News Karnataka Kannada
Saturday, April 27 2024
ಸಂಪಾದಕರ ಆಯ್ಕೆ

ಹೊಸದಿಲ್ಲಿ: 18 ಔಷಧ ಕಂಪನಿಗಳ ಪರವಾನಗಿ ರದ್ದು

New Delhi: Licences of 18 pharmaceutical companies cancelled
Photo Credit : News Kannada

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಕಳಪೆ ಗುಣಮಟ್ಟದ ಔಷಧಗಳ ಹಿನ್ನೆಲೆಯಲ್ಲಿ ದೇಶದ 18 ಫಾರ್ಮಾ ಕಂಪನಿಗಳ ಪರವಾನಗಿಯನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿದೆ.

ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಅವರು 76 ಕಂಪನಿಗಳನ್ನು ಪರಿಶೀಲಿಸಿದ್ದು 18 ಕಂಪನಿಗಳ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. 26 ಔಷಧಗಳ ಕಳಪೆ ಗುಣಮಟ್ಟದ ಬಗ್ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಉನ್ನತ ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಮೂರು ಫಾರ್ಮಾ ಕಂಪನಿಗಳ ಉತ್ಪನ್ನ ಅನುಮತಿಯನ್ನೂ ಕೇಂದ್ರ ರದ್ದುಗೊಳಿಸಿದೆ.

ಕೇಂದ್ರ ಮತ್ತು ರಾಜ್ಯಗಳ ಜಂಟಿ ಕಾರ್ಯಾಚರಣೆಯಲ್ಲಿ 20 ರಾಜ್ಯಗಳಲ್ಲಿರುವ ಫಾರ್ಮಾ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ‘ನಾಟ್ ಆಫ್ ಸ್ಟ್ಯಾಂಡರ್ಡ್ ಕ್ವಾಲಿಟಿ’ ಔಷಧದ ಉತ್ಪಾದನೆಯನ್ನು ನಿಲ್ಲಿಸಲು ಮತ್ತು ದೇಶದಾದ್ಯಂತ ಔಷಧದ ಉತ್ತಮ ಉತ್ಪಾದನಾ ಅಭ್ಯಾಸಗಳನ್ನು (ಜಿಎಂಪಿ) ಖಚಿತಪಡಿಸಿಕೊಳ್ಳಲು ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶ, ಬಿಹಾರ, ದೆಹಲಿ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಪುದುಚೇರಿ, ಪಂಜಾಬ್, ರಾಜಸ್ಥಾನ, ತೆಲಂಗಾಣ, ಸಿಕ್ಕಿಂನಲ್ಲಿ ಕಳೆದ 15 ದಿನಗಳಿಂದ ಡಿಸಿಜಿಐ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು