News Karnataka Kannada
Monday, April 29 2024
ಸಂಪಾದಕರ ಆಯ್ಕೆ

ಕೈ ಒಳಬೇಗುದಿ: ‌ಆಗಸ್ಟ್‌ 2ರಂದು ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ರಾಹುಲ್‌ ಸಭೆ

Rahul Gandhi to hold meeting with senior Congress leaders on August 2
Photo Credit : IANS

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ಪಕ್ಷದ ಶಾಸಕರು ತಮ್ಮದೇ ಸರ್ಕಾರದ ಸಚಿವರ ವಿರುದ್ಧ ಧ್ವನಿ ಎತ್ತಿದ್ದಾರೆ. ಈ ನಡುವೆಯೇ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ರಾಜ್ಯದ ಸಚಿವರು ಆಗಸ್ಟ್ 2 ರಂದು ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕರ್ನಾಟಕದ ಜನತೆಗೆ ಕಾಂಗ್ರೆಸ್ ನೀಡಿರುವ ಭರವಸೆಗಳನ್ನು ಈಡೇರಿಸಲು ಸಾಮೂಹಿಕವಾಗಿ ಕೆಲಸ ಮಾಡುವಂತೆ ರಾಹುಲ್ ಗಾಂಧಿ ಅವರು ಸಚಿವರಿಗೆ ಸೂಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಎಲ್ಲಾ ಸಚಿವರು, ಶಾಸಕರು, ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಇದ್ದು, ಜನರಿಗಾಗಿ ದುಡಿಯುತ್ತೇವೆ ಎಂಬ ಸಂದೇಶವನ್ನು ರಾಜ್ಯದ ಜನತೆಗೆ ನೀಡುವಂತೆಯೂ ಕಾಂಗ್ರೆಸ್ ಮುಖಂಡರು, ಸಚಿವರಿಗೆ ರಾಹುಲ್‌ ಸಭೆಯಲ್ಲಿ ಸೂಚಿಸಲಿದ್ದಾರೆ.

ಸಭೆಯಲ್ಲಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರೊಂದಿಗೂ ರಾಹುಲ್‌ ಮಾತುಕತೆ ನಡೆಸಲಿದ್ದಾರೆ.

ಜುಲೈ 27 ರಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ (ಸಿಎಲ್‌ಪಿ) ಪಕ್ಷದ ಶಾಸಕರು ತಮ್ಮ ಕ್ಷೇತ್ರಗಳ ಕಾಮಗಾರಿಗಳಿಗೆ ಆದ್ಯತೆ ನೀಡದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಸವಾಲು ಹಾಕಿದ್ದು, ಅವರ ವಿರುದ್ಧ ಬಂಡಾಯದ ಬಾವುಟ ಹಾರಿಸುವ ಮೂಲಕ ತಮ್ಮ ಅಸಮಾಧಾನ ಬಹಿರಂಗವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು