Showing 20 of 2247 posts • Page 32 of 113
ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆಮಾಡಿದ್ದು, ತಿ.ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿಯಲ್ಲಿರುವ ದರ್ಶನ್ ಫಾರಂ ನಲ್ಲಿರುವ ಕುದುರೆ ಜೊತೆ ವಿಜಯಲಕ್ಷ್ಮಿ ಪೋಸ್ಟ್ ಹಾಕಿದ್ದಾರೆ.
ಸೌಹಾರ್ಧತೆ, ಭಾವೈಕ್ಯತೆ ಎಂಬ ಪದಗಳನ್ನ ಕೇವಲ ಭಾಷಣಗಳಲ್ಲಿ ಬಿಗಿಯುವ ಇಂದಿನ ದಿನಗಳಲ್ಲಿ ಮೈಸೂರು ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಹಲವು ಸಮುದಾಯಗಳನ್ನ ಒಟ್ಟುಗೂಡಿಸಿ ಸಂಕ್ರಾಂತಿ ಆಚರಿಸುವ ಮೂಲಕ ಜಾತ್ಯಾತೀತತೆ ಮೆರೆದಿದ್ದಾರೆ. ಮುಸಲ್ಮಾನ್ , ಕ್ರಿಶ್ಚಿಯನ್, ಜೈನ್, ಬಾಂಧವರಿಗೆ ಎಳ್ಳು ಬೆಲ್ಲ ಬಿರುವ ಮೂಲಕ ಭಾವೈಕ್ಯತೆ ಸಂದೇಶ ಸಾರಿದ್ದಾರೆ.
ಖದೀಮರ ಹಾವಳಿ ಮೈಸೂರಿನಲ್ಲಿ ಮುಂದುವರೆದಿದ್ದು, ತಡರಾತ್ರಿ ಮಹಾಬಲೇಶ್ವರ ದೇವಸ್ಥಾನಕ್ಕೆ ಕಳ್ಳರು ನುಗ್ಗಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ನಡೆದಿದೆ.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಚಿನ್ನಂಬಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ.
ರೈತ ಚಳುವಳಿಯು ಪ್ರಾರಂಭದ ದಿನಗಳಿಂದಲೂ ಯಾವುದೇ ಅಧಿಕಾರಿಗಳಿಗೂ ತೊಂದರೆ ನೀಡಿಲ್ಲ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.
ಇಂದಿನಿಂದ ಜ.20 ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಬುಧವಾರ ಮಹಾದಾಸೋಹಕ್ಕೆ ಅಧಿಕೃತ ಚಾಲನೆ ನೀಡಲಾಯಿತು.
ತಾಲ್ಲೂಕು ಕಛೇರಿಯಲ್ಲಿ ಅನಧಿಕೃತವಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು.
ರಾಹುಲ್, ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಮಂಡಕಳ್ಳಿ ವಿಮಾನ ನಿಲ್ದಾಣದ ರನ್ವೇ ನಲ್ಲಿ ಮಾತುಕತೆ ನಡೆಸಿದರು.
ಬಡ ರೈತರಿಗೆ ಸಾಗುವಳಿ ಪತ್ರವನ್ನು ತಾಲೂಕು ಆಡಳಿತ ನೀಡುತ್ತಿಲ್ಲ ಎಂದು ಆರೋಪಿಸಿ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ನಂಜನಗೂಡಿನ ತಾಲ್ಲೂಕು ಕಛೇರಿಗೆ ಮುತ್ತಿಗೆ ಹಾಕಿ ನಿದ್ರಿಸುವ ಮೂಲಕ ಪ್ರತಿಭಟಿಸಿದರು.
ಲಷ್ಕರ್ ಠಾಣೆ ಪೊಲೀಸರು ಇಬ್ಬರು ಬೈಕ್ ಕಳ್ಳರನ್ನ ಬಂಧಿಸಿದ್ದಾರೆ.
ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಕನ್ನಕಳವು ಮಾಡುವ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿಯಿಂದ 2,60,000/- ಮೌಲ್ಯದ ಚಿನ್ನಾ ಹಾಗೂ ಬೆಳ್ಳಿ ಪದಾರ್ಥ ವಶಪಡಿಸಿಕೊಳ್ಳಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಹುಲಿ ಹಾವಳಿ ಗ್ರಾಮಸ್ಥರ ನಿದ್ರೆ ಕೆಡಿಸಿದೆ. ಹಸು ಮೇಲೆ ಹುಲಿ ದಾಳಿ ನಡೆಸಿದ ಹಿನ್ನಲೆ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಖದೀಮರ ಹಾವಳಿ ಮೈಸೂರಿನಲ್ಲಿ ಮುಂದುವರೆದಿದ್ದು, ಪ್ರಾವಿಷನ್ ಸ್ಟೋರ್ನಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.
ಕನ್ನಡ ಶಾಲೆಯ ವಿರುದ್ಧ ಕೇರಳ ಸರ್ಕಾರ ತಂದಿರುವ ನೂತನ ಕಾಯ್ದೆ ವಿರೋಧಿಸಿ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ವರುಣಾ ವಿಧಾನಸಭಾ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ಶ್ರೀ ಕ್ಷೇತ್ರದಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಇದೇ ಜ.15 ರಿಂದ 20 ರವರಗೆ ನಡೆಸಲಾಗುತ್ತದೆ ಎಂದು ಸುತ್ತೂರು ಮಠದ ಕಾರ್ಯದರ್ಶಿ ಮಂಜುನಾಥ್ ಹೇಳಿದರು.
ಮೆದುಳಿನ ಶಿಕ್ಷಣಕ್ಕಿಂತ ಹೃದಯದ ಶಿಕ್ಷಣವಿರಬೇಕು. ದಲಿತರ ಭವಿಷ್ಯ, ಶಿಕ್ಷಣ ಮತ್ತು ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ.
ಬೈಲಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಗಾಗ ಕಳ್ಳತನದ ಪ್ರಕರಣಗಳು ನಡೆತ್ತಿದೆ. ಬೈಲಕುಪ್ಪೆಯನ್ನೇ ಕಳ್ಳರ ಗ್ಯಾಂಗ್ ಟಾರ್ಗೆಟ್ ಮಾಡಿಕೊಂಡಿದೆ.
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.
ಪ್ರೀತಿಸಿ ಮದುವೆ ಆಗುವಂತೆ ಯುವಕ ನೀಡಿದ ಕಿರುಕುಳಕ್ಕೆ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದ ಘಟನೆಗೆ ಟ್ವಿಸ್ಟ್ ಸಿಕ್ಕಿದೆ. ಇಬ್ಬರ ನಡುವೆ ಲವ್ವಿ ಡವ್ವಿ ಇರುವ ವಿಚಾರ ಬೆಳಕಿಗೆ ಬಂದಿದೆ.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡು ತಾಲ್ಲೂಕಿನಲ್ಲಿ ಸರಣಿ ಅಪರಾಧ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಂಜನಗೂಡಿನ ತಾಲ್ಲೂಕು ಆಡಳಿತ ಭವನದಲ್ಲಿ ಶಾಸಕ ದರ್ಶನ್ ಧ್ರುವ ನಾರಾಯಣ್ ಹಾಗೂ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಇತ್ತೀಚೆಗೆ ನಡೆದ ಸರಣಿ ದರೋಡೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ನಂಜನಗೂಡು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ […]