Showing 20 of 2253 posts • Page 71 of 113
ವಜಾ ಮಾಡಿರುವ ಅಡುಗೆ ನೌಕರರನ್ನು ನಿಯೋಜಿಸುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ಕೋಟ್ಯಾಂಟರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ಮೈಸೂರು ತಾಲ್ಲೂಕು ಬಸವನಹಳ್ಳಿ ಬಳಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮೃತ ಮರಿಯನ್ನ ಮಡಿಲಿನಲ್ಲಿಟ್ಟು ಕೋತಿಯ ಮೂಕರೋಧನೆಯ ದೃಶ್ಯ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಮನಕಲುಕುವಂತಿತ್ತು. ಮೃತ ಮರಿ ಮಡಿಲಿನಲ್ಲಿಟ್ಟು ಅಸಹಾಯಕತೆಯಿಂದ ತಾಯಿ ಕೋತಿ ಓಡಾಡುತ್ತಿತ್ತು.
ಕೇರಳ ಮೂಲದ ವ್ಯಕ್ತಿಯೊಬ್ಬ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಭೋಗೇಶ್ವರ ಕಾಲೋನಿ ಗ್ರಾಮದ ಶುಂಠಿ ಜಮೀನಿನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಜೈಲರ್ 2 ಶೂಟಿಂಗ್ ಮೈಸೂರಿನ ಹುಣಸೂರು ತಾಲ್ಲೂಕಿನ ಬಿಳಿಕೆರೆ ಬಳಿ ನಡೆಯುತ್ತಿದೆ. ನಟ ರಜನಿಕಾಂತ್ ಅಭಿನಯದ ಚಿತ್ರವಾಗಿದ್ದು, ನೆಚ್ಚಿನ ನಟನನ್ನ ನೋಡಲು ಕಿಕ್ಕಿರಿದು ಜನ ಸೇರಿದ್ದರು.
ಇ ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 4 ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಪಟ್ಟಣದ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದಿಂದ ಶನಿವಾರ ಶ್ರೀ ಹನುಮ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಮತ್ತು ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು.
ಮದ್ದೂರಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ವಿವಿಧ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ನಡೆಸಿದರು.
ಪಟ್ಟಣದ ನ್ಯಾಯಾಲಯದ ಮೇಲಂತಸ್ತಿನ ಅಂಗಳದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ‘ವಕೀಲರ ಸಂಘ, ನ್ಯಾಯಾಂಗ ಇಲಾಖೆ ಸಂಯುಕ್ತಾಶ್ರಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ಅರಿವು ಕಾರ್ಯಕ್ರಮ ನಡೆಸಲಾಯಿತು.
ಪ್ರವಾಸಿಗರ ಮುಂದೆ ಚಿರತೆ ಜಿಂಕೆಯನ್ನು ಬೇಟೆಯಾಡಿದೆ. ಮಿಂಚಿನ ವೇಗದಲ್ಲಿ ಬಂದು ಜಿಂಕೆ ಮೇಲೆ ಚಿರತೆ ದಾಳಿ ಮಾಡಿದೆ. ಭರ್ಜರಿ ಬೇಟೆಯಾಡಿ ಚಿರತೆಯನ್ನು ಎಳೆದೊಯ್ದ ಘಟನೆ ಕಬಿನಿ ಹಿನ್ನೀರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಚಾಮರಾಜನಗರ- ನಂಜನಗೂಡು, ತಮಿಳುನಾಡುಗೆ ಸಂಪರ್ಕ ಕಲ್ಪಿಸುವ ರಾಷ್ಟ್ರಿಯ ಹೆದ್ದಾರಿಯಿಂದ ದಿನನಿತ್ಯ ಓಡಾಡುವ ಸಾವಿರಾರು ವಾಹನ ಮತ್ತು ಪ್ರಯಾಣಿಕರಿಗೆ ರಸ್ತೆಯ ಬದಿಯಲ್ಲಿ ಬಿದ್ದಿರುವ ಕಸದ ರಾಶಿ ಸ್ವಾಗತ ಕೋರುತ್ತದೆ.
ಕಬಿನಿ ಜಲಾಶಯದಿಂದ 25ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದ್ದು, ಕಬಿನಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಭೀತಿ ಹೆದುರಾಗಿದೆ. ಮೈದುಂಬಿ ಕಪಿಲಾ ನದಿ ಹರಿಯುತ್ತಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾಡಳಿತ ಹಾಗೂ ಯೋಗ ಸಮಿತಿಯಿಂದ ಮೈಸೂರಿನ ಅರಮನೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.
ತಾಲೂಕಿನ ವಾಜಮಂಗಲದಲ್ಲಿ ಎ.18ರಂದು ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಹಾಗೂ ನಾಮಫಲಕವನ್ನು ವಿರೂಪಗೊಳಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ನಂಜನಗೂಡಿನಲ್ಲಿ ರಾಜಕಾರಣ ಗರಿಗೆದರಿದ್ದು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಹಿನ್ನೆಲೆ ಜೂನ್ 26 ರಂದು ನಿರ್ದೇಶಕರ ಚುನಾವಣೆ ನಡೆಯಲಿದೆ.
ಸರಗೂರು ತಾಲ್ಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊಳೆಯೂರು ಗ್ರಾಮದಿಂದ ಕೆಬ್ಬೆಪುರ ಎ ಹಾಡಿಯ ಕಾಲೋನಿಗೆ ಹೋಗುವ ರಸ್ತೆ ಮಳೆ ಬಂದರೆ ಕೆಸರು ಗದ್ದೆಯಂತಾಗುತ್ತಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ನಾಟಿ ಮಾಡಿ ಪ್ರತಿಭಟನೆ ನಡೆಸಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆಯನ್ನು ನಡೆಸಲಾಯಿತು. ದೇವಿರಮ್ಮನಹಳ್ಳಿ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಪ್ರತಿ ಗ್ರಾಮದ ಜನರ ಮನೆ ಬಾಗಿಲು ತಟ್ಟುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಚಂದ್ರಶೇಖರ್ ನರೇಗಾ ಮತ್ತು ರೇಷ್ಮೆ ಇಲಾಖೆಯಿಂದ ಸೌಲಭ್ಯ
ಕಪಿಲಾ ನದಿ ಹೆಚ್ಚುವರಿ ನೀರಿನಿಂದ ಬೆಳೆ ನಷ್ಟ ಉಂಟಾಗಿರುವ ರೈತರಿಗೆ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.