Showing 20 of 2247 posts • Page 48 of 113
ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ಮಾಡಿದ ವಿಚಾರದಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ ಛಾಯಾಗ್ರಾಹಕರ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ನಡೆಸಲಾಯಿತು. ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ಕೊಡಮಾಡಲ್ಪಟ್ಟಿದೆ.
ರೈತನ ಮೇಲೆ ದಾಳಿ ಮಾಡಿದ್ದ ಹುಲಿ ಸರಗೂರು ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಸೆರೆಯಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸೆರೆಯಾಗಿದ್ದು, ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು
ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸಿದ ಮನೆಮನೆ ಗೊಂಬೆ ಕೂರಿಸುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು.
ಹುಲಿ ದಾಳಿ ಪ್ರಕರಣ ಹಿನ್ನಲೆ ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ವಾಹನದ ಮೇಲೆ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಡಿಯಾಲ ಅರಣ್ಯ ಇಲಾಖೆಗೆ ಸೇರಿದ ಎರಡು ವಾಹನಗಳ ಗಾಜು ಪುಡಿ ಪುಡಿಯಾಗಿವೆ.
ಹುಲಿ ದಾಳಿಗೆ ರೈತ ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು.
ಜಾತಿ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿಯಾಗಿ ಸಂದೇಶ ಹಾಕಿದ ಸರ್ಕಾರಿ ಶಾಲೆ ದೈಹಿಕ ಶಿಕ್ಷಕ ಅಮಾನತಾಗಿದ್ದಾರೆ. ಹೆಚ್.ಡಿ. ಕೋಟೆ ಪಟ್ಟಣದ ಯರಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕ ರವಿ ಅಮಾನತಾದವರು.
ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. 28 ದಿನಗಳ ಅವಧಿಯಲ್ಲಿ 2,27, 24,757 ರೂ ಗಳು ಸಂಗ್ರಹವಾಗಿದೆ.
ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.
ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.
ಸಚಿವ ಪ್ರಿಯಾಂಕ ಖರ್ಗೆಗೆ ಆರ್ಎಸ್ಎಸ್ನಿಂದ ಬೆದರಿಕೆ ಕರೆ ಹಿನ್ನಲೆ ಮಾಜಿ ಸಂಸದ ಪ್ರತಾಪ್ ಸಿಂಹ, ವಿಪಕ್ಷ ನಾಯಕ ಆರ್ ಅಶೋಕ್ ಶಾಸಕ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿ ಏಟು ಕೊಟ್ಟು ಪ್ರತಿಭಟನೆ ನಡೆಸಿದರು.
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾಗಿ ಹತ್ತು ಮಂದಿಗೆ ಗಾಯಗೊಂಡಿರುವ ಘಟನೆ ಸರಗೂರು ಟೌನಿನ ಕಬಿನಿ ನದಿ ಚಾನೆಲ್ ಬಳಿ ನಡೆದಿದೆ.
ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ 99.65 ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅನುದಾನ ಕೊಡುವ ತಾರತಮ್ಯ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೆಡಿಎಸ್ ಅಧಿಕಾರದಲ್ಲಿದ್ದಾಗ ನಮ್ಮ ಶಾಸಕರಿಗೆ ಏನು ಮಾಡಿದರು ಎಂಬುದು ಗೊತ್ತಿದೆ.
ಮೈಸೂರಿನ ಸತ್ಯನಗರದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮತಗಳ್ಳತನ ಕುರಿತು ಸಾರ್ವ ಜನಿಕ ಸಹಿ ಸಂಗ್ರಹ ಜಾಗೃತಿ ಅಭಿಯಾನ ನಡೆಸಲಾಯಿತು.
ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ ಮೂರುಕಡೆ ಕಳ್ಳತನ ನಡೆಸಿದ್ದಾರೆ. ಮೊನ್ನೆಯಷ್ಟೆ ಒಂದನೇ ಮುಖ್ಯರಸ್ತೆಯ ಮಾರಮ್ಮನ ದೇವಸ್ಥಾನಕ್ಕೆ ನುಗ್ಗಿ ಗೋಲಕ ಮುರಿದು ನಗದು
ಯತೀಂದ್ರ ಸಿದ್ದರಾಮಯ್ಯಗೆ ಮನವಿ ನೀಡಲು ಬೆಂಬಲಿಗರ ಕಿತ್ತಾಟ ನಡೆದ ಘಟನೆ ಮೈಸೂರಿನ ಏರ್ಪೋರ್ಟ್ನಲ್ಲಿ ನಡೆದಿದೆ. ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಘಟನೆ ನಡೆದಿದೆ.
ಐಟಿ ದಿಗ್ಗಜರ ಟ್ವೀಟ್ ಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜಕಾರಣದ ಲೇಪನ ಬಳಿದಿದ್ದಾರೆ. ಒಂದೆರೆಡು ರಸ್ತೆಗಳು ಗುಂಡಿ ಬಿದ್ದದ್ದನ್ನ ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ.
ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆಗಳ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿಕೆ ನೀಡಿದ್ದಾರೆ. ಈ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ವಿರೋಧ ಪಕ್ಷಗಳ ಶಾಸಕರಿಗೆ ಅನುದಾನ ತಾರತಮ್ಯವಿದೆ ಎಂದು ಹೈಕೋರ್ಟ್ ಗೆ ರಿಟ್ ಸಲ್ಲಿಕೆ ವಿಚಾರವಾಗಿ ಮೈಸೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.