Showing 20 of 2247 posts • Page 24 of 113
ಕರ್ನಾಟಕ ರಾಜ್ಯ ಮಹಾನಾಯಕ ಭೀಮರಾವ್ ಪತ್ತಿನ ಸಹಕಾರ ಸಂಘದ ರಾಜ್ಯಾಧ್ಯಕ್ಷರಾಗಿ ಚಿನ್ನಂಬಳ್ಳಿ ಸಿಆರ್ ಮಹದೇವ್ ಆಯ್ಕೆಯಾಗಿದ್ದಾರೆ.
ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಟಿ ನರಸೀಪುರ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಚಿರತೆ ಸಂಚಾರದ ದೃಶ್ಯ ಸೆರೆಯಾಗಿದೆ.
ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಸಾರ್ವಜನಿಕರ ಆಕ್ರೋಶ ವಿಚಾರವಾಗಿ ಮೈಸೂರಿನಲ್ಲಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಸದನದಲ್ಲಿ ಹೈ ಕಮಾಂಡ್ ಅವಕಾಶ ಕೊಟ್ಟರೆ ನಾನೇ ಇನ್ನೆರಡು ಬಜೆಟ್ ಮಂಡನೆ ಮಾಡುತ್ತೇನೆ ಎಂಬ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಬೈ ಎಲೆಕ್ಷನ್ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಎರಡು ಕಡೆ ನಾವು ಗೆಲ್ಲುತ್ತೇವೆ. ನಾನು ಕೂಡ ಪ್ರವಾಸ ಹೋಗುತ್ತಿದ್ದೇನೆ. ಬಾಗಲಕೋಟೆ, ದಾವಣಗೆರೆ ಎಲ್ಲಾ ಕಡೆ ಹೋಗುತ್ತೇನೆ ಎಂದರು.
ದ್ವಿಭಾಷಾ ನೀತಿ ಜಾರಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹಿಂದಿ ಭಾಷೆ ಕಡ್ಡಾಯ ಮಾಡಬಾರದು ಅಂತ ಹೇಳಿದ್ದೇವೆ. ಈ ವರ್ಷದಿಂದಲೇ ಜಾರಿಯಲ್ಲಿರತ್ತೆ, ಸರ್ಕಾರ ತೀರ್ಮಾನ ಮಾಡಿದೆ ಎಂದರು
ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತಿ ಸ್ವಚ್ಛತಾಗಾರರ ದಿನಾಚರಣೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.
ಮಾ.30 ರಂದು ನಡೆಯುವ ಐತಿಹಾಸಿಕ ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ರಥೋತ್ಸವದ ವೇಳೆ ಡ್ರೋನ್ ಕ್ಯಾಮೆರಾಗಳ ಹಾರಾಟವನ್ನು ನಿಷೇಧಿಸಿ ಆದೇಶ ನೀಡಲಾಗಿದೆ.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾ. 30 ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಗೌತಮ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾ ರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಹುಸಿಬಾಂಬ್ ಸಂದೇಶ ನೀಡಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಸಿಂಥೆಟಿಕ್ ಡ್ರಗ್ಸ್ ಮೈಸೂರಿನಲ್ಲಿ ಪತ್ತೆಯಾಗಿದೆ. ಹುಣಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಹುಣಸೂರು ತಾಲೂಕಿನ ದಾಸನಪುರ ರತ್ನಪುರಿ ಮಾರ್ಗಮಧ್ಯದ ತೋಟದಲ್ಲಿ ಪತ್ತೆಯಾಗಿದೆ.
ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ಹುರುಳಿಗೆ ಸಿಲುಕಿ ಗಂಡು ಹುಲಿಯೊಂದು ಮೃತ ಪಟ್ಟ ಘಟನೆ ಹೆಚ್.ಡಿ.ಕೋಟೆ ತಾಲೋಕಿನ ಅಗಸನಹುಂಡಿಯಲ್ಲಿ ನಡೆದಿದೆ.
ಈ ಮೊದಲು ಜಾನುವಾರು ಪ್ರಾಂಗಣದಲ್ಲಿ ವಾರದ ಸಂತೆ ನಡೆಯುತ್ತಿತ್ತು. ಕೋವಿಡ್ ಬಂದ ಸಂದರ್ಭದಲ್ಲಿ ಶುಕ್ರವಾರದ ಸಂತೆಯನ್ನು ಸ್ಥಗಿಸಿಗೊಳಿಸಲಾಗಿತ್ತು. ರೈತರ ಬೇಡಿಕೆ ಮೇರೆಗೆ ಇಂದಿನಿಂದ ಶುಕ್ರವಾರದ ಸಂತೆಯನ್ನು ಪ್ರಾರಂಭಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು.
ದಕ್ಷಿಣ ಕಾಶಿ ನಂಜನಗೂಡು ದೊಡ್ಡ ಜಾತ್ರ ಮಹೋತ್ಸವ ಹಿನ್ನೆಲೆಯಲ್ಲಿ ಮಾ.30 ರಂದು ನಡೆಯುವ ಶ್ರೀ ನಂಜುಂಡೇಶ್ವರ ಸ್ವಾಮಿಯವರ ಗೌತಮ ಪಂಚ ಮಹಾ ರಥೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದೆ.
ಕೊನೆಗೂ ನಂಜನಗೂಡು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕಪಿಲಾ ನದಿ ದಂಡೆಯ ಸರ್ಕಾರಿ ಜಮೀನಿನಲ್ಲಿ ಬೆಳೆದಿದ್ದ ಭಾರಿ ಮರಗಳಿಗೆ ಕೊಡಲಿ ಹಾಕಿದ ಆರೋಪಿಯೊಬ್ಬನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಚ್ ಡಿ ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಜಕ್ಕಳ್ಳಿ ಸಮೀಪ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ ಗೆ ಬೆಂಕಿ ತಗಲಿ, ಲಕ್ಷಾಂತರ ರೂಪಾಯಿ ವೆಚ್ಚದ ಗುಜುರಿ ಸಾಮಾನುಗಳು ಬೆಂಕಿಯ ಕೆನ್ನಾಲಿಗೆಯಿಂದ ನಾಶವಾಗಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ ಮಾ.30-2026 ರಂದು ನಡೆಯಲಿದೆ.
ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸೀನಿಯರ್ ವೈದ್ಯೆ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಪ್ರತಿ ಗ್ರಾಮಗಳ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಮ್ಮ ವಾರ್ಡ್ಗಳ ಮತ ಪಟ್ಟಿಗಳನ್ನು ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.
ತಾಲ್ಲೂಕಿನ ಕಾಳಿಹುಂಡಿ ಗ್ರಾಮದಲ್ಲಿ ಕುರುಬನಕಟ್ಟೆ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಘನನೀಲಿ ಸಿದ್ದಪ್ಪಾಜಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಸಿದ್ದಪ್ಪಾಜಿ ಕೊಂಡೋತ್ಸವ ನೆರವೇರಿತು.