Showing 20 of 42 posts • Page 1 of 3
ರಾಯಚೂರಿನ ಜಹಿರಾಬಾದ್ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಇಂದಿನಿಂದ ಚಾಲನೆ ದೊರೆಯಲಿದೆ.
ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ನ ಪಿಡಬ್ಲ್ಯೂಡಿ ಕಚೇರಿ ಮುಂಭಾಗದ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ರಾಜ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಸಿಂಧನೂರು ಪೊಲೀಸರು, 5.12 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ.
ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರೆದುರೇ ಮಹಿಳೆ ಚಪ್ಪಲಿಯಿಂದ ಸರಿಯಾಗಿ ಧರ್ಮದೇಟು ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ.
ತಾಲೂಕಿನ ಹಿರೇಕೋಟ್ನೆಕಲ್–ಬ್ಯಾಗವಾಟ್ ರಸ್ತೆಯ ಕೆನಾಲ್ ಸಮೀಪದ ಹೊಲ ಪ್ರದೇಶದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿ, 11 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆನ್ಲೈನ್ ನಲ್ಲಿ ಸಾಲ ಕೊಡಿಸುವುದಾಗಿ ಹೇಳಿ ಜನರಿಂದ ಹಣ ವಸೂಲಿ ಮಾಡಿ ಮೋಸ ಮಾಡುತ್ತಿದ್ದ ತಂಡವನ್ನು ರಾಯಚೂರು ಸೈಬರ್ ಅಪರಾಧ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ.
ಮಧ್ಯಪ್ರಾಚ್ಯ ದೇಶಗಳ ಯುದ್ದದ ಎಫೆಕ್ಟ್ ಈರುಳ್ಳಿ ಬೆಳೆಗಾರರಿಗೂ ತಟ್ಟಿದ್ದು, ಟೊಮ್ಯಾಟೊ ಬೆಲೆ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದರೆ, ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ.
ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವುಂಟಾಗಿದ್ದು, ಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್ ಬದಲಾಗಿ ಸಚಿವ ಸತೀಶ್ ಜಾರಕಿಹೊಳಿ ಇಳಿಯಬೇಕಿದ್ದ ಹೆಲಿಪ್ಯಾಡ್ ನಲ್ಲಿ ಸಿಎಂ ಹೆಲಿಪಾಕ್ಟರ್ ಲ್ಯಾಂಡಿಗ್ ಆಗಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.
ವಿವಿಧೆಡೆ ಮೋಟರ್ ಪಂಪ್ ಸೆಟ್ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳಿಂದ 4.31 ಲಕ್ಷ ರೂ.ಮೌಲ್ಯ
ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಸಾರಿಗೆ ಬಸ್ ವೊಂದು ಪಲ್ಟಿಯಾಗಿದ್ದು, ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದರೆ, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಘಟನೆ ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ಗಣೇಶ ಮೆರವಣಿಗೆ ಸಂದರ್ಭದಲ್ಲಿ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ಗಣೇಶ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 6 ಲಾರಿಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಸಾತ್ ಮೈಲ್ ಕ್ರಾಸ್ ಬಳಿ ನಡೆದಿದೆ. ರಾಯಚೂರು ಎಸ್ಪಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮರಳು ಸಹಿತ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ.
ಕೆಎಸ್ಆರ್ಟಿಸಿ ಬಸ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ನನ್ನು ನೋಡಲು ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ನಿನ್ನೆ ಬಳ್ಳಾರಿಗೆ ಬಂದಿದ್ದರು. ಇದಕ್ಕೂ ಮುನ್ನ ನಟ ದರ್ಶನ್ಗಾಗಿ ಪತ್ನಿ ವಿಜಯಲಕ್ಷ್ಮಿ, ದೇವರ ಮೊರೆ ಹೋಗಿದ್ದಾರೆ.
ಶಾಲಾ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 40ಕ್ಕೂ ಹೆಚ್ವು ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.