Bengaluru 27°C
Ad

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

Hamsa

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

Ad
300x250 2

46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು.

Ad
Ad
Nk Channel Final 21 09 2023
Ad