Showing 20 of 2247 posts • Page 25 of 113
ಜಡ್ಜಿಸ್ಟ್ ನಾಗಮೋಹನ್ ದಾಸ್ ರವರ ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಈ ವರದಿ ರದ್ದುಪಡಿಸಬೇಕೆಂದು ಆಗ್ರಹಿಸಿ ಪಟ್ಟಣದ ಕರ್ನಾಟಕ ಪ್ರದೇಶ ದಲಿತ ಜಾಗೃತಿ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಬೃಹತ್ ಮರ ಧರೆಗೆ ಉರುಳಿದ್ದು, ಮರದ ಕೆಳಗಿದ್ದ ಒಂದು ಕಾರ್, ಆಟೋ ಜಖಂ ಆಗಿರುವ ಘಟನೆ ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಮುಂದಿನ ವರ್ಷದಿಂದ ಗರಳಪುರಿ ಉತ್ಸವವನ್ನು ಇನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಅದ್ದೂರಿಯಾಗಿ ಮಾಡಲಾಗುತ್ತದೆ. ತಾಲ್ಲೂಕಿನಲ್ಲಿರುವ ಕಲಾವಿದರನ್ನು ಗುರುತಿಸಲು ವೇದಿಕೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಅಡ್ರೆಸ್ ಇಲ್ಲದ ರಸ್ತೆ, ಅಡಿಗಡಿಗೂ ಗುಂಡಿಯಾಗಿರುವ ಘಟನೆ ಹುಣಸೂರು ತಾಲ್ಲೂಕಿನ ಹಲವು ಗ್ರಾಮಗಳ ರಸ್ತೆಯಾಗಿದೆ. ರಸ್ತೆ ಗುಂಡಿ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಯಿತು.
ಕಬಿನಿ ಕಾಡಿನಲ್ಲಿ ಹುಲಿ ಮರಿಗಳ ಕಲರವ ಕಂಡುಬಂದಿದ್ದು, ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದೆ. ಕಾಡಿನ ಮಣ್ಣಿನ ಸುವಾಸನೆ ಸವಿದು ಪುಟ್ಟ ಹುಲಿ ಮರಿಗಳು ಮೈಮರೆತಿದೆ.
ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ನಂಜನಗೂಡಿನ ಕಲ್ಲು ಮಂಟಪಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಹಿಂಭಾಗದಲ್ಲಿರುವ ಕಲ್ಲು ಮಂಟಪದಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿದೆ.
ಯೋಗ, ಧ್ಯಾನ ಮಾಡುವುದು ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಂಜನಗೂಡು ಬಿ.ವಿ ಪಂಡಿತ್ ಧನ್ವಂತರಿ ಆರೋಗ್ಯಾಶ್ರಮದ ಆಯುರ್ವೇದ ವೈದ್ಯೆ ಡಾ. ಎನ್.ಆರ್ ಸುಷ್ಮಿತಾ ಕಿವಿಮಾತು ಹೇಳಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಆ ಮೂಲಕ ಯುಗಾದಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.
ನಾಡಿನಾದ್ಯಂತ ಚಂದ್ರಮಾನ ಯುಗಾದಿಯ ಸಡಗರ ಮನೆ ಮಾಡಿದ್ದು, ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ತಿರುಮಕೂಡಲು ನರಸೀಪುರದ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪುಣ್ಯಸ್ನಾನ ಮಾಡುವ ಮೂಲಕ ಹೊಸ ವರ್ಷವನ್ನು ಭಕ್ತಿಭಾವದಿಂದ ಸ್ವಾಗತಿಸಿದರು.
ಯುಗಾದಿ ಸಂಭ್ರಮದಲ್ಲಿ ಇಸ್ಪೀಟ್ ಆಟಕ್ಕೆ ಬನ್ನೂರು ಪೊಲೀಸರು ಬ್ರೇಕ್ ಹಾಕಿದ್ದಾರೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡಜಾತ್ರಾ ಮಹೋತ್ಸವ ಅಂಗವಾಗಿ ನಂಜನಗೂಡಿನಲ್ಲಿ ಇಂದಿನಿಂದ ಗುರಳಾಪುರಿ ಉತ್ಸವವನ್ನು ಏರ್ಪಡಿಸಲಾಗಿದೆ.
ಬುಡುಬುಡುಕೆಯವರು ಮನೆಗೆ ನುಗ್ಗಿ ಚಿನ್ನದ ಸರ ಲಪಟಾಯಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮನೆ ಕೆಲಸ ಮಾಡುವ ಸರಸ್ವತಿ ಎಂಬುವರು ಪ್ರಕರಣ ದಾಖಲಿಸಿದ್ದಾರೆ. 1.44 ಲಕ್ಷ ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.
ಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ ಪಿಡಿಓ ಮಂಜುಳಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. 25 ಸಾವಿರ ಲಂಚ ಪಡೆದು ಕಚೇರಿಯಲ್ಲೇ ಮಂಜುಳಾ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಕೆ.ಆರ್ ನಗರ ತಾಲ್ಲೂಕು ಆಡಳಿತದ ವಿರುದ್ಧ ರೈತರು ಕೆ.ಆರ್ ನಗರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟಿಸಿದರು.
ತಾಲ್ಲೂಕಿನಲ್ಲಿ ಚಿರತೆ ಆತಂಕ ಹೆಚ್ಚಾಗಿದ್ದು, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನೆಹುಂಡಿ ಕೂಡ್ಲುರು ರಸ್ತೆ ಬಳಿ ಚಿರತೆ ಪ್ರತ್ಯಕ್ಷವಾಗಿದೆ.
ಮಗುವಿಗೆ ಜನ್ಮ ನೀಡಿ ಮಗುವನ್ನು ನದಿಗೆ ಎಸೆದಿರುವ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಮಾ.30 ರಂದು ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ನಂಜನಗೂಡಿನಲ್ಲಿ ಗರಳಪುರಿ ಉತ್ಸವವನ್ನು ಇದೆ ಮೊಟ್ಟ ಮೊದಲ ಬಾರಿಗೆ ಆಯೋಜಿಸಲಾಗಿದೆ.
ಬ್ಯಾಂಕ್ ಗಳಲ್ಲಿ ಖಾತೆದಾರರು ಉಳಿತಾಯ ಖಾತೆ ತೆರೆದಿದ್ದಾರೆ. ಆದರೆ, ಉಳಿತಾಯ ಮಾಡುತ್ತಿಲ್ಲ, ಇದರಿಂದ ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಹುಟ್ಟಿದ ಒಂದು ತಿಂಗಳ ಮಗುವಿಗೂ ಬ್ಯಾಂಕ್ ಖಾತೆ ತೆರೆಯಲಾಗುತ್ತಿದೆ ಎಂದು ತಗಡೂರು ಭಾರತೀಯ ಸ್ಟೇಟ್ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಕೆ.ಆರ್ ಶ್ಯಾಮ್ ಸುಂದರ್ ತಿಳಿಸಿದರು.
ಮೈಸೂರು ಅಭಿವೃದ್ದಿ ಪ್ರಾಧಿಕಾರ ವಿಶೇಷ ಭೂಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ರವರನ್ನ ವರ್ಗಾವಣೆ ಮಾಡಲಾಗಿದೆ. ಭ್ರಷ್ಟಾಚಾರ ನಿಗೃಹ ದಳದಲ್ಲಿ ಶೃತಿ ರವರು ಕ್ರಿಮಿನಲ್ ಸ್ವರೂಪದ ಅಪರಾಧ ಪ್ರಕರಣ ಎದುರಿಸುತ್ತಿದ್ದು ಇಲಾಖಾ ವಿಚಾರಣೆ ನಡೆಯುತ್ತಿರುವ ಹಿನ್ನಲೆ ಮಾತೃ ಇಲಾಖೆಯಾದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯಕ್ಕೆ ಹಿಂದಿರುಗುವಂತೆ ಸರ್ಕಾರ ಆದೇಶಿಸಿತ್ತು.