ಕರ್ನಾಟಕದಲ್ಲಿ 8,000 ಕೋಟಿ ರೂ. ವೆಚ್ಚದ ಲಿಥಿಯಂ ಬ್ಯಾಟರಿ ಉತ್ಪಾದನಾ ಘಟಕ

ಬೆಂಗಳೂರು: ಅಮೆರಿಕ ಮೂಲದ ಇಂಟರ್‌ನ್ಯಾಶನಲ್ ಬ್ಯಾಟರಿ ಕಂಪನಿ (ಐಬಿಸಿ) ಪ್ರತಿನಿಧಿಗಳು ಕರ್ನಾಟಕದಲ್ಲಿ ಲಿಥಿಯಂ ನಿಕಲ್ ಮ್ಯಾಂಗನೀಸ್ ಕೋಬಾಲ್ಟ್ ಪ್ರಿಸ್ಮಾಟಿಕ್ ಸೆಲ್ ಉತ್ಪಾದನಾ ಉದ್ಯಮವನ್ನು ಸ್ಥಾಪಿಸಲು ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಕಂಪನಿ ಪ್ರತಿನಿಧಿಗಳು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಅವರನ್ನು ಭೇಟಿಯಾದರು.

ಖನಿಜ ಭವನದಲ್ಲಿರುವ ಕೆಯುಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಐಬಿಸಿ ಅಧಿಕಾರಿಗಳು ಕಂಪನಿಯ ವಿಶೇಷತೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಐಬಿಸಿಯು ಸುಮಾರು 8,000 ಕೋಟಿ ರೂಪಾಯಿಗಳ ಹೂಡಿಕೆ ಒಳಗೊಂಡ ನಾನ್-ಕ್ಯಾಪ್ಟಿವ್ ಗಿಗಾಫ್ಯಾಕ್ಟರಿಯನ್ನು ಸ್ಥಾಪಿಸಲು ಯೋಜಿಸಿದೆ.
ಈ ಸಂದರ್ಭ ಮಾತನಾಡಿದ ಸಚಿವ ಪಾಟೀಲ್, ‘ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಬೆಳವಣಿಗೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಲಿಥಿಯಂ ಬ್ಯಾಟರಿ ಉತ್ಪಾದನೆಯನ್ನು ಹೆಚ್ಚಿಸುವ ಅಗತ್ಯವಿದೆ. ದೇವನಹಳ್ಳಿಯ ಐಟಿಐಆರ್‌ನಲ್ಲಿ 100 ಎಕರೆ ಭೂಮಿಯನ್ನು ನೀಡುವಂತೆ ಕಂಪನಿಯು ಸರ್ಕಾರವನ್ನು ಕೋರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ನಂತರ ಭೂಮಿ ಒದಗಿಸುವುದು ಎಂದರು.
ಐಬಿಸಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ವೆಂಕಟೇಶ್ ವಲ್ಲೂರಿ ಮಾತನಾಡಿ, 2030ರ ವೇಳೆಗೆ ಭಾರತಕ್ಕೆ ಸುಮಾರು 150 ಗಿಗಾವ್ಯಾಟ್ ಸಾಮರ್ಥ್ಯದ ಲಿಥಿಯಂ ಬ್ಯಾಟರಿಗಳು ಬೇಕಾಗುತ್ತವೆ. ಪ್ರಸ್ತುತ, ದೇಶದಲ್ಲಿ ಒಟ್ಟು 1.5 ಗಿಗಾವ್ಯಾಟ್ ಸಾಮರ್ಥ್ಯದ ಲಿಥಿಯಂ ಸೆಲ್‌ಗಳ ಉತ್ಪಾದನೆಯಾಗುತ್ತಿದೆ. ಬೇಡಿಕೆ ಮತ್ತು ಪೂರೈಕೆಯ ನಡುವೆ ಭಾರಿ ಅಂತರವಿದೆ ಎಂದರು.

Umesha HS

Recent Posts

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

4 mins ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

16 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

33 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

37 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

48 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

53 mins ago