Ad

ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಹೃದಯಾಘಾತದಿಂದ ಸಾವು

ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರಧ್ವಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಶಿರೀಶ್, ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರಿಜಾ ಕೊನೆಡೆಲಾ ಅವರನ್ನು ವಿವಾಹವಾಗಿದ್ದರು. ಆದರೆ ಶ್ರಿಜಾ, ಶೀರೀಶ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು, ಇಂದು (ಜೂನ್ 19) ಬೆಳಿಗ್ಗೆ ಶಿರೀಶ್ ನಿಧನ ಹೊಂದಿದ್ದಾರೆ.

300x250 2

ಈ ಮದುವೆಗೆ ಚಿರಂಜೀವಿ ಅವರು ತೀವ್ರವಾಗಿ ವಿರೋಧಿಸಿದ್ದರು, ಈ ಕಾರಣ ಕುಟೊಂಬಕ್ಕೆ ತಿಳಿಯದಂತೆ ಮದುವೆ ಮಾಡಿಕೊಂಡಿದ್ದರು. ಆದರೆ ಈ ಸಂಬಂಧ ಹೆಚ್ಚು ಕಾಲ ಉಳಿಯಲಿಲ್ಲ.

ಶಿರೀಶ್ ಕಳೆದ ಕೆಲವು ತಿಂಗಳಿನಿಂದಲ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರಂತೆ. ಆದರೆ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶ್ರೀಜಾ ಹಾಗೂ ಶಿರೀಶ್ ಮದುವೆಯಾದ ಕೆಲ ವರ್ಷಗಳಲ್ಲಿ ಅವರಿಗೆ ಮಗಳೊಬ್ಬಳು ಜನಿಸಿದಳು. ಅದಾದ ಬಳಿಕ ಶ್ರೀಜಾ ಶಿರೀಶ್​ರಿಂದ ವಿಚ್ಛೇದನ ಪಡೆದು ಮರು ಮದುವೆ ಆದರು. ಆ ಬಳಿಕ ಶಿರೀಶ್ ಸಹ ಮತ್ತೊಂದು ಮದುವೆಯಾದರು.

Ad
Ad
Nk Channel Final 21 09 2023
Ad