ಆರ್ಟಿಕಲ್ 370 ರದ್ಧತಿ : ಕಣಿವೆ ರಾಜ್ಯದಲ್ಲಿ ಶೂನ್ಯಕ್ಕಿಳಿದ ಹಾರಾಟ, ಕಲ್ಲು ತೂರಾಟ!

ಆರ್ಟಿಕಲ್ 370 ರದ್ಧತಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ‘ಕಲ್ಲು ತೂರಾಟ’ ಶೂನ್ಯಕ್ಕೆ ಇಳಿದಿದ್ದು, ಅತಿರೇಕಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿದೆ ಎಂದು ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಣಿವೆ ರಾಜ್ಯದ ಸದ್ಯದ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು. ಕಣಿವೆ ರಾಜ್ಯದಲ್ಲಿ ಪಾಕಿಸ್ತಾನದಿಂದ ಒಳನುಸುಳಿ ಬರುತ್ತಿರುವ ಉಗ್ರರ ಹಾವಳಿ ಮತ್ತು ದಾಳಿ ಇನ್ನೂ ಸಂಪೂರ್ಣ ನಿಂತಿಲ್ಲ. ಆದರೆ ಪ್ರಕರಣಗಳು ಇಳಿಮುಖವಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ 2022ರಿಂದ ಇದುವರೆಗೆ ಸಿಆರ್‌ಪಿಎಫ್‌ನ 10 ಸಿಬ್ಬಂದಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ. ಸಿಬ್ಬಂದಿಗಳನ್ನು ಕಾಡುವ ಮಾನಸಿಕ ಒತ್ತಡ ಪರಿಹರಿಸಲು ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಸಿಬ್ಬಂದಿ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವ ’ಚೌಪಾಲ್’ ಕೂಡಾ ಒಳಗೊಂಡಿದೆ ಎಂದು ಹೇಳಿದ ಅವರು, ಅಪಾಯ ನಿಧಿಯಿಂದ ಆರ್ಥಿಕ ಸಹಾಯದ ಅಡಿಯಲ್ಲಿ, ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗೆ ನೀಡಲಾಗುವ ಪರಿಹಾರ ಧನದ ಮೊತ್ತವನ್ನು ರೂ. 20 ಲಕ್ಷದಿಂದ ರೂ. 30 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಇತರ ಎಲ್ಲಾ ಪ್ರಕರಣಗಳಿಗೆ ಈ ಪರಿಹಾರ ಧನ ರೂ. 15 ಲಕ್ಷದಿಂದ ರೂ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ವೇಳೆ ಒಟ್ಟು 41 ವಿಐಪಿಗಳಿಗೆ ಸಿಆರ್‌ಪಿಎಫ್‌ನಿಂದ ಭದ್ರತೆ ಒದಗಿಸಲಾಗಿತ್ತು. ಚುನಾವಣೆಯ ನಂತರ 27 ಮಂದಿಯ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಕೂಡಾ ಇದೇ ಸಂದರ್ಭ ಅವರು ಮಾಹಿತಿ ನೀಡಿದರು.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago