Showing 20 of 2247 posts • Page 5 of 113
ಮಳೆ ಕೊರತೆ, ಬರದ ಬವಣೆ, ಸಾಲದ ಹೊರೆ ನಡುವೆ ಕಷ್ಟಪಟ್ಟು ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದ ರೈತರಿಗೆ ಇದೀಗ ಕಾಡಾನೆಗಳ ದಾಳಿಯೂ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ.
ತಾಲ್ಲೂಕಿನ ಮಲ್ಲೂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ದೊಡ್ಡಕವಲಂದೆ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನೀಲ್ ಬೋಸ್ ಅವರ ಹುಟ್ಟುಹಬ್ಬವನ್ನು ನಂಜನಗೂಡಿನಲ್ಲಿ ಕಾಂಗ್ರೆಸ್ ಯುವ ಮುಖಂಡ ಗುರುಪಾದಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು.
ಉಪ ಲೋಕಾಯುಕ್ತರ ಮದ್ದೂರು ಭೇಟಿ ಎಫೆಕ್ಟ್ ಓರ್ವ ಗ್ರಾಪಂ ಅಧಿಕಾರಿ ತಲೆದಂಡವಾಗಿದೆ.
ವಿದ್ಯುತ್ ಕಂಬದ ಗ್ರೌಂಡಿಂಗ್ನಿಂದ ವಿದ್ಯುತ್ ಸ್ಪರ್ಶಗೊಂಡು ರೈತನ ಹಸುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ನಡೆದಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ 2026; ದಸರಾ ಗಜಪಡೆಗೆ ತೂಕ ಪರೀಕ್ಷೆ!
ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ ಸಾರ್ಥಕವಾಗಿದೆ.ವಲಯ ಕಚೇರಿ 5 ರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ GVB ಯೋಜನೆ ವಾರ್ಡ್ ನಂ 7 ರಲ್ಲಿ ಅರ್ಥಪೂರ್ಣವಾಗಿ ಜಾರಿಗೆ ಬಂದಿದೆ. ಕಸದ ರಾಶಿ ತುಂಬಿದ್ದ ಸ್ಥಳವೀಗ ಸಾರ್ವಜನಿಕರ ಆಶ್ರಯ ತಾಣವಾಗಿ ಪರಿವರ್ತನೆಯಾಗಿದೆ.
ನಾಲ್ಕನೇ ಮಹಡಿಯಿಂದ ಹಾರಿ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿಜಯನಗರದ ಮರಿಮಲ್ಲಪ್ಪ ಶಾಲೆಯಲ್ಲಿ ನಡೆದಿದೆ.
ವಿದ್ಯುತ್ ಸ್ಪರ್ಶದಿಂದ ರೈತ ಸಾವನ್ನಪ್ಪಿದ ದುರಂತ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಬಟ್ಟಾಳಿಗೆ ಹುಂಡಿ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ಒಂಬತ್ತು ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕ ಸ್ವಾಗತ ಕೋರುವ ವೇಳೆ, ದಸರಾ ಆನೆ ‘ಶ್ರೀರಾಮ’ ಸಿಟ್ಟಿಗೆದ್ದು ನಿಯಂತ್ರಣ ತಪ್ಪಿದಾಗ ಮೈಸೂರು ಅರಮನೆ ಆವರಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.
ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹರಗನಪುರ ಗ್ರಾಮದಲ್ಲಿ ನಡೆದಿದೆ.
ನಗರವನ್ನು ಗಾಂಜಾ ಹಾಗೂ ಮಾದಕ ವಸ್ತುಗಳ ಮುಕ್ತ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಬಿಜೆಪಿ ಯುವ ಮೋರ್ಚಾ ವತಿಯಿಂದ “ಗಾಂಜಾ ಮುಕ್ತ, ಸ್ವಚ್ಛ ನಂಜನಗೂಡು” ಎಂಬ ಘೋಷವಾಕ್ಯದೊಂದಿಗೆ ಮಾಜಿ ಶಾಸಕ ಬಿ. ಹರ್ಷವರ್ಧನ್ ನೇತೃತ್ವದಲ್ಲಿ ಗುರುವಾರ ಬೃಹತ್ ಬೈಕ್ ರ್ಯಾಲಿ ನಡೆಸಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಾಯಿತು.
ದಸರಾ ಮಹೋತ್ಸವ-2026 ಕ್ಕೆ ಆನೆಗಳ ಮೊದಲ ತಂಡ ಮೈಸೂರಿಗೆ ಎಂಟ್ರಿ ಕೊಟ್ಟಿದೆ. ಗಜಪಯಣದ ಮೂಲಕ ಗಜಪಡೆ ಕಾಡಿನಿಂದ ನಾಡಿಗೆ ಬಂದಿದೆ.
ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಆರಂಭಗೊಂಡಿದ್ದು, ಸಾಂಪ್ರದಾಯಿಕವಾಗಿ ಗಜಪಡೆ ಪೂಜೆ ನೆರವೇರಿಸುವ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಾಗಿದೆ.
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ವಿಖ್ಯಾತ ನಾಡಹಬ್ಬ ದಸರಾ 2026 ವೀರನ ಹೊಸಹಳ್ಳಿಯಲ್ಲಿ ಗಜಪಡೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.
ನಂಜನಗೂಡನ್ನು ಗಾಂಜಾ ಹಾಗೂ ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಆ. 27ರಂದು ಬೃಹತ್ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಿದ್ದರಾಜು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ, ಬೆಂಗಳೂರು ಇವರ ನೇತೃತ್ವದಲ್ಲಿ ರಾಜ್ಯಮಟ್ಟದ ಎಸ್ಸಿ/ಎಸ್ಟಿ ನೌಕರರ 6ನೇ ಐಕ್ಯತಾ ಸಮಾವೇಶವನ್ನು ಆ. 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿ ನಂಜನಗೂಡು ತಾಲ್ಲೂಕು ಅಧ್ಯಕ್ಷ ಎನ್. ಹರೀಶ್ ಕುಮಾರ್ ತಿಳಿಸಿದ್ದಾರೆ.
ಗೋ ಹತ್ಯೆ ವಿಚಾರ ಮೈಸೂರಿಗೆ ಪುನೀತ್ ಕೆರೆಹಳ್ಳಿ ಆಗಮಿಸಿದ್ದಾರೆ.
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ 2024–25ನೇ ಸಾಲಿನ ಆದಾಯ–ವೆಚ್ಚದ ಲೆಕ್ಕಾಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.