News Karnataka Kannada
Monday, May 06 2024
ಸಂಪಾದಕರ ಆಯ್ಕೆ

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ಬೆನ್ನಲ್ಲೇ ಗಗನಕ್ಕೇರಿದ ಚಿನ್ನದ ಬೆಲೆ

Gold
Photo Credit :

ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 930 ರೂ. ಏರಿಕೆಯಾಗಿದೆ. ಅತ್ತ ಬೆಳ್ಳಿ ದರವೂ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಚಿನ್ನ- ಬೆಳ್ಳಿಯ ಬೆಲೆ ಮತ್ತೆ ಗಗನಕ್ಕೇರಲು ಶುರುವಾಗಿದೆ.ಎರಡು ದಿನಗಳಿಂದ ಇಳಿಕೆ ಕಾಣುವ ಮೂಲಕ ಗ್ರಾಹಕರು ನಿಟ್ಟುಸಿರು ಬಿಡುವಂತೆ ಮಾಡಿದ್ದ ಚಿನ್ನದ ಬೆಲೆ ನಿನ್ನೆಯಿಂದ (ಗುರುವಾರ) ಮತ್ತೆ ಏರಿಕೆಯಾಗಿದೆ.

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಘೋಷಿಸಿದ ನಂತರ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂ ಡಿದೆ. ಇದರಿಂದ ಚಿನ್ನಾಭರಣ ಖರೀದಿಸುವವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 930 ರೂ. ಏರಿಕೆಯಾಗಿದೆ. ಅತ್ತ ಬೆಳ್ಳಿ ದರವೂ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಚಿನ್ನ- ಬೆಳ್ಳಿಯ ಬೆಲೆ ಮತ್ತೆ ಗಗನಕ್ಕೇರಲು ಶುರುವಾಗಿದೆ. ಹಾಗಾದರೆ, ಇಂದು ಯಾವೆಲ್ಲ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ. ಇಂದು ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 850 ರೂ. ಏರಿಕೆಯಾಗಿದೆ. ಹಾಗೇ 24 ಕ್ಯಾರೆಟ್ ಚಿನ್ನದ ಬೆಲೆ 930 ರೂ. ಏರಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 46,000 ರೂ. ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ 50,180 ರೂ. ಇದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,270 ರೂ, ಮುಂಬೈ- 46,850 ರೂ, ದೆಹಲಿ- 46,850 ರೂ, ಕೊಲ್ಕತ್ತಾ- 46,850 ರೂ, ಬೆಂಗಳೂರು- 46,850 ರೂ, ಹೈದರಾಬಾದ್- 46,850 ರೂ, ಕೇರಳ- 46,850 ರೂ, ಪುಣೆ- 46,900 ರೂ, ಮಂಗಳೂರು- 46,850 ರೂ, ಮೈಸೂರು- 46,850 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ:
ಚೆನ್ನೈ- 52,660 ರೂ, ಮುಂಬೈ- 51,110 ರೂ, ದೆಹಲಿ- 51,110 ರೂ, ಕೊಲ್ಕತ್ತಾ- 51,110 ರೂ, ಬೆಂಗಳೂರು- 51,110 ರೂ, ಹೈದರಾಬಾದ್- 51,110 ರೂ, ಕೇರಳ- 51,110 ರೂ, ಪುಣೆ- 51,200 ರೂ, ಮಂಗಳೂರು- 51,110 ರೂ, ಮೈಸೂರು- 51,110 ರೂ. ಇದೆ. 2 ದಿನಗಳ ಹಿಂದೆ 280 ರೂ. ಇಳಿಕೆಯಾಗಿದ್ದ ಚಿನ್ನದ ದರ ಇಂದು 930 ರೂ. ಏರಿಕೆ ಕಂಡಿದೆ.

ಇಂದಿನ ಬೆಳ್ಳಿಯ ದರ:
ಬೆಳ್ಳಿ ಬೆಲೆಯಲ್ಲಿ ನಿನ್ನೆಗಿಂತ ಇಂದು ಭಾರೀ ಏರಿಕೆ ಕಂಡುಬಂದಿದೆ. ನಿನ್ನೆಗಿಂತ ಇಂದು 1 ಕೆಜಿ ಬೆಳ್ಳಿಗೆ 1,700 ರೂ. ಹೆಚ್ಚಳವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿ ದರ ನಿನ್ನೆ 64,300 ರೂ. ಇದ್ದುದು ಇಂದು 1,700 ರೂ. ಏರಿಕೆ ಕಾಣುವ ಮೂಲಕ 66,000 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ ಬೆಂಗಳೂರು- 72,700 ರೂ, ಮೈಸೂರು- 72,700 ರೂ., ಮಂಗಳೂರು- 72,700 ರೂ., ಮುಂಬೈ- 66,000 ರೂ, ಚೆನ್ನೈ- 72,700 ರೂ, ದೆಹಲಿ- 66,000 ರೂ, ಹೈದರಾಬಾದ್- 72,700 ರೂ, ಕೊಲ್ಕತ್ತಾ- 66,000 ರೂ. ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು