ಮಂಗಳೂರು: ಸರ್ಕಾರಿ ನೌಕರರ ಮುಷ್ಕರ ಜನಸಮಾನ್ಯರ ಪರದಾಟ

ಮಂಗಳೂರು: ಸರ್ಕಾರಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ. 1 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘಟನೆ ತಿಳಿಸಿದೆ. ಈ ಮೂಲಕ ಚುನಾವಣೆಯ ಸರಿಹೊತ್ತಿನಲ್ಲಿ ಸರ್ಕಾರಿ ನೌಕರರು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದಲ್ಲಿ ಜನಸಾಮಾನ್ಯರು ಹೈರಾಣಗುವುದು ಶತಸಿದ್ಧ.

ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಜಾರಿಗೊಳಿವಂತೆ, ಹಳೆ ಪಿಂಚಣಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ ನಡೆಯಲಿದೆ.

ಈ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಸ್ಕರಣೆ ಬಗ್ಗೆ ಪ್ರಸ್ತಾಪ ಮಾಡದಿರುವುದು ನೌಕರರಿಗೆ ನಿರಾಸೆ ತಂದಿದೆ. ಹಳೆ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಬೇಕು ಎಂಬುದು ಸಂಘಟನೆ ಬೇಡಿಕೆಯಾಗಿದೆ. ಅದು ಜಾರಿಯಾಗುವರೆಗೂ ಸರ್ಕಾರಿ ನೌಕರರೆಲ್ಲರೂ ಕರ್ತವ್ಯಕ್ಕೆ ಹಾಜರಾಗದೆ ಮನೆಯಲ್ಲೇ ಇರಲಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲೂ ಫೋಟೊ, ಸ್ಟೇಟಸ್‌ನಲ್ಲಿ ಭಿತ್ತಿಪತ್ರಗಳನ್ನು ಹಾಕಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ನೌಕರರು ವಿವರಿಸಿದ್ದಾರೆ.

ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವುಂಟಾಗಲಿದೆ. ಮುಷ್ಕರಕ್ಕೆ ಗ್ರಾಮ ಪಂಚಾಯಿತಿ ಸಿಬ್ಭಂದಿ, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಬೆಂಬಲ ಸೂಚಿಸಿದ್ದಾರೆ. ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿಯವರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರುಹಾಜರಾಗುತ್ತಿದ್ದಾರೆ. ಸಚಿವಾಲಯ ನೌಕರರ ಸಂಘ, ಅರಣ್ಯ ಇಲಾಖೆ ನೌಕರರು, ವಿವಿಧ ನಿಗಮ ಮಂಡಳಿಗಳ ನೌಕರರು ಭಾಗವಹಿಸುತ್ತಿದ್ದು, ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿನ ವಾಹನಗಳ ನೋಂದಣಿ, ಪರವಾನಗಿ ವಿತರಣೆ ಕಾರ್ಯಗಳು ಸ್ಥಗಿತವಾಗಲಿವೆ. ಒಟ್ಟಿನಲ್ಲಿ ಚುನಾವಣೆ ಸಮಯವಾದ್ದರಿಂದ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿ ವೋಟ್‌ ಬ್ಯಾಂಕ್‌ ಗಟ್ಟಿಗೊಳಿಸುವಲ್ಲಿ ನಿರತರಾಗಿದ್ದಾರೆ. ಇತ್ತ ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಇದೇ ಸಕಾಲ ಎಂದು ಭಾವಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಸರ್ಕಾರ ಮತ್ತು ನೌಕರರ ಹೋರಾಟ ತಂತ್ರ ಪ್ರತಿ ತಂತ್ರದಲ್ಲಿ ಜನಸಾಮಾನ್ಯರು ನರಳುವಂತಾಗುವುದು ನಿಶ್ಚಿತ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago