Showing 20 of 2247 posts • Page 8 of 113
ಲೇಡಿ ಸೂಪರ್ ವೈಸರ್ ನೀಡಿದ ಕಿರುಕುಳಕ್ಕೆ ಬೇಸತ್ತ ಮಹಿಳಾ ಉದ್ಯೋಗಿ ಡೆತ್ ನೋಟ್ ಬರೆದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಬರ ವೀಕ್ಷಣೆ ಮಾಡಿದರು. ಒಣಗಿದ ಬೆಳೆಯನ್ನು ವೀಕ್ಷಣೆ ಮಾಡಿದರು.
ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ಮೈದುಂಬಿ ಹರಿಯುತ್ತಿದ್ದು, ಸಾರ್ವಜನಿಕರು ಮತ್ತು ಭಕ್ತರು ಕಪಿಲಾ ನದಿ ಬಳಿ ತೆರಳದಂತೆ ನಿರ್ಬಂಧ ಹೇರಲಾಗಿದೆ ಎಂದು ತಹಶೀಲ್ದಾರ್ ಡಾ.ಸ್ಮಿತಾ ರಾಮು ಹೇಳಿದರು.
ನಂಜನಗೂಡಿನ ಎಲ್ಲಾ ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಕರ್ತವ್ಯವಾಗಿದೆ.
ಕಡೆ ಆಷಾಢ ಶುಕ್ರವಾರದ ಪೂಜಾ ಸಂಭ್ರಮ ನಡೆಯಿತು. ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ.
ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್ಪೇಟೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ.
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ನಂಜನಗೂಡು ತಾಲ್ಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಬರ ವೀಕ್ಷಣೆ ನಡೆಸಿದರು.
ಸಚಿವ ಸಂಪುಟ ವಿಚಾರದಲ್ಲಿ ನಮ್ಮ ತಂದೆಯೆ ಯಾವುದೇ ಅಸಮಾಧನಾವಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಮಾಜಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ 79ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಲ್ಲೂಕಿನ ಮರಳೂರು ಮತ್ತು ಗೊದ್ದನಪುರ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬಾರ್ ಮುಚ್ಚುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಸಿದ್ದರಾಮಯ್ಯ ಮತ್ತು ಹಾಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲೇ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಕ್ಷೇತ್ರದ ಜನರು ಮೂಲಭೂತ ಸೌಲಭ್ಯಕ್ಕಾಗಿ ಪರದಾಡುವಂತಾಗಿದೆ.
ಆಷಾಢ ಮಾಸ ಹಿನ್ನಲೆ ನಾಡದೇವಿಯ ದರುಶನ ಪಡೆಯುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ.
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ದಲಿತ ನಾಯಕ ಶಾಸಕ ಹೆಚ್.ಸಿ ಮಹದೇವಪ್ಪಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸಾಮೂಹಿಕ ರಾಜೀನಾಮೆಗೆ ಕೈ ನಾಯಕರು ಮುಂದಾಗಿದ್ದಾರೆ.
ಇಂದು ನಾಡದೇವಿ ಚಾಮುಂಡೇಶ್ವರಿ ವರ್ಧಂತಿ. ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ.
ನುಗು ಜಲಾಶಯದಿಂದ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಅಕ್ರಮ ಗಾಂಜಾ ಮಾರಾಟವನ್ನು ಮುಸ್ಲಿಂ ಯುವಕರು ತಡೆದಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಬಳಿ ನಡೆದಿದೆ.
ಹುಣಸೂರು ಉಪ ವಿಭಾಗಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕೇರಳದ ವೈನಾಡಿನಲ್ಲಿ ಹೆಚ್ಚಾದ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ.
ಶಾಸಕ ತನ್ವಿರ್ ಗೆ ಸಚಿವ ಸ್ಥಾನ ಕೈ ತಪ್ಪಿದೆ. ತನ್ವಿರ್ ಬೆಂಬಲಿಗರಿಂದ ರಸ್ತೆ ತಡೆದು ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಲಾಯಿತು.
ರಸ್ತೆ, ನೀರು, ನೆರಳು – ಇವೆಲ್ಲವನ್ನೂ ಕೊಡುವುದು ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕೆಲಸ. ಆದರೆ, ಇಲ್ಲೊಬ್ಬ ರೈತ, ನಾವು ಕಾಯೋದು ಬೇಡ, ನಾವೇ ಮಾಡೋಣ ಎಂದು ಕೆಲಸ ಮಾಡಿ ತೋರಿಸಿದ್ದಾನೆ.