Showing 20 of 2247 posts • Page 27 of 113
ಇಸ್ರೇಲ್ -ಇರಾನ್ ನಡುವಿನ ಯುದ್ಧದಲ್ಲಿ ಕನ್ನಡಿಗರ ರಕ್ಷಣೆ ವಿಚಾರವಾಗಿ ಮೈಸೂರಿನಲ್ಲಿ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದರು. ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.
ನರಸೀಪುರದಲ್ಲಿ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಅನಗತ್ಯವಾಗಿ ಕೆಲವರು ಗೊಂದಲ ಸೃಷ್ಟಿಸಿದ್ದಾರೆ. ರೇಷ್ಮೆ ಮಾರುಕಟ್ಟೆಗೆ ಉಪಯೋಗಿಸಲ್ಪಟ್ಟ ಒಂದೂವರೆ ಎಕರೆ ಜಾಗವನ್ನು ಉದ್ಯಾನವನ ಬಳಸಲು ತೀರ್ಮಾನ ಮಾಡಿದ್ದೆವು. ಈಗ ಮತ್ತೆ ಆ ಆದೇಶವನ್ನ ಮರು ಪರಿಶೀಲನೆ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ಡಾ. ಹೆಚ್ ಸಿ ಮಹದೇವಪ್ಪ ಹೇಳಿಕೆ ನೀಡಿದ್ದರು.
ತಂಬಾಕು ಮಂಡಳಿಯ ವತಿಯಿಂದ ಜನಪ್ರತಿನಿಧಿಗಳು ಮತ್ತು ತಂಬಾಕು ವರ್ತಕರೊಂದಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಲ್ಲಿ ಸಭೆ ನಡೆಸಲಾಯಿತು.
ಹಳೇ ದ್ವೇಷ ಹಿನ್ನಲೆ ದ್ವಿತೀಯ ಪಿಯು ವಿದ್ಯಾರ್ಥಿನಿ ಭವಿಷ್ಯಕ್ಕೆ ಕುಟುಂಬವೊಂದು ತಣ್ಣೀರೆರೆಚಲು ಹುನ್ನಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಒಳ ಮೀಸಲಾತಿ ಗೊಂದಲ ವಿಚಾರವಾಗಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರತಿಕ್ರಿಯೆ ನೀಡಿದರು.
ತೆಂಗಿನ ಗರಿಯೇ ಇವರಿಗೆ ಮೇಲ್ಚಾವಣಿ, ಕುಸಿದು ಬಿದ್ದಿರುವ ಮನೆ, ಬಿರುಕು ಬಿಟ್ಟ ಮಣ್ಣಿನ ಗೋಡೆಗಳು, ರಕ್ಷಣೆಗೆ ಮನೆ ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಆಸರೆ, ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವ ಬದುಕುತ್ತಿರುವ ಕುಟುಂಬಸ್ಥರ ಗೋಳು ಕೇಳುವವರೇ ಇಲ್ಲ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕಳೆದ ಬಾರಿಗಿಂತ ಈ ಬಾರಿ ಆದಾಯದಲ್ಲಿ ಕುಸಿತ ಕಂಡಿದೆ. ದೇವಾಲಯದ ದಾಸೋಹ ಭವನದಲ್ಲಿ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ. ಕಾಣಿಕೆ ಬಂದಿದೆ.
ಕೆಸರು ಗದ್ದೆಗೆ ಇಳಿದ ಎನ್ಎಸ್ಎಸ್ ಶಿಬಿರಾರ್ಥಿಗಳು, ಭತ್ತದ ಪೈರು ನೆಟ್ಟು ನಾಟಿ ಮಾಡಿ, ಗ್ರಾಮಸ್ಥರ ಗಮನ ಸೆಳೆದಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿರುವ ಮೌಡ್ಯತೆಯನ್ನು ಹೋಗಲಾಡಿಸಲು ರಾಷ್ಟ್ರೀಯ ಸೇವಾ ಯೋಜನೆಯ, ಶಿಬಿರಗಳು ಅತ್ಯವಶ್ಯಕವಾಗಿವೆ ಎಂದು ವಿವಿ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ ತಿಮ್ಮಯ್ಯ ಅಭಿಪ್ರಾಯಪಟ್ಟರು.
ಸಂಬಂಧಿಕರೊಬ್ಬರ ಸಾವಿನ ಅಂತಿಮ ದರುಶನಕ್ಕೆ ತೆರಳುತ್ತಿದ್ದ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರಂತ ಘಟನೆ ಕೆ.ಆರ್.ನಗರ ನಾರಾಯಣಪುರದ ಕೆಗ್ಗೆರೆ ಬಳಿ ನಡೆದಿದೆ.
ದಕ್ಷಿಣ ಕಾಶಿಯೆಂದೇ ಖ್ಯಾತಿಗಳಿಸಿರುವ ನಂಜುಂಡೇಶ್ವರಿಗೆ, ಒಂದೇ ತಿಂಗಳಿನಲ್ಲಿ 82 ಲಕ್ಷ ರೂ., ಕಾಣಿಕೆ ಬಂದಿದೆ.
ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಮೈಸೂರು ಮಹಾರಾಜ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ವತಿಯಿಂದ ಏಳು ದಿನಗಳ ಕಾಲ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಬೊಕ್ಕಹಳ್ಳಿ ಮತ್ತು ಬೊಕ್ಕಹಳ್ಳಿ ಹೊಸೂರು ಗ್ರಾಮಸ್ಥರಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿಯಿಂದ ನೀಡುವ ಹಸಿ ಕಸ ಮತ್ತು ಒಣ ಕಸ ಹಾಕುವ ಬಕೆಟ್ ಗಳನ್ನು ವಿತರಿಸಿದರು.
ಶಾಲಾ ಮಕ್ಕಳಂತೆ ತಮ್ಮ ಕುತ್ತಿಗೆಗೆ ಟೈ ಧರಿಸಿಕೊಂಡು ಶಾಸಕ ದರ್ಶನ್ ಧ್ರುವನಾರಾಯಣ್ ಖುಷಿ ಪಟ್ಟಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಬಿ.ಸೋಮಶೇಖರ್ ಹೇಳಿದರು.
ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ, ಗಬ್ಬೆದ್ದು ನಾರುತ್ತಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ನಿಮ್ಮ ನ್ಯೂಸ್ ಕರ್ನಾಟಕ ಸುದ್ದಿ ವಾಹಿನಿಯಲ್ಲಿ ವರದಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನವಿಲೂರು ಗ್ರಾಮ ಪಂಚಾಯಿತಿ ಆಡಳಿತ ಚರಂಡಿಗಳನ್ನು ಸ್ವಚ್ಛತೆಗೊಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿಬಿ-ರಾಮ್-ಜಿ ಕಾಯ್ದೆ ರದ್ದು ಮಾಡುವುದು ಮಾತ್ರವಲ್ಲದೆ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ(ಮನರೇಗಾ) ಯೋಜನೆಯನ್ನು ಮರು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪಾದಯಾತ್ರೆ ಮಾಡಲಾಯಿತು.
ಲವ್ ಮ್ಯಾಟರ್ ಹಿನ್ನಲೆ ಧ್ವೇಷ ಬೆಳೆಸಿಕೊಂಡ ಯುವಕನ ಕೊಲೆಗೆ ಮಾರಕಾಸ್ತ್ರಗಳ ಸಮೇತ ಬಂದಿದ್ದ ಗ್ಯಾಂಗ್ ಸ್ಕೆಚ್ ವಿಫಲವಾಗಿದೆ. ಪರಾರಿಯಾದ ಕೆಲವೇ ಗಂಟೆಗಳಲ್ಲಿ ಆಲನಹಳ್ಳಿ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿ ಕಂಬಿ ಎಣಿಸಲು ಕಳಿಸಿದ್ದಾರೆ.
ಮೊಬೈಲ್ ನಂಬರ್ ಕೊಡು ಇಲ್ಲಾಂದ್ರೆ ನಿನ್ನ ಗಂಡನ್ನ ಕೊಲೆ ಮಾಡ್ತೀನಿ ಎಂದು ಬೆದರಿಕೆ ಒಡ್ಡಿದ ರೋಮಿಯೋ ವಿರುದ್ದ ವಿಜಯನಗರ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಹಿನಕಲ್ ನ ದೇವರಾಜು ಎಂಬಾತನ ವಿರುದ್ದ ನೊಂದ ಗೃಹಿಣಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ವ್ಯಕ್ತಿ ಓಡಾಡುವ ರಸ್ತೆ ಒತ್ತುವರಿ ಮಾಡಿಕೊಂಡ ಪರಿಣಾಮ 25 ಕ್ಕೂ ಹೆಚ್ಚು ಕುಟುಂಬ ಅತಂತ್ರಕ್ಕೆ ಸಿಲುಕಿದೆ. ರಸ್ತೆ ಒತ್ತುವರಿ ತೆರುವುಗೊಳಿಸುವಂತೆ ನ್ಯಾಯಾಲಯ ಹಾಗೂ ತಹಶೀಲ್ದಾರ್ ಆದೇಶಿಸಿದ್ದರೂ ಸಡ್ಡು ಹೊಡೆದ ವ್ಯಕ್ತಿ ಬಂದ್ ಮಾಡುವ ಮೂಲಕ ನಿವಾಸಿಗಳಿಗೆ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ನಂಜನಗೂಡಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಒಳಮೀಸಲಾತಿ ಪದ್ಧತಿಯು ಬಲಗೈ ಸಮುದಾಯದ ಮರಣ ಶಾಸನವಾಗಿದ್ದು ಇದನ್ನ ತಕ್ಷಣವೇ ಹಿಂಪಡೆಯಬೇಕು ಎಂದು ಡಾ.ನವೀನ್ ಮೌರ್ಯ ಒತ್ತಾಯಿಸಿದರು.