆ ವಾಪಸ್ ದಂಧೆಗೆ ಬರುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಅಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಸುಮಾರು 340 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶಿಲ್ಪ ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.89.58 ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಚಂದು ಶೇ.91 ರಷ್ಟು ಫಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಸರಳಾ ಹೇಳಿದರು.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ಹೇಳಿದರು.
ಶ್ರವಣ ದೋಷವಿದ್ದರೂ ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ್ದಾನೆ. ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೆ.ಮಹದೇವ ಪ್ರಸಾದ್ ಎಂಬ ವಿದ್ಯಾರ್ಥಿಯೂ 600 ಅಂಕಗಳಿಗೆ 529 ಅಂಕಗಳನ್ನು ಗಳಿಸಿದ್ದಾನೆ.
ಶ್ರೀ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ನಂತರ ತಾಲೂಕಿನ ಹುಲ್ಲಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಶ್ರೀಮತಿ ಪೂಜಾ (24) ಎಂಬುವವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಮಾತು ಬಾರದ, ಕಿವಿ ಕೇಳದ ವ್ಯಕ್ತಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಿತ್ರವೆಂದರೆ ಬಂಧಿತ ಆರೋಪಿಗಳೂ ಕಿವಿ ಕೇಳದ, ಮಾತು ಬಾರದವರೇ ಆಗಿದ್ದಾರೆ.
ಮಾನವೀಯ ಸಂಬಂಧ ಗಟ್ಟಿಗೊಳಿಸುವ ಜಾನಪದ ಕಲೆಗೆ ತನ್ನದೇ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸುವುದು ಮುಖ್ಯವಾಗಬೇಕು ಎಂದು ನಾದಗಂಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕಳಲೆ ದೇವಣ್ಣ ಹೇಳಿದರು.
ತಾಲೂಕಿನ ಸಿಎಂ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಶುಲ್ಲಕ ಕಾರಣಕ್ಕೆ ವಿಶೇಷ ಚೇತನನಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ, ಕ್ರಮ ಕೈಗೊಳ್ಳುವಂತೆ ತಾಲೂಕಿನ ವಿಕಲಚೇತನರ ಒಕ್ಕೂಟದಿಂದ ತಹಶೀಲ್ದಾರ್ ಅವರಿಗೆ ಮಂಗಳವಾರ ದೂರು ಸಲ್ಲಿಸಿದರು.
ಯುದ್ಧದ ಎಫೆಕ್ಟ್ ದಕ್ಷಿಣ ಕಾಶಿ ನಂಜನಗೂಡಿಗೂ ತಟ್ಟಿದ್ದು, ಗೃಹ ಉಪಯೋಗಿ ಗ್ಯಾಸ್ ಸಿಲಿಂಡರ್ ಗಾಗಿ ಗ್ರಾಹಕರು ಪರದಾಡುತ್ತಿದ್ದಾರೆ. ನಂಜನಗೂಡಿನ ಶ್ರೀ ಚೌಡೇಶ್ವರಿ ಇಂಡಿಯನ್ ಗ್ಯಾಸ್ ಏಜೆನ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.