Showing 20 of 2247 posts • Page 4 of 113
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಕಡಜೆಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ರಾಜಿ ಮೂಲಕ ಮುಚ್ಚಿಹಾಕಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದ್ದು, ತನ್ನ ಮಗನಿಗೋಸ್ಕರ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ನ ಹಿರಿಯ ಶಾಸಕರಿಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ ಎಂದು ಮಾಜಿ ಎಂಎಲ್ʼಸಿ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು ದಸರಾ ವೇಳೆ ಪ್ರಸ್ತಾವಿತ ಕಂಬಳ ಆಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಹಲವು ಸಂಘಟನೆಗಳ ಸದಸ್ಯರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಧ್ಯಪ್ರವೇಶಿಸಿ ಈ ಪ್ರಸ್ತಾವನೆಯನ್ನು ವಿರೋಧಿಸಬೇಕು ಎಂದು ಆಗ್ರಹಿಸಿದ್ದಾರೆ. ನೀರಿನ ಕೊರತೆ, ಬರ ಪರಿಸ್ಥಿತಿ ಮತ್ತು ಪರಿಸರ ಹಾನಿಯ ಆತಂಕಗಳನ್ನು ಅವರು ಕಾರಣವಾಗಿ ನೀಡಿದ್ದಾರೆ.
ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕಳೆದ ಮೂರು–ನಾಲ್ಕು ತಿಂಗಳಿಂದ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆ ಇದೀಗ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಮೈಸೂರಿನ ಸೆಂಟ್ ಫಿಲೋಮಿನಾ ಶಾಲೆಯಲ್ಲಿ ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಸುರೇಶ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಕೊಡಗಿನಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಆಗಸ್ಟ್ ಕೊನೆಯ ವಾರದಲ್ಲಿ ಒಳಹರಿವು ಹೆಚ್ಚಾಗಿತ್ತಾದರೂ, ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿಯೇ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಸರಾ ಗಜಪಡೆ ಬಿಡಾರಕ್ಕೆ ಯುವರಾಣಿ ತ್ರಿಷಿಕಾ ಕುಮಾರಿ ಭೇಟಿ ನೀಡಿದರು.
ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ, ಹಂಪ್ಗಳಿಗೆ ವೇಗ ನಿಯಂತ್ರಕಗಳು ಬಣ್ಣ ಬಳಿಯದ ಕಾರಣ ಸರಣಿ ಅಪಘಾತಗಳು ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕವು ಇಂದು ಜನಹಿತ ರಕ್ಷಣೆಗೆ ಮುಂದಾಗಿದೆ.
ಬೀಗರ ಔತಣ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಚಾಮನಹಳ್ಳಿ ಹುಂಡಿ ಬಳಿ ನಡೆದಿದೆ.
ಮಧ್ಯರಾತ್ರಿ ಮನೆ ಬಿಟ್ಟ ರವಿ ಕುಡಿದ ಮತ್ತಿನಲ್ಲಿ ಉದ್ಯಾನವನದ ಬೇಲಿ ಹಾರಲು ಮುಂದಾಗಿದ್ದಾನೆ. ಈ ವೇಳೆ ಮೊನಚಾದ ಕಬ್ಬಿಣದ ರಾಡು ತೊಡೆ ಭಾಗಕ್ಕೆ ಚುಚ್ಚಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಪ್ರಜಾ ಸೇವಾ ಆಂದೋಲನಕ್ಕೆ ನಂಜನಗೂಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ 60ನೇ ವರ್ಷದ ಆರಾಧನಾ ಮಹೋತ್ಸವವನ್ನು ಶ್ರದ್ಧಾ-ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ತಾಲ್ಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕೊನೆಯ ಶ್ರಾವಣ ಶನಿವಾರದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಜಾತ್ರಾ ಮಹೋತ್ಸವವನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧಾ-ಭಕ್ತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು.
ಇಲ್ಲಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸರಗಳ್ಳರ ಕೈಚಳಕಕ್ಕೆ ಸರ್ಕಾರಿ ಉದ್ಯೋಗಿಯೊಬ್ಬರು ಚಿನ್ನಾಭರಣ ಕಳೆದುಕೊಂಡಿದ್ದಾರೆ. ಪೆಂಡೆಂಟ್ ಸಮೇತ 2.30 ಲಕ್ಷಮೌಲ್ಯದ ಚಿನ್ನದ ಸರ ಕಳ್ಳರ ಪಾಲಾಗಿದೆ.
ಕೃಷ್ಣರಾಜಪುರ ಗ್ರಾಮದ ರೈತರ ಜಮೀನುಗಳಿಗೆ ವಿದ್ಯುತ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಪರಿಣಾಮ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ಸುಮಾರು 15ರಿಂದ 20 ಎಕರೆ ಪ್ರದೇಶದಲ್ಲಿ ಬೆಳೆದಿರುವ ಕಬ್ಬು ಬೆಳೆ ಒಣಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.
ಐತಿಹಾಸಿಕ ಮೈಸೂರು ಜಂಬೂಸವಾರಿಯಲ್ಲಿ ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜಪಡೆ ನಾಯಕ ಅಭಿಮನ್ಯು ಮುಂಬರುವ 2026ರ ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಸರ್ಕಾರ ಅನುಮತಿ ನೀಡಿದೆ.
ನಗರದ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ 2024-25ನೇ ಸಾಲಿನಲ್ಲಿ ಸುಮಾರು 4 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಆರೋಪಿಸಿದರು.
ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯಕ್ಕೆ ಸೇರಿದ ಉಡುತೊರೆಹಳ್ಳ ಜಲಾಶಯದ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿ, ಅದರ ಮಾಂಸವನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳು ಅರಣ್ಯ ಸಿಬ್ಬಂದಿಯನ್ನು ಕಂಡು ಪರಾರಿಯಾದ ಘಟನೆ ನಡೆದಿದೆ.
ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ಬುಲೆಟ್ ಬೈಕ್ ಅನ್ನು ಕಳ್ಳತನ ಮಾಡಿ, ಬಳಿಕ ಅದನ್ನು ನಾಲೆಗೆ ಎಸೆದಿರುವ ವಿಚಿತ್ರ ಘಟನೆ ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನಡೆದಿದೆ. ಹರತಲೆ ಗ್ರಾಮದ ಕುಮಾರ್ ಎಂಬುವರಿಗೆ ಸೇರಿದ ಬುಲೆಟ್ ಬೈಕ್ ಅನ್ನು ಎಂದಿನಂತೆ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿತ್ತು. ಆದರೆ ಮಧ್ಯರಾತ್ರಿ ವೇಳೆ ಖದೀಮರು ಬೈಕ್ ಅನ್ನು ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ ಎದ್ದು ನೋಡಿದಾಗ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಾಣೆಯಾಗಿರುವುದು ಕುಮಾರ್ […]
ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.