News Karnataka Kannada
Sunday, April 28 2024
ಸಂಪಾದಕರ ಆಯ್ಕೆ

ನವದೆಹಲಿ: ಲೋಕಸಭೆ ಚುನಾವಣೆ ಕುರಿತು ಪ್ರಧಾನಿ ಮೋದಿ ಚರ್ಚೆ

NEW DELHI: Prime Minister Narendra Modi discusses the Lok Sabha elections
Photo Credit : News Kannada

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು, ಈ ಸಂದರ್ಭ 2024 ರ ಲೋಕಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನೂತನ ಸಂಸತ್ ಭವನ ಉದ್ಘಾಟನೆ ಬಳಿಕ ಸಭೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಸಿದ್ಧತೆಗಳ ಕುರಿತು ಪ್ರಧಾನಿ ಮೋದಿ ಅವರು ಸಿಎಂ ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಪ್ರಧಾನಿ ಮೋದಿ ಅವರು ಹೊಸ ಸಂಸತ್ತಿನ ಕುರಿತು ಮಾತನಾಡಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕೈಗೊಂಡಿರುವ ಪ್ರಮುಖ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಧಾನಿ ಮೋದಿಯವರಿಗೆ ತಿಳಿಸಿದರು. ಸಭೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗುಜರಾತ್ ಸಿಎಂ ಭೂಪೇಂದ್ರ ಪಟೇಲ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ತ್ರಿಪುರ ಸಿಎಂ ಮಾಣಿಕ್ ಸಹಾ, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು