ವಿಧಾನಸಭಾ ಚುನಾವಣೆ: ಎಚ್‌.ಡಿ ಕುಮಾರಸ್ವಾಮಿಯೇ ಕಿಂಗ್‌

ಬೆಂಗಳೂರು: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಜೆಡಿಎಸ್ ಕಿಂಗ್‌ಮೇಕರ್ ಆಗುವ ಸಾಧ್ಯತೆ ಇದೆ. ಜೆಡಿಎಸ್‌ ವಿಧಾನಸಭೆ ಚುನಾವಣೆಯಲ್ಲಿ 30ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ನಾಯಕರಲ್ಲಿದೆ. ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈಗ ‘ಕಿಂಗ್‌ಮೇಕರ್’ ಆಗುವುದಷ್ಟೇ ಅಲ್ಲ, ‘ಕಿಂಗ್’ ಆಗಲು ಸಜ್ಜಾಗಿದ್ದಾರೆ.

ಚುನಾವಣೆಯ ನಂತರ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಮನೆ ಬಾಗಿಲಿಗೆ ಬರುತ್ತವೆ ಎಂದು ಚುನಾವಣಾ ಪ್ರಚಾರದ ವೇಳೆ ಕುಮಾರಸ್ವಾಮಿ ಹೇಳಿಕೊಂಡಿದ್ದರು. ಪ್ರಸ್ತುತ ಕುಮಾರಸ್ವಾಮಿ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದು ಅಲ್ಲಿಂದಲೇ ರಾಷ್ಟ್ರೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ಬಹಿರಂಗಪಡಿಸಿವೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಇಚ್ಛೆಯಂತೆ ಜೆಡಿಎಸ್ ಕಾಂಗ್ರೆಸ್ ಜೊತೆ ಹೋಗಲು ನಿರ್ಧರಿಸಿದ್ದು, ಅವರ ಪುತ್ರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮೈತ್ರಿಗೆ ಅಡ್ಡಗಾಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜೆಡಿಎಸ್ ರಾಷ್ಟ್ರೀಯ ವಕ್ತಾರ ತನ್ವೀರ್ ಅಹ್ಮದ್, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಮೈತ್ರಿ ಕುರಿತಂತೆ ತಮ್ಮನ್ನು ಸಂಪರ್ಕಿಸಿವೆ ಎಂದು ಹೇಳಿದ್ದಾರೆ. ಆದರೆ ಕರ್ನಾಟಕದ ಒಳಿತಿಗಾಗಿ ನಾವು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Gayathri SG

Recent Posts

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

10 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

37 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

1 hour ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

3 hours ago