Showing 20 of 2247 posts • Page 86 of 113
ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ಬದಲಾವಣೆ ವಿಚಾರದ ಬಗ್ಗೆ ಹೇಳಿಕೆಯನ್ನು ಖಂಡಿಸಿ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ನಂಜನಗೂಡು ಬಿಜೆಪಿ ಕಾರ್ಯಕರ್ತರಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಮಧ್ಯೆ ರಾತ್ರಿ ಶ್ರೀ ಮಹದೇಶ್ವರಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿದೆ.
2025-26ನೇ ಸಾಲಿನ ಆಯಾವ್ಯಯದ ಪೂರ್ವಭಾವಿ ಸಭೆಯನ್ನು ಪಟ್ಟಣದ ಜೆಡಿಎಸ್ ಭವನದಲ್ಲಿ ಪುರಸಭೆ ಅಧ್ಯಕ್ಷೆ ವಸಂತ ಶ್ರೀಕಂಠ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಪಿ.ಎಲ್.ಡಿ ಬ್ಯಾಂಕ್ ನ ಆಡಳಿತ ಮಂಡಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪಿ ಎಲ್ ಡಿ ಬ್ಯಾಂಕ್ ಕಛೇರಿಯಲ್ಲಿ ಚುನಾವಣೆ ನಡೆಯಿತು.
ಬೈಕ್ ನಲ್ಲಿ ತೆರಳುತ್ತಿದ್ದ ಸವಾರನಿಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿರುವ ಘಟನೆ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.
ಜಮೀನು ವಿವಾದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ 8 ಮಂದಿ ವಿರುದ್ದ ಎಫ್ಐಆರ್ ದಾಖಲಾಗಿದೆ.
ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿರುವ ಬಡ ಜನರಿಗೆ ನಿವೇಶನ ನೀಡಬೇಕು ಎಂದು ಆಗ್ರಹಿಸಿದರು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.
ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರವಾದ ದಾರುಣ ಘಟನೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಸಾರ್ವಜನಿಕ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಾ ಅಪಾಯಕಾರಿ ಸ್ಟಂಟ್ ಮಾಡಿ ವಾಹನ ಸವಾರರಿಗೆ ತೊಂದರೆ ಭಯವುಂಟು ಮಾಡುತ್ತಾ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನನ್ನ ನಂಜನಗೂಡು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಇಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಕರೆ ನೀಡಿದ್ದು, ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿ ಹಲವರಿಂದ ನೈತಿಕ ಬೆಂಬಲ ಸಿಕ್ಕಿದೆ.
ಕೊನೆಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ರ್ವೇ ಅಧಿಕಾರಿಗಳಿಗೆ ಮಚ್ಚು ತೋರಿಸಿ ಪೊಲೀಸರ ಸಮ್ಮುಖದಲ್ಲೇ ಬಾಯಲ್ಲಿ ಬೆಂಕಿ ಉಗುಳಿ ಬೆದರಿಕೆ ಹಾಕಿದ ಘಟನೆ ಹುಣಸೂರು ತಾಲೂಕು ಹನಗೋಡು ಹೋಬಳಿ ಶಿಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೌಜನ್ಯ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಟೌನ್ ಹಾಲ್ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಕೆಎಂಎಫ್ ನಿರ್ದೇಶಕ ಕೆ ಸಿ ಬಲರಾಮ್ ರವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಕುಪ್ಯಾ ಗ್ರಾಮದ ಡೈರಿ ಆವರಣದಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಆಕ್ಸಿಜನ್ ಸೌಲಭ್ಯ ಇಲ್ಲದ ಸರ್ಕಾರಿ ಆಂಬುಲೆನ್ಸ್ ನಲ್ಲಿ ಮಗು ಸಾವನ್ನಪ್ಪಿದ ಘಟನೆ ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಮೈಸೂರಿನ ದೊಡ್ಡಸ್ಪತ್ರೆಗೆ ತೆರಳುತ್ತಿದ್ದ ಆಂಬುಲೆನ್ಸ್ ನಲ್ಲಿ ನಡೆದಿದೆ.
ಹಳೆ ದ್ವೇಷದ ಹಿನ್ನಲೆ ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಿಗೂರು ಬಳಿ ನಡೆದಿದೆ.
ನಂಜನಗೂಡಿನಲ್ಲಿ ಮತ್ತೆ ಖಾಸಗಿ ಫೈನಾನ್ಸ್ ದಬ್ಬಾಳಿಕೆ ಮುಂದುವರಿದಿದೆ. ವಸೂಲಿಗೆ ಬಂದ ಸಿಬ್ಬಂದಿಗಳು ಗೂಂಡಾ ವರ್ತನೆ ಪ್ರದರ್ಶಿಸಿದ್ದಾರೆ. ಹಣ ನೀಡದ ತಾಯಿ ಮಗನ ಮೇಲೆ ಹಲ್ಲೆ ಮಾಡಿ ದರ್ಪ ತೋರಿಸಿದ್ದಾರೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಮತ್ತೆ ಮಗು ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಕೇವಲ 14 ಸಾವಿರಕ್ಕೆ ಹೆಣ್ಣುಮಗು ಮಾರಾಟ ಮಾಡಲಾಗಿದೆ.
ಮುಡಾ 50:50 ಹಗರಣ ವಿಚಾರವಾಗಿ ಕೋರ್ಟ್ ವಿಚಾರಣೆ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸತ್ಯ ಮರೆ ಮಾಚಲು ಸಾಧ್ಯವಿಲ್ಲ.