ಗುಡ್‌ ನ್ಯೂಸ್: ವಾಟ್ಸಾಪ್‌ ಬಳಕೆದಾರರಿಗೆ ಹೊಸ ವೈಶಿಷ್ಟ್ಯತೆಯನ್ನು ಪರಿಚಯಿಸಿದ ವಾಟ್ಸಾಪ್

ಪ್ರಸ್ತುತ ವಾಟ್ಸಾಪ್ ಗ್ರೂಪ್ ಗಳಿಂದ ಯಾವುದೇ ಸದಸ್ಯ ಹೊರ ಬಂದ ನೋಟಿಫಿಕೇಶನ್ ಹೋಗಿ ಗ್ರೂಪ್ ನಲ್ಲಿರುವ ಎಲ್ಲಾ ಸದಸ್ಯರಿಗೂ ತಿಳಿಯುತ್ತದೆ. ಆದರೆ, ಸದಸ್ಯ ಹೊರ ಹೋದರೆ ಕೇವಲ ಅಡ್ಮಿನ್ ಗೆ ಮಾತ್ರ ತಿಳಿಯುವಂತಹ ಹೊಸ ವೈಶಿಷ್ಟ್ಯತೆಯನ್ನು ವಾಟ್ಸಾಪ್ ಪರಿಚಯಿಸಲಿದೆ.

ಈ ಹೊಸ ವಿಧಾನ ಸದ್ಯದಲ್ಲಿಯೇ ಅನುಷ್ಠಾನಗೊಳ್ಳಲಿದೆ. ಅಂದರೆ, ಸದಸ್ಯನೊಬ್ಬ ಗ್ರೂಪಿನಿಂದ ಹೊರ ಬಂದ ತಕ್ಷಣ ಅದರ ನೋಟಿಫಿಕೇಶನ್ ಕೇವಲ ಅಡ್ಮಿನ್ ಗೆ ಮಾತ್ರ ಹೋಗುತ್ತದೆ.

ಈ ಹೊಸ ವೈಶಿಷ್ಟ್ಯತೆಯು ವಾಟ್ಸಾಪ್ ಪ್ಲಾಟ್ ಫಾರ್ಮ್ ನ ಎಲ್ಲಾ ಗ್ರೂಪ್ ಗಳು ಮತ್ತು ಕಮ್ಯುನಿಟಿಗಳಿಗೆ ಲಭ್ಯವಾಗಲಿದೆ. ಬಳಕೆದಾರರು ಈ ಸೌಲಭ್ಯ ಪಡೆಯಲು ಸೆಟ್ಟಿಂಗ್ಸ್ ನಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಬೇಕಿಲ್ಲ.

ಈ ವೈಶಿಷ್ಟ್ಯತೆಯ ಸ್ಕ್ರೀನ್ ಶಾಟ್ ಅನ್ನು WABetaInfo ಹಂಚಿಕೊಂಡಿದೆ. ಪರೀಕ್ಷಾರ್ಥವಾಗಿ ವಾಟ್ಸಾಪ್ ಡೆಸ್ಕ್ ಟಾಪ್ ಆಯಪ್ ನಲ್ಲಿ ಈ ಸೌಲಭ್ಯವನ್ನು ಪರೀಕ್ಷಿಸಲಾಗಿದ್ದು, ಯಶಸ್ವಿಯಾಗಿದೆ. ಸದ್ಯದಲ್ಲೇ ಈ ವ್ಯವಸ್ಥೆಯನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಗಳೆರಡಲ್ಲೂ ಅನುಷ್ಠಾನಕ್ಕೆ ತರಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ವಾಟ್ಸಾಪ್ ಗ್ರೂಪ್ ಗಳನ್ನು ರಚಿಸುವುದು ಮತ್ತು ವ್ಯಕ್ತಿಗಳ ಸಹಮತಿ ಇಲ್ಲದೇ ಅವರನ್ನು ಆ ಗ್ರೂಪಿಗೆ ಸೇರಿಸಿಕೊಂಡು ಕಿರಿಕಿರಿ ಉಂಟು ಮಾಡುವ ಪ್ರವೃತ್ತಿಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಇಷ್ಟವಿಲ್ಲದ ಸದಸ್ಯರು ಯಾವುದೇ ಮುನ್ಸೂಚನೆ ನೀಡದೇ ಅಥವಾ ಅಡ್ಮಿನ್ ಗಳ ಜೊತೆಗೆ ಅನಗತ್ಯವಾದ ವಾದ -ವಿವಾದಗಳನ್ನು ಮಾಡದೇ ಗ್ರೂಪಿನಿಂದ ಹೊರ ಬರಬಹುದಾಗಿದೆ. ವಾಟ್ಸಾಪ್ ಬಳಕೆದಾರರ ಖಾಸಗಿತನಕ್ಕೆ ಗೌರವ ನೀಡುವ ನಿಟ್ಟಿನಲ್ಲಿ ಈ ಹೊಸ ಸೇವೆಯನ್ನು ಅನುಷ್ಠಾನಗೊಳಿಸುತ್ತಿರುವುದಾಗಿ ವಾಟ್ಸಾಪ್ ತಿಳಿಸಿದೆ.

Gayathri SG

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 mins ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

27 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

41 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago