News Karnataka Kannada
Friday, May 10 2024
ಸಂಪಾದಕರ ಆಯ್ಕೆ

ಬೆಂಗಳೂರು: ನಿರಂತರ ವಿದ್ಯುತ್‌ ಪೂರೈಸಲು ಎಸ್ಕಾಂಗಳ ನಿರ್ಧಾರ

BENGALURU: Escoms have decided to supply uninterrupted power supply
Photo Credit : Pexels

ಬೆಂಗಳೂರು: ಈ ಬೇಸಿಗೆಯಲ್ಲಿ ಜನರಿಗೆ ವಿದ್ಯುತ್‌ ಲೋಡ್‌ಶೆಡ್ಡಿಂಗ್‌ ಚಿಂತೆ ಇಲ್ಲ. ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕಂಡು ಮುಂದಿನ ಮೂರು ತಿಂಗಳ ಅವಧಿಗೆ ವಿದ್ಯುತ್‌ ಕಡಿತವಾಗದಂತೆ ನೋಡಿಕೊಳ್ಳಲು ಎಸ್ಕಾಂಗಳು ನಿರ್ಧರಿಸಿವೆ.

ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರು ಈ ಬೇಸಿಗೆಯಲ್ಲಿ ಜನರಿಗೆ ಲೋಡ್‌ಶೆಡ್ಡಿಂಗ್‌ ರಗಳೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧರಿಸಿದ್ದಾರೆ.

ಇದೀಗ ಬೇಸಿಗೆ ಆರಂಭವಾಗಿದ್ದು, ವಿದ್ಯುತ್‌ ಬಳಕೆಯೂ ಹೆಚ್ಚಾಗಿದೆ. ಈಗಾಗಲೇ ಪರೀಕ್ಷೆಗಳು ಆರಂಭವಾಗಿವೆ. ಹಾಗೆಯೇ ರೈತರಿಗೂ ಹೆಚ್ಚಿನ ವಿದ್ಯುತ್ ಪೂರೈಸುವಅಗತ್ಯವಿದೆ. ಬೇಸಿಗೆಯಲ್ಲಿ ತಡೆರಹಿತ ವಿದ್ಯುತ್ ಪೂರೈಕೆ ಮಾಡುವಂತೆ ರೈತ ಪ್ರತಿನಿಧಿಗಳು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದರು.ಈ ಹಿನ್ನೆಲೆಯಲ್ಲಿ ಎಸ್ಕಾಂಗಳು ಮುಂದಿನ ಮೂರು ತಿಂಗಳ ಅವಧಿಗೆ ಬೇಕಾಗುವಷ್ಟು ವಿದ್ಯುತ್ ಬೇಡಿಕೆ ಕುರಿತು ಚಿಂತನೆ ನಡೆಸಿವೆ. ಹಾಗೆಯೇ ಬೇಡಿಕೆಗೆ ತಕ್ಕೆಂತೆ ವಿದ್ಯುತ್ ಖರೀದಿ ಮಾಡಿ ಗ್ರಾಹಕರಿಗೆ ಪೂರೈಸಲು ಎಸ್ಕಾಂಗಳು ನಿರ್ಧರಿಸಿವೆ.

ಮುಂದಿನ ಮೂರು ತಿಂಗಳ ಅವಧಿಯಲ್ಲಿ ವಿದ್ಯುತ್ ಬಳಕೆ ಹೆಚ್ಚಾಗಲಿದ್ದು, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳಲು ಎಸ್ಕಾಂಗಳು ನಿರ್ಧರಿಸಿವೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆ ಆಗದಂತೆ ಕ್ರಮ ಕೈಗೊಳ್ಳಲು ಇಂಧನ ಇಲಾಖೆಯು ಕೆಪಿಟಿಸಿಎಲ್ ಮತ್ತು ಸ್ಕಾಂಗಳಿಗೆ ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು