Showing 20 of 2247 posts • Page 31 of 113
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲ್ಲೂಕು ಆಡಳಿತ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ನಂಜನಗೂಡು–ಗುಂಡ್ಲುಪೇಟೆ ರಸ್ತೆಯ ರಾಷ್ಟ್ರೀಯ ಹೆದ್ದಾರಿ 766ರ ಹಿರಿಕಾಟಿ ಗೇಟ್ ಸಮೀಪ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಬೈಕ್ ಸವಾರರಿಗೆ ತೀವ್ರ ಗಾಯಗಳಾಗಿವೆ.
ಸರ್ಕಾರಿ ಶಾಲೆ ಅಂದ್ರೆ ಮೂಗುಮುರಿಯುವ ಜನರೇ ಹೆಚ್ಚು. ಆದ್ರೆ ಈ ಆರೋಪವನ್ನ ಸುಳ್ಳು ಮಾಡುವ ಸರ್ಕಾರಿ ಶಾಲೆಯೊಂದು ನಂಜನಗೂಡಿನ ಕಲ್ಲಹಳ್ಳಿ ಬಳಿ ತಲೆ ಎತ್ತಿ ನಿಂತಿದೆ. ಶಾಲೆಯ ಕಟ್ಟಡ ಹೊರನೋಟದಲ್ಲೇ ಆಕರ್ಷಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.
ಸಿಸಿ ಟಿವಿ ದೃಶ್ಯಗಳು ನೀಡಿದ ಸುಳಿವಿನ ಆಧಾರದ ಮೇಲೆ ನಂಜನಗೂಡು ಟೌನ್ ಪೊಲೀಸರು ಇಬ್ಬರು ಜಾನುವಾರುಗಳ ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಕೆಸರೆ ನಿವಾಸಿಗಳಾದ ಸುಲೇಮಾನ್ ಹಾಗೂ ಸಿದ್ದಿಖ್ ಪಾಷಾ ಬಂಧಿತರು. ಕೃತ್ಯದಲ್ಲಿ ಭಾಗಿಯಾದ ಉಳಿದ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ರಾಜ್ಯಪಾಲರ ವಿರುದ್ಧ ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಜೊತೆಯಲ್ಲಿ ಬಂದಿದ್ದ ಸ್ನೇಹಿತರು ಭಯದಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿದ ವಂಚಕರು ನಿವೃತ್ತ ಅಧಿಕಾರಿಯೊಬ್ಬರಿಗೆ 45.98 ಲಕ್ಷ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡರಿಗೆ ಕೋಕ್ ಕೊಡ್ತಾರೆ ಎಂಬ ಚರ್ಚೆ ವಿಚಾರವಾಗಿ ಮೈಸೂರಿನಲ್ಲಿ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಬಾಕಿ ಇರುವ ಬಾಡಿಗೆ ಕಟ್ಟುವಂತೆ ಒತ್ತಾಯಿಸಿದ ಮಾಲೀಕನ ಮನೆ ಬಾಗಿಲಿಗೆ ಬಾಡಿಗೆದಾರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಬಡಾವಣೆಯಲ್ಲಿ ನಡೆದಿದೆ.
ಖಾಸಗಿ ಆಪ್ ಡೌನ್ ಲೋಡ್ ಮಾಡಿ ಟ್ರೇಡಿಂಗ್ ಮಾಡಿದ ವ್ಯಕ್ತಿಗೆ 47.44 ಲಕ್ಷ ವಂಚನೆಯಾಗಿದೆ. ಮೈಸೂರಿನ ಜೆಪಿ ನಗರ ನಿವಾಸಿ ಸಂತೋಷ್ ಹಣ ಕಳೆದುಕೊಂಡವರು.
ಮೈಸೂರು ಜಿಲ್ಲೆಯ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ವರ್ಗಾವಣೆಯಾಗಿದ್ದಾರೆ. ಬೆಂಗಳೂರಿನ ವಿಕಾಸಸೌಧಕ್ಕೆ ವರ್ಗಾವಣೆ ಆಗಿದೆ. ಶಿವಕುಮಾರ್ ಕಾಸ್ನೂರು ಸ್ಥಳಕ್ಕೆ ರಾಮನಗರ ತಹಶೀಲ್ದಾರ್ ಸ್ಮಿತಾ ರನ್ನ ನಿಯೋಜಿಸಲಾಗಿದೆ.
ತಿರುವು ಪಡೆದುಕೊಳ್ಳುತ್ತಿದ್ದ ಬೈಕ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ.
ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶ
ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಹೆಮ್ಮರಗಾಲ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣದಲ್ಲಿ ಭಾರೀ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ಯುವ ಮುಖಂಡ ಕುಂಬ್ರಹಳ್ಳಿ ಶಶಿಕುಮಾರ್ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಕೋ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ಮೈಸೂರು ಭಾಗದ ಆಧ್ಯಾತ್ಮಿಕ ಶಕ್ತಿ ಕೇಂದ್ರ ಸುತ್ತೂರಲ್ಲಿ ಜಾತ್ರೆ ಸಂಭ್ರಮ ಮೇಳೈಸಿದೆ. ಸುತ್ತೂರು ಜಾತ್ರಾ ಮಹೋತ್ಸವ ಸಂಭ್ರಮ ಕಳೆಗಟ್ಟಿದ್ದು, ಜಾತ್ರಾ ಮಹೋತ್ಸವದ 2ನೇ ದಿನ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ.
ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಶ್ರೀ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿ ಸಂಕ್ರಾಂತಿ ಆಚರಿಸಲಾಯಿತು.
ರಾಜ್ಯದಲ್ಲಿ ಆಡಳಿತ ಸತ್ತಿದೆ. ಸತ್ತ ಆಡಳಿದ ಹೆಣವನ್ನು ಸಿದ್ದರಾಮಯ್ಯ ಮುಂದೆ ಹೊತ್ತಿದ್ದಾರೆ.
ಚಾಮರಾಜ ಕ್ಷೇತ್ರದ ಜನಕ್ಕೆ ಉಪಕಾರ ಮಾಡದಿದ್ದರು ಉಪದ್ರ ನೀಡುವ ಜನಪ್ರತಿನಿಧಿಗಳು ಬೇಕಿಲ್ಲ.
ಕೊನೆಗೂ ನಂಜನಗೂಡು ಪೊಲೀಸರು ಎಚ್ಚೆತ್ತಿದ್ದಾರೆ. ಕ್ರೈಂ ರೇಟ್ ತಗ್ಗಿಸಲು ವಿಶೇಷ ಪ್ರೋಗ್ರಾಂ ಹಾಕಿಕೊಂಡಿದ್ದಾರೆ. ರಾತ್ರಿ ಗಸ್ತನ್ನ ಬಲಪಡಿಸಿದ್ದಾರೆ. ಇಂದಿನಿಂದ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ನೈಟ್ ಬೀಟ್ ಇರುತ್ತದೆ.