Showing 20 of 2247 posts • Page 23 of 113
ಕಾಯಕಯೋಗಿ ಪ್ರಾದೇಶಿಕ ದಿನಪತ್ರಿಕೆಯಿಂದ ನೀಡುವ ವಾರ್ಷಿಕ “ಕಾಯಕಯೋಗಿ” ಪ್ರಶಸ್ತಿಯನ್ನು ಪತ್ರಕರ್ತ ಸಿಎಂ ಸುಗಂಧರಾಜುರವರಿಗೆ ನೀಡಿ ಗೌರವಿಸಲಾಯಿತು.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಯನ್ನು ಕೊಂದು ತಲೆ ಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತಿ.ನರಸೀಪುರ ಮುಖ್ಯ ರಸ್ತೆಯ ಮೇಗಳಾಪುರ ಗ್ರಾಮದಲ್ಲಿ ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ವಿಶೇಷ ಚೇತನನಿಗೆ ಥಳಿಸಿರುವ ಘಟನೆ ತಾಲೂಕಿನ ತಗಡೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ಮುದ್ದು ಮಾದೇಗೌಡ (40) ಗಾಯಗೊಂಡಿದ್ದು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪಿನಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದ್ದು, ಆರು ಜನ ಮುಸ್ಲಿಂ ಯುವಕರ ಮೇಲೆ ಮುಸ್ಲಿಂ ಯುವಕರಿಂದಲೇ ಹಲ್ಲೆ ನಡೆಸಿರುವ ಘಟನೆ ನಂಜನಗೂಡಿನ ನೀಲಕಂಠ ನಗರದಲ್ಲಿ ನಡೆದಿದೆ.
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಚೈತ್ರ ಶುದ್ಧ ಹುಣ್ಣಿಮೆ ಅಂಗವಾಗಿ ಹನುಮಜಯಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಮೈಸೂರು ರೈಲ್ವೆ ವಿಭಾಗವು ತನ್ನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 449.13 ಕೋಟಿ ರೂಪಾಯಿಗಳ ಆದಾಯಗಳಿಸಿದೆ. ಅತಿ ಹೆಚ್ಚಿನ ಪ್ರಯಾಣಿಕ ಆದಾಯವನ್ನು ಗಳಿಸಿದ್ದು, ಹಿಂದಿನ ₹419.89 ಕೋಟಿ ದಾಖಲೆಯನ್ನು ಮೀರಿಸಿದೆ. ಟಿಕೆಟ್ ಪರಿಶೀಲನೆ ಮೂಲಕ ₹9.75 ಕೋಟಿ ಆದಾಯವನ್ನು ಗಳಿಸಿದ್ದು, ಇದು ಹಿಂದಿನ ದಾಖಲೆ ಮತ್ತು ವಾರ್ಷಿಕ ಗುರಿಯನ್ನೂ ಮೀರಿದೆ ಈ ಮೂಲಕ ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿಯಾಗಿದೆ.
ಎಗ್ಗಿಲ್ಲದೆ ಮೈಸೂರಿನಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ರಾಜ್ಯದ ಮೂಲೆ ಮೂಲೆಗಳಿಂದ ಮೈಸೂರಿಗೆ ಬಂದು ಜೂಜಾಟ ಮಾಡುತ್ತಿದ್ದಾರೆ. ಲಕ್ಷ ಲಕ್ಷ ಹಣ ಹಾಕಿ ಜೂಜಾಟವಾಡುವ ದೃಶ್ಯ ಲಭ್ಯವಾಗಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಐತಿಹಾಸಿಕ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿಯಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ತೆಪ್ಪೋತ್ಸವವು ಬುಧವಾರ ರಾತ್ರಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
ಏಪ್ರಿಲ್ 1 ರಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾದ ದಿನವಾಗಿದ್ದು, ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರು ಆರ್ಬಿಐ ಸ್ಥಾಪನೆಗೆ ನೀಡಿರುವ ಕೊಡುಗೆಗಳ ಸ್ಮರಣಾರ್ಥವಾಗಿ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಸಹಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳು ಎಂಬ ವಿಷಯದ ಬಗ್ಗೆ ನಂಜನಗೂಡು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.
ಆಟವಾಡುತ್ತಿದ್ದ ಬಾಲಕನಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಾಯಗೊಂಡ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಹುಣಸೂರು ತಾಲ್ಲೂಕು ಶಬ್ಬೀರ್ ನಗರದಲ್ಲಿ ನಡೆದಿದೆ.
ನಂಜನಗೂಡು ವಿಧಾನಸಭಾ ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರ 31ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಂಸದರಾದ ದಿವಂಗತ ಆರ್. ಧ್ರುವನಾರಾಯಣ್ ರವರ ಪುತ್ಥಳಿಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರಿಗೆ ನೀಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ರಾಗಿ ಒಕ್ಕಣೆ ಯಂತ್ರ ಮುಖಾಮುಖಿ ಡಿಕ್ಕಿಯಾಗಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ದೊಡ್ಡಜಾತ್ರೆ ಸಂಭ್ರಮಕ್ಕೆ ತೆರೆಬಿದ್ದಿದೆ. ನಾಡಿನ ವಿವಿಧ ಭಾಗಗಳಿಂದ ಆಗಮಿಸಿ ಶ್ರೀಕಂಠೇಶ್ವರನ ದರುಶನ ಪಡೆದ ಲಕ್ಷಾಂತರ ಭಕ್ತರು ಪುನೀತರಾದರು.
ನುಗು ಜಲಾಶಯದ ಬಳಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸರಗೂರು ತಾಲೂಕಿನ ನುಗು ಜಲಾಶಯದಲ್ಲಿ ಕಾಡಿನಿಂದ ನಾಡಿಗೆ ಕಾಡಾನೆಗಳು ಬಂದಿದೆ.
ಗೌತಮ ಪಂಚ ಮಹಾ ರಥೋತ್ಸವದ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರೆಯನ್ನು ವೀಕ್ಷಿಸಲು ಬಂದಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ದಾಸವಾಳ ಹೂ ನುಂಗಿ ಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕು ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ದಕ್ಷಿಣ ಕಾಶಿ ಎಂದೇ ಖ್ಯಾತಿಗಳಿಸಿರುವ ವಿಶ್ವ ವಿಖ್ಯಾತ ನಂಜನಗೂಡು ದೊಡ್ಡಜಾತ್ರಾ ಮಹೋತ್ಸವದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ಗೌತಮ ಪಂಚ ಮಹಾ ರಥೋತ್ಸವ ವಿಜೃಂಭಣೆಯಿಂದ ಜರುಗಿತು.