Bengaluru 22°C
Ad

ನಾಡಿನ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇಂದು ಮುಂಜಾನೆ ವಿಧಿವಶ!

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. 

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ವಸಂತ್ ನಾಡಿಗೇರ್ ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.

Ad
Ad
Nk Channel Final 21 09 2023