ಮಂಗಳೂರು ವಿಮಾನ ನಿಲ್ದಾಣದಲ್ಲಿ ಐಸಿಟಿ ಕಾರ್ಯಾರಂಭ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಂಟಿಗ್ರೇಟೆಡ್‌ ಕಾರ್ಗೊ ಟರ್ಮಿನಲ್‌(ಐಸಿಟಿ) ಸೋಮವಾರ ಕಾರ್ಯಾರಂಭ ಮಾಡಿದೆ.

1,891 ಚದರ ಮೀಟರ್‌ ಪ್ರದೇಶದಲ್ಲಿ ವ್ಯಾಪಿಸಿರುವ ಐಸಿಟಿ ವಾರ್ಷಿಕ 9,000 ಟನ್‌ ಅಂತಾರಾಷ್ಟ್ರೀಯ ಮತ್ತು ದೇಶೀಯ ಸರಕುಗಳನ್ನು ನಿರ್ವಹಿಸಬಹುದು. ಆರಂಭಿಕ ದಿನದಂದು ದೇಶೀಯ ಒಳಬರುವ ಮತ್ತು ಹೊರಹೋಗುವ ಸರಕುಗಳನ್ನು ನಿರ್ವಹಿಸುವ ಮೂಲಕ ವಿಮಾನ ನಿಲ್ದಾಣವು ಐಸಿಟಿಯಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಒಳಬರುವ ಮತ್ತು ಹೊರಹೋಗುವ ಸರಕುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು 10 ಟ್ರಕ್‌ ಬೇಗಳು, ಎರಡು ಡಾಕ್‌ ಲೆವೆಲ್ಲರ್‌ಗಳು ಮತ್ತು ಫೋರ್ಕ್‌ ಲಿಫ್ಟ್‌ ಸೌಲಭ್ಯ ಒದಗಿಸಿದ್ದು, ವಿಮಾನಯಾನ ಮತ್ತು ಕಸ್ಟಮ್ಸ್‌ಗೆ ಪ್ರತ್ಯೇಕ ಕಚೇರಿ ಸ್ಥಳವಿದೆ.

ವಾಯುಯಾನ ಸರಕು ನಿಯಂತ್ರಕರು ಸೂಚಿಸಿದ ಮಾನದಂಡಗಳ ಪ್ರಕಾರ ಸ್ಟ್ರಾಂಗ್‌ ರೂಮ್‌, ಕೋಲ್ಡ್‌ ಸ್ಟೋರೇಜ್‌ ಮತ್ತು ಅಪಾಯಕಾರಿ ಸರಕು ಶೇಖರಣಾ ಸೌಲಭ್ಯವನ್ನು ಸಹ ಒದಗಿಸುತ್ತದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ, ಹಣ್ಣುಗಳು, ತರಕಾರಿಗಳು, ಆಹಾರ ಪದಾರ್ಥಗಳು, ಶೀತಲೀಕೃತ ಮೀನು, ಬಿಡಿಭಾಗಗಳು ಮತ್ತು ಜವಳಿ ಸರಕುಗಳನ್ನು ನಿರ್ವಹಿಸುತ್ತದೆ. ದೇಶೀಯವಾಗಿ, ಸರಕು ಪೋಸ್ಟ್‌ ಆಫೀಸ್‌ (ಪಿಒ) ಮೇಲ್‌ ಅನ್ನು ಒಳಗೊಂಡಿದೆ. ಕೊರಿಯರ್‌ ಐಟಮ್ಸ್‌, ಹಾಳಾಗುವ ವಸ್ತುಗಳು, ಬೆಲೆಬಾಳುವ ವಸ್ತುಗಳು (ಆಭರಣಗಳು)ಔಷಧಕ್ಕಾಗಿ ರಕ್ತದ ಮಾದರಿಗಳು, ಮಾನವ ಅವಶೇಷಗಳು, ದಾಖಲೆಗಳು / ಸಾಮಾನ್ಯ ಮತ್ತು ಇ-ಕಾಮರ್ಸ್‌ ವಸ್ತುಗಳು ಮತ್ತು ಅಪಾಯಕಾರಿ ಸರಕುಗಳು ಇತ್ಯಾದಿ ನಿರ್ವಹಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Gayathri SG

Recent Posts

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

3 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

35 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

43 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

45 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 hour ago