ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸರ್ಕಸ್‌, ಇಂದು ಫೈನಲ್‌ ಸಾಧ್ಯತೆ

ನವದೆಹಲಿ: ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಇದೀಗ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದೆ. ಸಿಎಂ, ಡಿಸಿಎಂ ಸೇರಿ ಒಟ್ಟು 10 ಮಂದಿ ಈಗ ಸ್ಥಾನ ಪಡೆದಿದ್ದಾರೆ. ಇನ್ನು ಉಳಿದಿರುವ 23 ಸ್ಥಾನಗಳನ್ನು ಹಂಚಿಕೆ ಮಾಡಬೇಕಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ದೆಹಲಿಯಲ್ಲಿ ಭರ್ಜರಿ ಪೈಪೋಟಿ ನಡೆಯುತ್ತಿದೆ. ತಮ್ಮ ಬೆಂಬಲಿಗ ಶಾಕಸರಿಗೆ ಮಂತ್ರಿ ಪಟ್ಟ ಕೊಡಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭರ್ಜರಿ ಕಸರತ್ತು ನಡೆಸಿದ್ದು, ದೆಹಲಿಯಲ್ಲಿ ಸಂಪುಟ ಸಮುದ್ರ ಮಂಥನವೇ ನಡೆಯುತ್ತಿದೆ. ಕಾಂಗ್ರೆಸ್ ಜೋಡೆತ್ತುಗಳಾದ ಸಿದ್ದರಾಮಯ್ಯ ಮತ್ತು ಡಿಕೆಶಿ ಸಂಪುಟ ಕಗ್ಗಂಟು ಬಗೆಹರಿಸಲು ದೆಹಲಿ ತಲುಪಿದ್ದಾರೆ.

ಸಿದ್ದರಾಮಯ್ಯಗೂ ಮೊದಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ದೆಹಲಿಯ ಲೋದಿ ಎಸ್ಟೇಟ್​ನಲ್ಲಿರುವ ವೇಣುಗೋಪಾಲ್ ಮನೆಗೆ ಡಿಕೆಶಿ ಶಿವಕುಮಾರ್, ಡಿ.ಕೆ ಸುರೇಶ್ ಭೇಟಿ ನೀಡಿ ಸಂಪುಟ ವಿಸ್ತರಣೆ ಸಂಬಂಧ ಬಿಸಿಬಿಸಿ ಚರ್ಚೆ ನಡೆಸಿದ್ದಾರೆ. ವೇಣುಗೋಪಾಲ್ ಮನೆಗೆ ಡಿಕೆ ಶಿವಕುಮಾರ್ ಬಂದು ಹೋಗುತ್ತಿದ್ದಂತೆಯೇ ಅಲ್ಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ತಡರಾತ್ರಿವರೆಗೆ ವೇಣುಗೋಪಾಲ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಅತ್ತ ಮಲ್ಲಿಕಾರ್ಜುನ ಖರ್ಗೆ ಜೊತೆಗೂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದಾರೆ. ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ಎರಡೂ ಇಂದೇ ಅಂತಿಮ ಆಗುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ಆದ್ರೆ ಶುಕ್ರವಾರವೇ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.

Umesha HS

Recent Posts

ಮಕ್ಕಳು ಆಟವಾಡುತ್ತಿದ್ದಾಗ ಬಾಂಬ್‌ ಸ್ಪೋಟ : ಓರ್ವ ಸಾವು, ಇಬ್ಬರಿಗೆ ಗಾಯ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಮಕ್ಕಳ ಗುಂಪೊಂದು ಆಟವಾಡುತ್ತಿರುವಾಗ ಬಾಂಬ್‌ ಸ್ಪೋಟಗೊಂಡಿದ್ದು ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರಗೊಂಡಿದ್ದಾರೆ.ಹೂಗ್ಲಿ ಜಿಲ್ಲೆಯ ಪಾಂಡುವಾ ಕೊಳದ…

3 mins ago

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

7 mins ago

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

20 mins ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

21 mins ago

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಬಿದ್ದ ಚೆಂಡು : ಬಾಲಕ ಸಾವು

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪುಣೆಯಲ್ಲಿ…

22 mins ago

ಮತದಾನಕ್ಕೂ ಮುನ್ನ ದಿನವೇ ಅಹಮದಾಬಾದ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

ಗುಜರಾತ್‌ನಲ್ಲಿ ನಾಳೆ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಅಹಮದಾಬಾದ್‌ನ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದಿ.

33 mins ago