News Karnataka Kannada
Monday, April 29 2024
ಸಂಪಾದಕರ ಆಯ್ಕೆ

ಪ್ರಧಾನಿ ನರೇಂದ್ರ ಮೋದಿ ನನ್ನ ನಿಜವಾದ ಸ್ನೇಹಿತ: ಪುಟಿನ್‌

PM Narendra Modi is my true friend: Putin
Photo Credit : IANS

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಉತ್ತಮ ಸ್ನೇಹಿತ ಎಂದು ಕರೆದಿದ್ದಾರೆ. ಅಲ್ಲದೆ ಮೇಕ್‌ ಇನ್‌ ಇಂಡಿಯಾ ಉಪಕ್ರಮವನ್ನು ಶ್ಲಾಘಿಸಿದ್ದಾರೆ.

ಮಾಸ್ಕೋದಲ್ಲಿ ಏಜೆನ್ಸಿ ಫಾರ್ ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್ (ಎಎಸ್‌ಐ) ಯ ಆರ್ಥಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪುಟಿನ್‌ “ಭಾರತದಲ್ಲಿರುವ ನಮ್ಮ ದೊಡ್ಡ ಸ್ನೇಹಿತ, ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ವರ್ಷಗಳ ಹಿಂದೆಯೇ ‘ಮೇಕ್ ಇನ್ ಇಂಡಿಯಾ’ ಉಪಕ್ರಮ ಆರಂಭಿಸಿದ್ದು. ಇದು ಭಾರತದ ಆರ್ಥಿಕತೆಯ ಮೇಲೆ ನಿಜವಾಗಿಯೂ ಪ್ರಭಾವಶಾಲಿ ಪರಿಣಾಮ ಬೀರಿದೆ. ಇಂತಹ ಉಪಕ್ರಮಗಳನ್ನು ನಾವು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ.

ಭಾರತದ ಕೆಲವು ಯೋಜನೆಗಳನ್ನು ರಷ್ಯಾದಲ್ಲೂ ಅಳವಡಿಸಿಕೊಳ್ಳುವುದರಿಂದ ಏನಾದರೂ ಹಾನಿಯಾಗಬಹುದೇ ಎಂದು ರಷ್ಯಾದ ಸಚಿವರು ಕಳವಳ ವ್ಯಕ್ತಪಡಿಸಿದ್ದರು. ಆಗ ಪುಟಿನ್ ಮಾತನಾಡಿ, ಭಾರತವು ಹಲವು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಎಂಬ ಯೋಜನೆ ಆರಂಭಿಸಿತ್ತು, ಈ ಯೋಜನೆಯು ಭಾರತದ ಆರ್ಥಿಕತೆಯ ಮೇಲೆ ತನ್ನ ಪರಿಣಾಮವನ್ನು ತೋರಿಸಿದೆ, ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಅದರಿಂದ ಯಾವುದೇ ಹಾನಿಯಿಲ್ಲ ಎಂದು ಹೇಳಿದ್ದಾರೆ. ವ್ಲಾಡಿಮಿರ್ ಪುಟಿನ್ ರಷ್ಯಾದಲ್ಲಿ ದೇಶೀಯ ಉತ್ಪನ್ನಗಳು ಮತ್ತು ಬ್ರ್ಯಾಂಡ್ ಗಳನ್ನು ಪ್ರೋತ್ಸಾಹಿಸಲು ಭಾರತದ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು