Showing 20 of 2255 posts • Page 85 of 113
ವಿಧ ದಾಸೋಹಿ ಸಿದ್ದಗಂಗಾ ಶ್ರೀ ಗಳಾದ ಶಿವಕುಮಾರ ಸ್ವಾಮೀಜಿಗಳ 118ನೇ ಜಯಂತೋತ್ಸವ ಅಂಗವಾಗಿ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ವರದಿ ತಿರಸ್ಕರಿಸಿ ಎಂದು ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ತಕರಾರು ಅರ್ಜಿ ಸಲ್ಲಿಸಿದೆ.
ದಕ್ಷಿಣ ಕಾಶಿ ನಂಜನಗೂಡು ದೊಡ್ಡ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗೌತಮ ಪಂಚ ಮಹಾರಥೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ಕೆಎಸ್ ಆರ್ ಟಿಸಿ ಬಸ್ ಓವರ್ ಟೇಕ್ ಬರದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಂಜನಗೂಡು ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಇಂದು ಮಂಗಳವಾರ ಸಂಜೆ 6 ಗಂಟೆಯ ಸಮಯದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 2024 – 25 ನೇ ಸಾಲಿನ ಮೀನುಗಾರರಿಗೆ ಸಲಕರಣೆ ಕಿಟ್ ಗಳನ್ನು ಶಾಸಕ ದರ್ಶನ್ ಧ್ರುವನಾರಾಯಣ್ ವಿತರಿಸಿದರು.
ಸಮೀಪದ ಮಲ್ಲನ ಮೂಲೆ ಕ್ಷೇತ್ರದಲ್ಲಿ ಮಂಗಳವಾರ ಸಿದ್ದಗಂಗಾ ಶ್ರೀಗಳ 118 ನೇ ಜನ್ಮದಿನ ಹಾಗೂ ಬಸವ ಜಯಂತಿ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು.
ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಯತ್ನಾಳ ಉಚ್ಚಾಟನೆ ಖಂಡಿಸಿ ಹಿಂದೂಪರ ಸಂಘಟನೆ ಹಾಗೂ ಪಂಚಮಸಾಲಿ ಸಮುದಾಯದ ಜನರಿಂದ ಪ್ರತಿಭಟನೆ ನಡೆಸಲಾಗಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ದೊಡ್ಡಜಾತ್ರೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ತಾಲ್ಲೂಕು ಆಡಳಿತ ಭಕ್ತರಿಗಾಗಿ ಸಕಲ ವ್ಯವಸ್ಥೆ ಕಲ್ಪಿಸಲು ಸನ್ನದ್ದರಾಗುತ್ತಿದ್ದಾರೆ.
ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಇರುವ ನಾಗಣಪುರ ಆದಿವಾಸಿ ಕಾಲೋನಿಯಲ್ಲಿ ನಡೆದಿದೆ.
ಇಂದು ಮುಸ್ಲಿಂಮರ ಪವಿತ್ರ ರಂಜಾನ್ ಹಬ್ಬದ ಹಿನ್ನಲೆ ಮೈಸೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮಂಡಿ ಮೊಹಲ್ಲಾದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಯುಗಾದಿ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆದಿದೆ.
ನದಿಯಲ್ಲಿ ಈಜಲು ಹೋಗಿ ಇಬ್ಬರು ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಮೇದಿನಿ ಗ್ರಾಮದಲ್ಲಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡಿನ ನಿವಾಸಿ ಡಾ.ಸರಸ್ವತಿ ಚಂದ್ರಶೇಖರ್ ರವರಿಗೆ ತಮಿಳುನಾಡಿನಲ್ಲಿ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ ವೃತ್ತಿಪರ ಕೌಶಲ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ನಾಳೆ ಯುಗಾದಿ ಹಬ್ಬ ಹಿನ್ನಲೆ ಹಸು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕಾಮಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.
ಸ್ವಚ್ಛ ಸರ್ವೇಕ್ಷಣ ಅಭಿಯಾನದ ಹಿನ್ನೆಲೆ ಮತ್ತೊಮ್ಮೆ ಸ್ವಚ್ಛ ನಗರಿ ಬಿರುದು ಪಡೆದುಕೊಳ್ಳಲು ಮೈಸೂರಿಗರು ಕೈ ಜೋಡಿಸಿ ಎಂದು ಅಂತಾರಾಷ್ಟ್ರೀಯ ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ ಮಾಡಿಕೊಂಡಿದ್ದಾರೆ.
6 ವರ್ಷ ಯತ್ನಾಳ್ ಉಚ್ಚಟಾನೆ ವಿಚಾರವಾಗಿ ಮೈಸೂರಿನಲ್ಲಿ ಛಲವಾದಿ ನಾರಾಯಣ್ ಸ್ವಾಮಿ ಹೇಳಿಕೆ ನೀಡಿದ್ದು, ಯತ್ನಾಳ್ ಕೂಡ ನಮ್ಮ ನಾಯಕರು, ನಾನು ಸಾಕಷ್ಟು ಬಾರಿ ಹೇಳಿದ್ದೆ
ರೈತರ ಕೆಲಸಗಳನ್ನು ವಿಳಂಬ ಮಾಡುತ್ತಿರುವ ತಾಲ್ಲೂಕು ಆಡಳಿತದ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದು ರೈತ ಸಂಘ ಮತ್ತು ಹಸಿರು ಸೇನೆಯ ರೈತರು ತಾಲ್ಲೂಕು ಕಚೇರಿಯ ಒಳ ಆವರಣದಲ್ಲಿ ಮಲಗಿ ನಿದ್ರಿಸುವ ಮೂಲಕ ದಿಡೀರ್ ಪ್ರತಿಭಟನೆ ನಡೆಸಿದರು.
ಹಾಲಿನ ದರ ಏರಿಕೆ ವಿಚಾರವಾಗಿ ಮೈಸೂರಿನಲ್ಲಿ ಛಲವಾದಿ ನಾರಾಯಣ ಸ್ವಾಮಿ ಹೇಳಿಕೆ ನೀಡಿದ್ದಾರೆ. ಈ ಸರ್ಕಾರ ಎಲ್ಲದಕ್ಕೂ ದರ ಏರಿಸುತ್ತಾ ಬಂದಿದೆ.
ಬೇಸಿಗೆಗೆ ಎಲ್ಲೆಲ್ಲೂ ನೀರಿಗೆ ಹಾಹಾಕಾರ ಉಂಟಾಗಿದ್ದು, ಮನುಷ್ಯ ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳಿಗೂ ನೀರಿಗೆ ಪರದಾಡುವಂತಾಗಿದೆ. ಹೀಗಾಗಿ ಪಕ್ಷಿಗಳ ದಾಹ ತಣಿಸಲು ಮೈಸೂರು ಯುವಕರು ಮುಂದಾಗಿದ್ದಾರೆ.
ಹಾಲಿನ ದರ ಏರಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳಿಂದ ಮೈಸೂರಿನಲ್ಲಿ ಮಹಾರಾಜ ಕಾಲೇಜು ಮೈದಾನದ ಮುಂಭಾಗದ ಹಾಲಿನ ಬೂತ್ ಬಳಿ ಪ್ರತಿಭಟನೆ ನಡೆಸಲಾಯಿತು.