Ad

ಭಾರತದ ಖ್ಯಾತ ಗಾಯಕಿ ಉಷಾ ಉತ್ತುಪ್‌ ಪತಿ ಹೃದಯಾಘಾತದಿಂದ ನಿಧನ

ಭಾರತೀಯ ಪಾಪ್ ಐಕಾನ್, ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಪತಿ ಜಾನಿ ಚಾಕೋ ಉತ್ತುಪ್ ಅವರು ಸೋಮವಾರ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.ಜಾನಿ ಚಾಕೋ ಉತ್ತುಪ್ ಅವರಿಗೆ 78 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ಭಾರತೀಯ ಪಾಪ್ ಐಕಾನ್, ಬಹು ಭಾಷಾ ಗಾಯಕಿ ಉಷಾ ಉತ್ತುಪ್‌ ಅವರ ಪತಿ ಜಾನಿ ಚಾಕೋ ಉತ್ತುಪ್ ಅವರು ಸೋಮವಾರ ಹೃದಯಾಘಾತದಿಂದ ಕೋಲ್ಕತ್ತಾದಲ್ಲಿ ನಿಧನರಾದರು.ಜಾನಿ ಚಾಕೋ ಉತ್ತುಪ್ ಅವರಿಗೆ 78 ವರ್ಷ ವಯಸ್ಸಾಗಿತ್ತು. ತಮ್ಮ ನಿವಾಸದಲ್ಲಿ ಟಿವಿ ನೋಡುವಾಗ ಸ್ಥಳದಲ್ಲಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲ ತಿಳಿಸಿದೆ.

Ad
300x250 2

ಜಾನಿ ಚಾಕೋ ಅವರು ಉಷಾ ಉತ್ತುಪ್‌ ಅವರಿಗೆ ಎರಡನೇ ಪತಿ. ದಂಪತಿಗೆ ಮಗ ಒಬ್ಬ ಮಗ ಮತ್ತು ಮಗಳು ಇದ್ದರು. ಇಂದು ಜು.9( ಮಂಗಳವಾರ) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ, ಸಂಗೀತ ಉದ್ಯಮ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಉಷಾ ಉತ್ತುಪ್ ಅವರಿಗೆ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ನೀಡಿ ಗೌರವಿಸಲಾಯಿತು.

 

Ad
Ad
Nk Channel Final 21 09 2023
Ad