Showing 20 of 2247 posts • Page 38 of 113
ಡಿ.21 ರಂದು ನಡೆಯುವ ಶ್ರೀ ಭಕ್ತ ಕನಕದಾಸರ ಜಯಂತೋತ್ಸವದ ರಥಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡಿನಲ್ಲಿ ಚಾಲನೆ ನೀಡಿದರು. ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಭತ್ತದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತರು ಕಂಗಲಾಗುತ್ತಿದ್ದಾರೆ. ಕೂಡಲೇ ಸರ್ಕಾರ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಆಗ್ರಹಿಸಿದ್ದಾರೆ.
ತಾಲ್ಲೂಕಿನ ಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗ್ರಾಮ ಪಂಚಾಯತಿ ಕಾರ್ಯಾಲಯವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ನಮ್ಮ ದೇಶಕ್ಕೆ ಮಹಾ ಗ್ರಂಥವನ್ನು ನೀಡಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರನ್ನು ಮರಿಸಿಕೊಳ್ಳಬೇಕು. ಅವರು ನೀಡಿರುವ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲಾಗುತ್ತದೆ ಇದನ್ನು ತಡೆಗಟ್ಟಲು ಸಂಘಟನೆ ಬಹು ಮುಖ್ಯ ಪಾತ್ರವಹಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಹೇಳಿದರು.
ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಯಶಸ್ವಿಯಾಗಲಿ ಎಂದು ವೃದ್ದಾಶ್ರಮದ ಹಿರಿಯ ನಾಗರಿಕರು ಆಶೀರ್ವಾದಿಸಿದ್ದಾರೆ.
ಒಂದೊಂದಾಗಿ ಕಲ್ಲು ಕಂಬಗಳ ಬ್ಯಾರಿಕೇಟ್ ಮುರಿದು ಬೀಳುತ್ತಿದ್ದು, ಸಾಂಸ್ಕೃತಿಕ ನಗರಿ ಅಂದ ಹೆಚ್ಚಿಸಲು ರಾಜಪಥಗಳಲ್ಲಿ ಅಲಂಕಾರಿಕ ಕಲ್ಲಿನ ಕಂಬಗಳು ನಿರ್ಮಿಸಿದ್ದರು.
ಹುಲಿ ಉಪಟಳ ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಗುರುಪುರ ಗ್ರಾಮದಲ್ಲಿ ಹುಲಿ ಮರಿ ಸೆರೆಯಾಗಿದ್ದು, ಮರಿಯನ್ನು ರಕ್ಷಣೆ ಮಾಡಲಾಗಿದೆ.
ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು.
ಜಗದ್ಗುರು ಶ್ರೀ ಶಿವರಾತ್ರಿ ಡಾ. ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಮತ್ತು ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ ನಡೆಯಿತು.
ಮಗಳ ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟ ಹಣ ಖದೀಮರ ಪಾಲಾಗಿದೆ. ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 2 ಲಕ್ಷ ಲಪಟಾಯಿಸಿದ್ದಾರೆ. ನಜರಬಾದ್ ನಿವಾಸಿ ಸಂತೋಷ್ ಕುಮಾರ್ ಹಣ ಕಳೆದುಕೊಂಡವರು.
ಶುದ್ದ ನೀರಿನ ಘಟಕದಿಂದ ಸಂಗ್ರಹಗೊಂಡ ಹಣ ದುರ್ಬಳಕೆ ಮಾಡಿಕೊಂಡ ಗ್ರಾ.ಪಂ. ನೌಕರನನ್ನ ಸೇವೆಯಿಂದ ವಜಾ ಮಾಡಲಾಗಿದೆ. ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರ ಗ್ರಾ.ಪಂ.ನಲ್ಲಿ ಹಂಗಾಮಿ ನೀರುಗಂಟಿ ಕೆಲಸ ಮಾಡುತ್ತಿದ್ದ ಮಂಜುನಾಥ್ ವಜಾ ಆದ ನೌಕರ.
ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ನೀಡಿ 35 ಲಕ್ಷ ವಂಚಿಸಿದ ಆರೋಪದ ಮೇಲೆ ಮೇಟಗಳ್ಳಿ ಪೊಲೀಸ್ ಠಾಣೆ ಪೇದೆ ಪಿ.ಜೆ.ರಾಜು ಹಾಗೂ ಅವರ ಪತ್ನಿ ನಂದಿನಿ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಲಿ ಉಪಟಳ ಮೈಸೂರಿನಲ್ಲಿ ಹೆಚ್ಚಾಗಿದೆ. ಹುಲಿ ಮತ್ತೆ ಮೈಸೂರಿನ ಬಿಇಎಂಎಲ್ ಕಾರ್ಖಾನೆ ಬಳಿ ಪ್ರತ್ಯಕ್ಷವಾಗಿದ್ದು, ಹುಲಿ ಉಪಟಳದಿಂದ ಜನರು ಭಯಭೀತರಾಗಿದ್ದಾರೆ.
ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಹಿನ್ನೆಲೆಯಲ್ಲಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಹುಣಸೂರಿನಲ್ಲಿ ಅದ್ಧೂರಿ ಹನುಮ ಜಯಂತಿ ನಡೆದಿದ್ದು, ಪೊಲೀಸ್ ಸರ್ಪಗಾವಲಿನಲ್ಲಿ ಹನುಮ ಜಯಂತಿ ಮಾಡಲಾಯಿತು. ಸಂಸದ ಯದುವೀರ್, ಮಾಜಿ ಶಾಸಕ ಹೆಚ್.ಪಿ ಮಂಜುನಾಥ್, ಶಾಸಕ ಹರೀಶ್ಗೌಡ,
ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪಂಚಾಯತ್ ರಾಜ್ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.