Showing 20 of 2253 posts • Page 72 of 113
ಕೇರಳದ ವೈಯನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಗೆ ಹೆಚ್ಚುವರಿ ನೀರನ್ನು ಹೊರ ಬಿಟ್ಟಿರುವ ಪರಿಣಾಮ ನಂಜನಗೂಡು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಗದ್ದೆಗಳು ಮುಳುಗಡೆಯಾಗಿ ರೈತರು ಸಂಕಷ್ಟ
ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಚಿಲ್ಕುಂದ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.
ಅವಧಿ ಮೀರಿದ ಔಷಧಿ ಸಿಂಪಡಣೆ ಮಾಡಿ ಎರಡುವರೆ ಎಕರೆ ತಂಬಾಕು ಬೆಳೆ ನಾಶವಾಗಿ ರೈತ ಕಂಗಾಲಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಂ.ಶೆಟ್ಟಹಳ್ಳಿಯಲ್ಲಿ ನಡೆದಿದೆ.
ವಿವಾದಿತ ಸ್ಥಳದ ಅಳತೆ ಮಾಡುವ ವಿಚಾರದಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿಗೆ ನುಗ್ಗಿ ಕಂದಾಯ ಇಲಾಖೆ ಅಧಿಕಾರಿ ಮೇಲೆ ಹಲ್ಲೆ ಯತ್ನ ನಡೆಸಿದ್ದಲ್ಲದೆ ಕಚೇರಿ ಗಾಜು ಪುಡಿ ಮಾಡಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆ ಕಚೇರಿಯಲ್ಲಿ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಜಗುಲಿಯಲ್ಲಿಯೇ ಪಾಠ ಪ್ರವಚನ ಮಾಡಲಾಗುತ್ತಿತ್ತು.
ಹೆಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅರಣ್ಯ ವ್ಯಾಪ್ತಿಯ ದಮ್ಮನಕಟ್ಟೆ ಪ್ರದೇಶದಲ್ಲಿ ಹುಲಿರಾಯನ ಖದರ್ ಸಫಾರಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಂಡಿಸಿಸಿ ) ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿ,
ಪತಿಯ ಅನೈತಿಕ ಸಂಭಂಧ ರೆಡ್ ಹ್ಯಾಂಡಾಗಿ ಹಿಡಿದು ಪ್ರಶ್ನಿಸಿದ ಪತ್ನಿಗೆ ಪ್ರಿಯತಮೆ ಜೊತೆ ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ಶಿವನಗರದಲ್ಲಿ ನಡೆದಿದೆ.
ಜೂ.21 ರಂದು ನಂಜನಗೂಡಿನಲ್ಲಿ ವೀರಾಂಜನೇಯ ಧರ್ಮ ಜಾಗೃತಿ ಬಳಗ ನಂಜನಗೂಡು ಇವರ ವತಿಯಿಂದ ಹನುಮ ಜಯಂತಿಯನ್ನು ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣದ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್
ವೈದ್ಯರ ಮನೆಯಲ್ಲಿ ಖದೀಮರ ಕೈಚಳಕ ನಡೆಸಿದ್ದಾರೆ. ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಮನೆ ಬಾಗಿಲು ಮೀಟಿ ಕೃತ್ಯವೆಸಗಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯರ ಬಗ್ಗೆ ಲಘುವಾಗಿ ಹೇಳಿಕೆ ಖಂಡಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ರಮೇಶರಿಂದ ಸುದ್ದಿಗೋಷ್ಠಿ ನಡೆಸಿದರು.
ಹಳ್ಳಿಯ ಗೂಡಂಗಡಿಗಳಲ್ಲಿ ಅಕ್ರಮ ಮದ್ಯಮಾರಾಟ ನಂಜನಗೂಡು ಭಾಗದಲ್ಲಿ ಹೆಚ್ಚಾಗಿದೆ. ಚಿಲ್ಲರೆ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುವವರ ವಿರುದ್ಧ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ಶಾಲಾ ವಾಹನ ಇದಾಗಿದ್ದು, ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ ವಾಹನವಾಗಿದೆ.
ರಾಜ್ಯದಲ್ಲಿರುವ ದಲಿತರಿಗೆ ಸಾಗುವಳಿ ಭೂಮಿ ಮಂಜೂರು ಮತ್ತು ಸ್ಮಶಾನವನ್ನು ನೀಡುವಂತೆ ಕಂದಾಯ ಇಲಾಖೆಯ ಸಚಿವರಾದ ಕೃಷ್ಣೆಬೈರೇಗೌಡ ಅವರಿಗೆ ದಲಿತ ಸಂಘರ್ಷ ಸಮಿತಿ ಸಂಯೋಜಕದಿಂದ ಮನವಿ ಸಲ್ಲಿಸಿದರು.
ಬೆಂಗಳೂರಿನ ಕಾಲ್ತುಳಿತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಎಂ ತವರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲೆ ಮಕ್ಕಳಿಗೆ ಜಗುಲಿಯಲ್ಲಿ ಪಾಠ ನಡೆಯುತ್ತಿದ್ದು, ಮೂಲಭೂತ ಸೌಕರ್ಯವಂತೂ ಮರೀಚೀಕೆ
ಕಳೆದ ವರ್ಷ ರಾಜ್ಯದಲ್ಲಿ ಕಂಡು ಬಂದ ಪ್ರವಾಹದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಂಜನಗೂಡು ಮತ್ತು ವರುಣ ವಿಧಾನಸಭಾ ಕ್ಷೇತ್ರಗಳ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ಸಲುವಾಗಿ ಎಲ್ಲ ರೀತಿಯ ತಯಾರಿ ನಡೆಸಲಾಗಿದೆ.
ಪಿರಿಯಾಪಟ್ಟಣದಲ್ಲಿ ಹನಿಟ್ರ್ಯಾಪ್ ಕೃತ್ಯದಲ್ಲಿ ತೊಡಗಿದ್ದ ಪೊಲೀಸ್ ಅರೆಸ್ಟ್ ಆಗಿರುವ ಘಟನೆ ನಡೆದಿದೆ. ಸುಂದರ ಯುವತಿಯನ್ನ ಮುಂದೆ ಬಿಟ್ಟು ಹಣ ಉಳ್ಳವರ ಟ್ರ್ಯಾಪ್ ಮಾಡುತ್ತಿದ್ದ ಪೊಲೀಸ್
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗ್ರಾಮದ ರೈತ ಚೇತನ್ ಎಂಬುವವರ ಜಮೀನಿನಲ್ಲಿ ರಾತ್ರಿಯ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಕಬಿನಿ ಮತ್ತು ನುಗು ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದರು ಕೂಡ ಸಂಬಂಧ ಪಟ್ಟ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ