ರಾಯಚೂರು: ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಅಕ್ಕಮಹಾದೇವಿ ಪಿಜಿ ಸೆಂಟರ್ನಲ್ಲಿ ನಡೆದಿದೆ.
45 ವರ್ಷದ ಬಸ್ಸಯ್ಯು ಧುಮತಿ ಸಾವನ್ನಪ್ಪಿದ ವ್ಯಕ್ತಿ. ಬಸ್ಸಯ್ಯ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಕಾಲೇಜು ಕಟ್ಟಡದ ಮೇಲೆ ಮಲಗಿದ್ದ ಬಸ್ಸಯ್ಯ ಮೇಲಿಂದ ಬಿದ್ದು ಕೊನೆಯುಸಿರೆಳೆದಿದ್ದಾರೆ.
ಮಧ್ಯರಾತ್ರಿ ನಿದ್ದೆ ಮಂಪರಿನಲ್ಲಿ ಆಯ ತಪ್ಪಿ ಬಿದ್ದು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

