ಮಧ್ಯ ಪ್ರದೇಶ

ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿ ಮಾದರಿಯಾದ ಸಚಿವ

ಮಧ್ಯಪ್ರದೇಶದ ಸಚಿವರೊಬ್ಬರು ಸರ್ಕಾರಿ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿ ಮಾದರಿಯಾಗಿದ್ದಾರೆ. ಹೌದು, ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಅವರು ಗ್ವಾಲಿಯರ್‌ನ ಸರ್ಕಾರಿ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ.

ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭ ಸಚಿವರು ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಏನಾದರೂ ತೊಂದರೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾಳೆ.ಸಮಸ್ಯೆ ತಕ್ಷಣವೇ ಪರಿಹರಿಸಲು ಸಚಿವರು ಸ್ವತಃ ತಾವೇ ಟಾಯ್ಲೆಟ್ ತಿಕ್ಕಿದ್ದಾರೆ.

ನಾನು 30 ದಿನಗಳ ಸ್ವಚ್ಛತೆಗೆ ಪ್ರತಿಜ್ಞೆ ಮಾಡಿದ್ದೇನೆ. ಪ್ರತಿದಿನ ಯಾವುದಾದರೂ ಸಂಸ್ಥೆಗೆ ತೆರಳಿ ನನ್ನ ಕೈಲಾದ ಶುಚಿತ್ವ ಕಾಪಾಡುತ್ತೇನೆ. ಸ್ವಚ್ಛತೆಯ ಸಂದೇಶ ಎಲ್ಲರನ್ನೂ ತಲುಪಲಿ, ಇದರಿಂದ ಪ್ರೇರಣೆ ಪಡೆದು ಎಲ್ಲೆಡೆ ಸ್ವಚ್ಛತೆ ಇರಲಿ ಎಂದು ಮೊದಲ ಹೆಜ್ಜೆಯಾಗಿ ನಾನೇ ಶೌಚಾಲಯ ಶುಚಿಗೊಳಿಸುತ್ತೇನೆ ಎಂದಿದ್ದಾರೆ. ತದನಂತರ ಶಾಲೆಗಳು, ಸಂಸ್ಥೆಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Sneha Gowda

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

17 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

42 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago