ಬಜರಂಗದಳ ವಿವಾದದ ವಿಚಾರವೇ ಅಲ್ಲ, ನಮಗೆ ಬಹುಮತ ಖಚಿತ: ಸಿದ್ದರಾಮಯ್ಯ

ಮೈಸೂರು: ನಮಗೆ ಬಹುಮತ ಬರುವುದು ಖಚಿತವಾಗಿದೆ.ಅದನ್ನೇ ಬಹುತೇಕ ಎಲ್ಲಾ ಚುನಾವಣೋತ್ತರ ಸರ್ವೇಗಳೂ ಅದನ್ನೇ ಹೇಳುತ್ತಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬುಧವಾರ ಸಂಜೆ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದರು.

ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ, ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು. ವರುಣದಲ್ಲಿ ನಾನು ಬಹಳ ಸುಲಭವಾಗಿ ಗೆಲುವು ದಾಖಲಿಸಿಲಿದ್ದೇನೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಪೈಪೋಟಿ. ಇಲ್ಲಿ ಬಿಜೆಪಿ ಎಲ್ಲೂ ಕೂಡ ನೇರವಾಗಿ ನಮ್ಮ ಜೊತೆ ಪೈಪೋಟಿ ಇಲ್ಲ ಎಂದರು.

ಸೋಮಣ್ಣಗೆ ವರುಣಾ ಜನ ಯಾಕೆ ವೋಟ್ ಹಾಕಬೇಕು? ಕ್ಷೇತ್ರಕ್ಕೆ ಅವರ ಕೊಡುಗೆ ಏನು? ಅವರು ಜಾತಿ ಕಾರ್ಡ್ ಪ್ಲೇ ಮಾಡಿದ್ದಾರೆ, ಅದು ಬಿಟ್ಡರೆ ದುಡ್ಡಿನ ರಾಜಕೀಯ ಮಾಡಿದ್ದಾರೆ. ವರುಣಾದಲ್ಲಿ ಜೆಡಿಎಸ್ ಅವರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ರೆಸಾರ್ಟ್ ರಾಜಕೀಯದ ಅವಶ್ಯಕತೆ ಇದೇಯಾ? ನಿಮ್ಮ ಶಾಸಕರನ್ನು ಹೇಗೆ ರಕ್ಷಿಸಿಕೊಳ್ಳುತೀರಿ” ಎಂದು ಪ್ರಶ್ನಿಸಿದ ರಾಷ್ಟ್ರೀಯ ಮಾಧ್ಯಮದ ವರದಿಗಾರನ ಪ್ರಶ್ನೆಗೆ ಕೆರಳಿ ಫುಲ್ ಗರಂ ಆದ ಸಿದ್ದರಾಮಯ್ಯ, ”ಎಲ್ಲರೂ ಬಹುಮತ ಕೊಡುತ್ತಿರುವಾಗ ಶಾಸಕರ ರಕ್ಷಣೆ ಎಲ್ಲಿಂದ ಬರುತ್ತದೆ. ಯಾಕೆ ಇಂತಹ ಪ್ರಶ್ನೆ ಕೇಳಿ ಸುದ್ದಿ ಹಬ್ಬಿಸುತ್ತೀರಾ? ನೀನೇನು ಬಿಜೆಪಿ ವ್ಯಕ್ತಿನಾ, ನಿನೇಗೇಕೆ ಇಂತಹ ಅನುಮಾನಗಳು ಬರಬೇಕು. ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್ ಗೆ ಬಹುಮತ ಇದೆ. ನಾವು ಬಹುಮತದೊಂದಿಗೆ ಸರ್ಕಾರ ಮಾಡುತ್ತೇವೆ. ಇಂತಹ ಪ್ರಶ್ನೆಗಳನ್ನ ಕೇಳಿ ಗೊಂದಲದ ಸುದ್ದಿಗಳನ್ನ ಹಬ್ಬಿಸಬೇಡ. ನೀನು ಇನ್ಮುಂದೆ ನನ್ನ ಮುಂದೆ ಪ್ರಶ್ನೆ ಕೇಳಲು ಬರಬೇಡ” ಎಂದರು.

Umesha HS

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago