Showing 20 of 2247 posts • Page 30 of 113
ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.
ಬಾರ್ ತೆರೆಯಲು ಅವಕಾಶ ನೀಡದಂತೆ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರನ್ನ MDMA ಡ್ರಗ್ಸ್ ಹೆಮ್ಮಾರಿ ಕಾಡುತ್ತಿದೆ.
ಗ್ರಾಮದ ಫೋಕಸ್ ಲೈಟ್ ಮೇಲೆ ಬಸವೇಶ್ವರರ ಬಾವುಟ ಅಳವಡಿಸಿದ ಹಿನ್ನಲೆ ಉಂಟಾದ ವಿವಾದ ಜಾತ್ರೆ ಸಂಭ್ರಮವನ್ನ ಮೊಟಕುಗೊಳಿಸಿದ ಘಟನೆ ನಂಜನಗೂಡು ತಾಲೂಕು ಹಗಿನವಾಳು ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಟಿ ನರಸೀಪುರ ಪಟ್ಟಣದಲ್ಲಿರುವ ತ್ರಿವೇಣಿ ಫ್ರೆಂಡ್ಸ್ ಸ್ಪೋರ್ಟ್ಸ್ ರಿಕ್ರಿಯೆಷನ್ ಕ್ಲಬ್ ನಲ್ಲಿ ನಿಯಮ ಬಾಹಿರವಾಗಿ ಇಸ್ಪೀಟ್ ದಂಧೆ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮತ್ತು ವರುಣ ವಿಧಾನಸಭಾ ಕ್ಷೇತ್ರದಲ್ಲಿಯೇ ಸಾರ್ವಜನಿಕ ಶಿಕ್ಷಣ ಉಳಿಸಲು ಕೆಪಿಎಸ್ ಮ್ಯಾಗ್ನೆಟ್ ವಿರೋಧಿಸಿ ಎಐಡಿಎಸ್ಒ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದೆ.
ಮಾಘ ಹುಣ್ಣಿಮೆ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದಕ್ಷಿಣ ಕಾಶಿ ಖ್ಯಾತಿಯ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2,46,28,418 ರೂ ಕಾಣಿಕೆ ಸಂಗ್ರಹವಾಗಿದೆ.
ನಟ ದುನಿಯಾ ವಿಜಯ್ ಮತ್ತು ನಟಿ ರಚಿತ ರಾಮ್ ಅಭಿನಯಿಸಿರುವ ಲ್ಯಾಂಡ್ ಲಾರ್ಡ್ ಚಲನಚಿತ್ರಕ್ಕೆ ನಂಜನಗೂಡು ಛಲವಾದಿ ಮಹಾಸಭಾ ಬೆಂಬಲ ವ್ಯಕ್ತಪಡಿಸಿ, ಪ್ರತಿಯೊಬ್ಬರು ಚಿತ್ರವನ್ನು ವೀಕ್ಷಣೆ ಮಾಡುವಂತೆ ಬೃಹತ್ ಜಾಥಾ ನಡೆಸಿದರು.
ಜಮೀನಿಗೆ ಬೈಕ್ ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಕಲಿ ಒಡವೆಗಳನ್ನ ಗಿರವಿ ಇಟ್ಟು ಖಾಸಗಿ ಬ್ಯಾಂಕ್ ಗೆ ವಂಚಿಸಿದ ಆರೋಪದ ಮೇಲೆ ಚಿನ್ನಾಭರಣ ಮೌಲ್ಯಮಾಪಕ ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಉಪ ವಿಭಾಗ, ಸಂಚಾರ ಪೊಲೀಸ್ ಠಾಣೆ ನಂಜನಗೂಡು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಸಾಲದ ಕಂತು ಪಾವತಿ ಮಾಡಿಲ್ಲ ಎಂದು ಖಾಸಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬೀಗ ಜಡಿದಿರುವ ಘಟನೆ ನಡೆದಿದೆ.
ಗಣರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರನಾಯಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಅಗೌರವ ಸೂಚಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.
ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಣಿಸಿಕೊಂಡು ಲಕ್ಷಾಂತರ ಮೌಲ್ಯದ ಪದಾರ್ಥ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ ನಡೆದಿದೆ.
ಹೋಟೆಲ್ ಆರಂಭಿಸಲು ಗ್ರಾಮ ಪಂಚಾಯ್ತಿಯಿಂದ ಅನುಮತಿ ಪಡೆದು ಬಾರ್ ಆರಂಭಿಸಿರುವ ವಿರುದ್ದ ಗ್ರಾಮಸ್ಥರು ಮತ್ತು ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳ ಸುಂದರ ದಾಂಪತ್ಯ ಜೀವ ದುರಂತದಲ್ಲಿ ಅಂತ್ಯಗೊಂಡಿದೆ.
ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊ ಸಂ 145/2022 NDPS ಪ್ರಕರಣದಲ್ಲಿ ಆರೋಪಿಯಾದ ಮೊಹಮ್ಮದ್ ಅಕ್ಬರ್ @ ಅಕ್ಬರ್ 30 ವರ್ಷ ಶಾಂತಿನಗರ ಮೈಸೂರು ಈತನಿಗೆ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಪ್ರಕರಣದಲ್ಲಿ ಮೈಸೂರು 7 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲವು ಜ. 24ರಂದು 4 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 40,000 ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.
ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಅಗೌರವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಮಕ್ಕಳ ಜೊತೆ ತಾಯಿ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ